ನೆಲಮಂಗಲ: ಕ್ರೀಡಾಕೂಟಗಳು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಉಲ್ಲಾಸ ಮತ್ತು ಪರಸ್ಪರ ಬಾಂಧವ್ಯವನ್ನು ವೃದ್ಧಿಸುತ್ತವೆ. ಪೌರಕಾರ್ಮಿಕರ ಹಿತದೃಷ್ಟಿಯಿಂದ ಇಂತಹ ಕಾರ್ಯಕ್ರಮಗಳಿಗೆ ನಗರಸಭೆ ಸದಾ ಪ್ರೋತ್ಸಾಹ ನೀಡಲಿದೆ ಎಂದು ನಗರಸಭೆ ಅಧ್ಯಕ್ಷ ಎನ್.ಗಣೇಶ್ ತಿಳಿಸಿದರು

ನೆಲಮಂಗಲ: ಕ್ರೀಡಾಕೂಟಗಳು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಉಲ್ಲಾಸ ಮತ್ತು ಪರಸ್ಪರ ಬಾಂಧವ್ಯವನ್ನು ವೃದ್ಧಿಸುತ್ತವೆ. ಪೌರಕಾರ್ಮಿಕರ ಹಿತದೃಷ್ಟಿಯಿಂದ ಇಂತಹ ಕಾರ್ಯಕ್ರಮಗಳಿಗೆ ನಗರಸಭೆ ಸದಾ ಪ್ರೋತ್ಸಾಹ ನೀಡಲಿದೆ ಎಂದು ನಗರಸಭೆ ಅಧ್ಯಕ್ಷ ಎನ್.ಗಣೇಶ್ ತಿಳಿಸಿದರು.

ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕ್ರೀಡಾಕೂಟಕ್ಕೆ ಜ್ಯೋತಿ ಬೆಳಗಿಸಿ ಮಾತನಾಡಿದ ಅವರು, ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ದಿನನಿತ್ಯದ ಕೆಲಸದ ಒತ್ತಡದ ನಡುವೆಯೂ ಪೌರಕಾರ್ಮಿಕರು ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕು ಎಂದರು.

ನಗರಸಭೆ ಸದಸ್ಯ ಸುನೀಲ್ ಮೂಡ್ ಮಾತನಾಡಿ, ಪೌರಕಾರ್ಮಿಕರು ನಗರ ಸ್ವಚ್ಛತೆ ನಿಜವಾದ ಶ್ರಮಜೀವಿಗಳು. ಬಿಸಿಲು, ಮಳೆ ಎನ್ನದೆ ಪ್ರತಿದಿನ ಸಾರ್ವಜನಿಕರ ಆರೋಗ್ಯ ಮತ್ತು ನಗರದ ಸ್ವಚ್ಛತೆಗಾಗಿ ಶ್ರಮಿಸುತ್ತಿರುವ ಅವರ ಸೇವೆ ಶ್ಲಾಘನೀಯ. ಅವರ ಕಾರ್ಯವನ್ನು ಗೌರವಿಸುವುದರ ಜೊತೆಗೆ ಅವರಿಗೆ ಉತ್ತಮ ಆರೋಗ್ಯ, ಸಂತೋಷ ಮತ್ತು ಉತ್ಸಾಹ ನೀಡುವ ಇಂತಹ ಕ್ರೀಡಾಕೂಟಗಳು ನಿರಂತರ ನಡೆಯಬೇಕು ಎಂದರು.

ಈ ವೇಳೆ ನಗರಸಭೆ ಮಾಜಿ ಅಧ್ಯಕ್ಷೆ ಪೂರ್ಣಿಮಾ, ಸದಸ್ಯ ಶಿವಕುಮಾರ್, ನಗರಸಭೆ ಆಯುಕ್ತ ಗಂಗಾಧರ್, ವ್ಯವಸ್ಥಾಪಕ ಮುಮ್ತಾಜ್ ಪಾಷಾ, ಸುಧಾಕರ್ ಉಮೇಶ್, ರವಿ, ನಾರಾಯಣಸ್ವಾಮಿ, ಕನ್ಯಾ, ಮಂಜುನಾಥ್, ಅಂಕಯ್ಯ, ಪೆದ್ದಣ್ಣ ಇತರರು ಉಪಸ್ಥಿತರಿದ್ದರು.

ಪೋಟೋ - 3ಕೆಎನ್ಎಲ್ಎಂ1-

ನೆಲಮಂಗಲದಲ್ಲಿ ಪೌರಕಾರ್ಮಿಕರ ಕ್ರೀಡಾಕೂಟಕ್ಕೆ ನಗರಸಭೆ ಅಧ್ಯಕ್ಷ ಎನ್.ಗಣೇಶ್ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ನಗರಸಭೆ ಮಾಜಿ ಅಧ್ಯಕ್ಷೆ ಪೂರ್ಣಿಮಾ, ಸದಸ್ಯ ಶಿವಕುಮಾರ್, ನಗರಸಭೆ ಆಯುಕ್ತ ಗಂಗಾಧರ್, ವ್ಯವಸ್ಥಾಪಕ ಮುಮ್ತಾಜ್ ಪಾಷಾ ಇತರರು ಉಪಸ್ಥಿತರಿದ್ದರು.