ಸಾರಾಂಶ
ಚಾಮರಾಜನಗರ ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷ ರಾಗಿ ಎಚ್.ಎಂ.ಮಹದೇವಶೆಟ್ಟಿ, ಉಪಾಧ್ಯಕ್ಷರಾಗಿ ಸುಮಾ ಅವಿರೋಧವಾಗಿ ಆಯ್ಕೆಯಾದರು.
ಸಂಘದ ಅಧ್ಯಕ್ಷ ಮಹದೇವಶೆಟ್ಟಿ ಭರವಸೆಕನ್ನಡಪ್ರಭ ವಾರ್ತೆ ಚಾಮರಾಜನಗರ
ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷ ರಾಗಿ ಎಚ್.ಎಂ.ಮಹದೇವಶೆಟ್ಟಿ, ಉಪಾಧ್ಯಕ್ಷರಾಗಿ ಸುಮಾ ಅವಿರೋಧವಾಗಿ ಆಯ್ಕೆಯಾದರು.ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಬಂಗಾರಶೆಟ್ಟಿ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಕ್ರಮವಾಗಿ ಮಹದೇವಶೆಟ್ಟಿ, ಸುಮಾ ನಾಮಪತ್ರ ಸಲ್ಲಿಸಿದರು. ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಶಿಲ್ಪಶ್ರೀ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಯನ್ನು ಘೋಷಿಸಿದರು.
ಸಂಘದ ಅಧ್ಯಕ್ಷ ಮಹದೇವಶೆಟ್ಟಿ ಮಾತನಾಡಿ, ಸಂಘದ ಎಲ್ಲಾ ನಿರ್ದೇಶಕರು ಒಮ್ಮತದಿಂದ ಅವಿರೋಧವಾಗಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಆಭಾರಿಯಾಗಿದ್ದೇನೆ. ಎಲ್ಲರ ವಿಶ್ವಾಸದೊಂದಿಗೆ ಸಂಘವನ್ನು ಅಭಿವೃದ್ಧಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.ಗ್ರಾಮದಲ್ಲಿ ಸಹಕಾರ ಸಂಘ ಬೆಳೆದಷ್ಟು ರೈತರು ಅಭಿವೃದ್ಧಿಯಾಗಲಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರದಿಂದ ಅನುದಾನವನ್ನು ಹೆಚ್ಚಿನ ರೀತಿಯಲ್ಲಿ ಬಳಸಿಕೊಳ್ಳುವ ಜೊತೆಗೆ ಸಂಘದಿಂದ ಹೆಚ್ಚಿನ ರೀತಿಯಲ್ಲಿ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಬೆಳೆ ಸಾಲ ಸೌಲಭ್ಯ ಕೊಡಿಸುವುದು ನಮ್ಮ ಮೊದಲ ಅದ್ಯತೆಯಾಗಿದೆ. ಅಲ್ಲದೆ ವಾಹನ ಸೌಲಭ್ಯ ನೀಡಲಾಗುವುದು ಎಂದರು.
ಸಂಘದ ನಿರ್ಗಮಿತ ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಎಂ.ಬಂಗಾರಶೆಟ್ಟಿ, ನಿರ್ದೇಶಕರಾದ ಎಸ್.ಪುಟ್ಟರಾಜಶೆಟ್ಟಿ, ಗಿರಿಜಮ್ನ, ಪಿ.ರವಿಕುಮಾರ್, ಎಂ.ರವಿಕುಮಾರ್, ಬಂಗಾರ ನಾಯಕ, ಷಫಿಅಹಮ್ಮದ್, ಸಾವಿತ್ರಿ ಸಭೆಯಲ್ಲಿ ರಾಜಣ್ಣ ಸಿದ್ದರಾಜು, ಜಿಪಂ ಮಾಜಿ ಅಧ್ಯಕ್ಷೆ ಕಾವೇರಿ ಶಿವಕುಮಾರ್, ಮಾಜಿ ಸದಸ್ಯ ರಮೇಶ್, ಎಪಿಎಂಸಿ ಅಧ್ಯಕ್ಷ ಸೋಮೇಶ್, ಗ್ರಾ.ಪಂ.ಅಧ್ಯಕ್ಷ ಮಂಜು, ತಾ.ಪಂ.ಮ ಮಾಜಿ ಸದಸ್ಯ ಕುಮಾರ್ ನಾಯಕ್, ಗ್ರಾ.ಪಂ.ಮಾಜಿ ಸದಸ್ಯ ನಾಗರಾಜು, ಮುಖಂಡರಾದ ಅಯ್ಯೂಬ್ ಪಾಷ, ಜ.ಸುರೇಶ್ ನಾಗ್, ಕೃಷ್ಣನಾಯಕ, ಎಚ್.ಎಂ.ಶಿವಣ್ಣ ಹಾಜರಿದ್ದರು.