ಸಾರಾಂಶ
ಮಾಗಡಿ: ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳಿಗೆ ಆದ್ಯತೆ ನೀಡಿ, ಮಕ್ಕಳ ಸಂಖ್ಯೆ ಹೆಚ್ಚಿಸಲು ಎಲ್ಲರ ಸಹಕಾರ ಅತಿ ಮುಖ್ಯ, ಸರ್ಕಾರಿ ಶಾಲೆಗಳಿಗೆ ದಾನಿಗಳ ಸಹಕಾರಕ್ಕೆ ಧನ್ಯವಾದ ತಿಳಿಸುತ್ತಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.
ತಾಲೂಕಿನ ಗುಡೇಮಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಿಎಸ್ಆರ್ ನಿಧಿಯಲ್ಲಿ ನಿರ್ಮಿಸಿರುವ ನೂತನ ಶಾಲಾ ಕೊಠಡಿ, ಹಿರಿಯ ವಿದ್ಯಾರ್ಥಿಗಳ ಸಮಾಗಮ ಹಾಗೂ ಶಾಲಾ ಅಂಗಳದಿ ಚಿಣ್ಣರ ಕಲರವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಒಸಾಟ್ ಹಾಗೂ ಸಿನಾಪ್ಸಿಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಿಎಸ್ಆರ್ ನಿಧಿ 60 ಲಕ್ಷ ವೆಚ್ಚದಲ್ಲಿ 4 ಸುಸಜ್ಜಿತ ಕಟ್ಟಡ ಹಾಗೂ ಮಕ್ಕಳಿಗೆ ಡೆಸ್ಕ್ ನೀಡುವ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಸೌಲಭ್ಯ ಒದಗಿಸಿದ್ದಾರೆ. ದಾನಿಗಳ ನೆರವಿನಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚಿಸಬೇಕು. ಪೋಷಕರಿಗೆ ಯಾವುದೇ ರೀತಿಯ ಹೊರೆ ಬೆಳೆದ ರೀತಿ ಗುಣಮಟ್ಟದ ಶಿಕ್ಷಣ ಮಕ್ಕಳಿಗೆ ಸಿಕ್ಕಾಗ ಮಾತ್ರ ಪೋಷಕರು ನೆಮ್ಮದಿಯಾಗಿ ಇರಲು ಸಾಧ್ಯ. ಈ ಹಿನ್ನಲೆಯಲ್ಲಿ ದಾನಿಗಳ ಸಹಕಾರಕ್ಕೆ ಅಭಿನಂದಿಸಲಾಗುತ್ತದೆ. ಜಿಲ್ಲೆಯಲ್ಲಿ 23 ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ ಎಂದು ತಿಳಿಸಿದರು.ಶಾಸಕ ಶ್ರೀನಿವಾಸ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಪೋಷಕರು ಹೆಚ್ಚಿನ ಆಸಕ್ತಿ ತೋರಬೇಕು. ದಾನಿಗಳ ನೆರವಿನಿಂದ ಎಲ್ಲಾ ರೀತಿಯ ಸೌಲಭ್ಯಗಳು ಸರ್ಕಾರಿ ಶಾಲೆಯಲ್ಲಿ ಸಿಗುತ್ತಿರುವುದರಿಂದ ಪೋಷಕರು ಖಾಸಗಿ ಶಾಲೆಯ ವ್ಯಾಮೋಹ ಬಿಡಬೇಕು. ಗುಣಮಟ್ಟದ ಕೊಠಡಿಗಳನ್ನು ನಿರ್ಮಿಸಿಕೊಟ್ಟಿರುವ ಸಿನಾಪ್ಸಿಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ದಾನಿಗಳಿಗೆ ಧನ್ಯವಾದ ತಿಳಿಸಲಾಗುತ್ತದೆ ಎಂದರು.
ಇದೇ ವೇಳೆ ಕಟ್ಟಡ ದಾನಿಗಳಾದ ಚಂದ್ರಶೇಖರ್, ಸುಬ್ರಹ್ಮಣ್ಯಸ್ವಾಮಿ, ಗುತ್ತಿಗೆದಾರ ಸಂದೀಪ್ ಅವರನ್ನು ಸಚಿವರು ಹಾಗೂ ಶಾಲಾ ಆಡಳಿತ ವತಿಯಿಂದ ಸನ್ಮಾನಿಸಲಾಯಿತು.ಗ್ರಾಪಂ ಅಧ್ಯಕ್ಷೆ ವರಲಕ್ಷ್ಮಿ, ಉಪಾಧ್ಯಕ್ಷೆ ಗೌರಮ್ಮ, ಅಕ್ಷರ ದಾಸೋಹದ ಗಂಗಾಧರಯ್ಯ, ಮಾಜಿ ಅಧ್ಯಕ್ಷೆ ದಿವ್ಯ ಮೂರ್ತಿ, ಸದಸ್ಯರಾದ ಶಾಂತ ಮಲ್ಲಯ್ಯ, ನಾಗರಾಜು, ಬ್ಲಾಕ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ, ಜಿಪಂ ಮಾಜಿ ಸದಸ್ಯ ರಂಗಸ್ವಾಮಿ, ಸಿರಿದಂತೆ ಶಾಲಾ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.ಪೋಟೋ 1ಮಾಗಡಿ2: ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಹಾಗೂ ಚಿಣ್ಣರ ಕಲರವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ ಉದ್ಘಾಟಿಸಿದರು, ಶಾಸಕ ಶ್ರೀನಿವಾಸ್ ಇತರರಿದ್ದರು.