ಶಿಕ್ಷಣ, ಆರೋಗ್ಯ, ಕುಡಿವ ನೀರಿಗೆ ಆದ್ಯತೆ: ಶಾಸಕ ಬಿ.ದೇವೇಂದ್ರಪ್ಪ

| Published : Jan 27 2024, 01:21 AM IST

ಸಾರಾಂಶ

ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಶಿಕ್ಷಣ, ಆರೋಗ್ಯ, ಆಹಾರ, ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಂದಿನ ಗುರಿ. ಮೀಸಲಾತಿ, ಐಕ್ಯತೆ, ಸಮಾನತೆ ಸಂವಿಧಾನದಲ್ಲಿ ಎಲ್ಲರಿಗೂ ನೀಡಲಾಗಿದೆ.

ಕನ್ನಡಪ್ರಭ ವಾರ್ತೆ ಜಗಳೂರು

ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಶಿಕ್ಷಣ, ಆರೋಗ್ಯ, ಆಹಾರ, ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಭರವಸೆ ನೀಡಿದರು.

ಪಟ್ಟಣದ ಬಯಲು ರಂಗಮಂದಿರ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಂದಿನ ಗುರಿ. ಮೀಸಲಾತಿ, ಐಕ್ಯತೆ, ಸಮಾನತೆ ಸಂವಿಧಾನದಲ್ಲಿ ಎಲ್ಲರಿಗೂ ನೀಡಲಾಗಿದೆ. ಭಾರತ ಮಾತೆಗೆ ನೋವು ಆಗದ ರೀತಿ ನಾವೆಲ್ಲರೂ ನಡೆದುಕೊಳ್ಳಬೇಕು. ಮುಂಬರುವ ಪೀಳಿಗೆಗೆ ಸಂವಿಧಾನದ ಬಗ್ಗೆ ನಾವು ಎಲ್ಲರೂ ತಿಳಿಸಿಕೊಡಬೇಕು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಬಡವರಿಗೆ ಐದು ಗ್ಯಾರಂಟಿಗಳ ನೀಡಿದೆ. ಈ ವರ್ಷ ತಾಲೂಕಿನಲ್ಲಿ ಬರಗಾಲದಿಂದಾಗಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ ಮಾತನಾಡಿ ಎಲ್ಲರೂ ಸಮಾನತೆಯಿಂದ ಇರುವುದಕ್ಕೆ ಮುಖ್ಯ ಕಾರಣ ಸಂವಿಧಾನ. ಸ್ವಾತಂತ್ರ್ಯ ಸಮಾನತೆ ನಮ್ಮಲ್ಲಿರುವ ಮೌಲ್ಯಗಳು ಆಗಿವೆ. ಹಲವು ಯೋಜನೆಗಳ ಜನರ ಮನೆಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ ಎಂದರು. ಈ ಸಮಯದಲ್ಲಿ ಹಲವು ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ನೆರವೇರಿದವು.

ಧ್ವಜಾರೋಹಣಕ್ಕೂಮೊದಲು ಅಂಬೇಡ್ಕರ್ ಸರ್ಕಲ್ ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಶಾಸಕ ಬಿ.ದೇವೇಂದ್ರಪ್ಪ ಸೇರಿ ಗಣ್ಯರು ಹೂವಿನ ಹಾರ ಹಾಕಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಇಒ ಕರಿಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಲಮೂರ್ತಿ, ಮುಖ್ಯಾಧಿಕಾರಿ ಲೋಕ್ಯ ನಾಯ್ಕ್, ಪೊಲೀಸ್ ನಿರೀಕ್ಷಕರಾದ ಶ್ರೀನಿವಾಸರಾವ್, ಎನ್ ಜಿಒ ಅಧ್ಯಕ್ಷ ಸಿ.ಬಿ.ನಾಗರಾಜ್, ಕೆ.ಪಿ.ಪಾಲಯ್ಯ, ಬಿ.ಮಹೇಶ್ವರಪ್ಪ , ಪಟ್ಟಣ ಪಂಚಾಯತಿ ಸದಸ್ಯರಾದ ತಿಪ್ಪೇಸ್ವಾಮಿ, ಷಕೀಲ್ ಅಹಮದ್, ಬಿ.ಟಿ.ರವಿ, ಬಿ.ಕೆ ರಮೇಶ್, ಎಸ್ ಮಂಜುನಾಥ್, ದೇವರಾಜ್, ಕೆಎಸ್ ನವೀನ್ ಕುಮಾರ್, ಪಿ ಲಲಿತಾ , ಲುಕ್ಕಾನ್ ಉಲ್ಲಾ ಖಾನ್, ಸೇರಿ ವಿವಿಧ ತಾಲೂಕು ಅನುಷ್ಠಾಧಿಕಾರಿಗಳು, ಸಂಘ ಸಂಸ್ಥೆಯ ಮುಖ್ಯಸ್ಥರಿದ್ದರು.