ಈ ಹಿಂದೆ ಶೇ.67ರಷ್ಟಿದ್ದ ಫಲಿತಾಂಶವು ಇದೀಗ ಶೇ.99.9ಕ್ಕೆ ಏರಿಕೆಯಾಗಿದೆ. ಮುಂದಿನ ವರ್ಷ ಶೇ.100 ಫಲಿತಾಂಶ ಸಾಧಿಸುವ ಗುರಿ ಹೊಂದಲಾಗಿದೆ. ಡಿಜಿಟಲ್ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಯೋಜನೆಗಳ ಮೂಲಕ ಜನರ ಜೀವನಮಟ್ಟ ಸುಧಾರಿಸಲು ಸರ್ಕಾರ ಬದ್ಧವಾಗಿದೆ.
ಕನ್ನಡಪ್ರಭ ವಾರ್ತೆ ಹಲಗೂರು
ಗ್ರಾಮೀಣ ವಿದ್ಯಾರ್ಥಿಗಳು ಪಟ್ಟಣಕ್ಕೆ ಹೋದಾಗ ಅವರಿಗೆ ಆತ್ಮಸ್ಥೈರ್ಯ ಕುಗ್ಗದಂತೆ ಪ್ರಾಥಮಿಕ ಹಂತದಿಂದಲೇ ಟ್ಯಾಬ್ ಸೇರಿದಂತೆ ಡಿಜಿಟಲ್ ಶಿಕ್ಷಣ ವ್ಯವಸ್ಥೆ ಜಾರಿಗೆ ತಂದು ಉನ್ನತ ಶಿಕ್ಷಣದೊಂದಿಗೆ ಪದವಿ ಪಡೆಯಲು ಅನುಕೂಲ ಕಲ್ಪಿಸಲಾಗುತ್ತಿದೆ ಎಂದು ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.ಮಾರಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂಡಾಲ್ಕೊ ಇಂಡಸ್ಟ್ರೀಸ್ ಲಿಮಿಟೆಡ್‌ನ ಸಿಎಸ್ಆರ್ ಯೋಜನೆಯಡಿ ನಿರ್ಮಾಣವಾಗಲಿರುವ ಆರು ಕೊಠಡಿಗಳ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿರುವ ಹಿಂಡಾಲ್ಕೊ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿ, ಹೋಬಳಿಯ ಪ್ರೌಢಶಾಲೆಗಳಲ್ಲಿ ಮಲ್ಟಿಮೀಡಿಯಾ ಕೇಂದ್ರ ಸ್ಥಾಪಿಸಲಾಗಿದ್ದು, ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಹಲವು ಕ್ರಮ ಕೈಗೊಳ್ಳಲಾಗಿದೆ ಎಂದರು.ಈ ಹಿಂದೆ ಶೇ.67ರಷ್ಟಿದ್ದ ಫಲಿತಾಂಶವು ಇದೀಗ ಶೇ.99.9ಕ್ಕೆ ಏರಿಕೆಯಾಗಿದೆ. ಮುಂದಿನ ವರ್ಷ ಶೇ.100 ಫಲಿತಾಂಶ ಸಾಧಿಸುವ ಗುರಿ ಹೊಂದಲಾಗಿದೆ. ಡಿಜಿಟಲ್ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಯೋಜನೆಗಳ ಮೂಲಕ ಜನರ ಜೀವನಮಟ್ಟ ಸುಧಾರಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಈ ವೇಳೆ ಹಿಂಡಾಲ್ಕೂ ಇಂಡಸ್ಟ್ರಿ ಲಿಮಿಟೆಡ್ ಪ್ರಾಜೆಕ್ಟ್ ಎಂಜಿನಿಯರ್ ಶಂಕರ್ ಹಳೆ, ವ್ಯವಸ್ಥಾಪಕ ದಿನೇಶ್ ನಾಯಕ್, ಮಂಜುನಾಥ, ಗುತ್ತಿಗೆದಾರ ಸಂದೀಪ್, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ, ಎಸ್‌ಡಿಎಂಸಿ ಅಧ್ಯಕ್ಷ ನಾಗೇಂದ್ರ, ಮಾಜಿ ಅಧ್ಯಕ್ಷ ಶಿವಲಿಂಗೇಗೌಡ, ಉಮಾ, ಮುಖ್ಯ ಶಿಕ್ಷಕ ಸುರೇಶ್, ಜಿ.ಎಸ್.ಕೃಷ್ಣ, ಶ್ವೇತ, ಇಂದುಮತಿ, ಸವಿತಾ, ಶಿಲ್ಪ, ನಿರ್ಮಲ, ಮುಖಂಡರಾದ ರಾಜೇಗೌಡ, ಶಿವಣ್ಣ ರಾಜಪ್ಪ, ನಿವೃತ್ತ ಶಿಕ್ಷಕ ಬೋರೇಗೌಡ, ತೇಜಕುಮಾರ್ ಸೇರಿದಂತೆ ಇತರರು ಇದ್ದರು.6.38 ಕೋಟಿ ರು. ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ
ಹಲಗೂರು:ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ 6.38 ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಗುದ್ದಲಿ ಪೂಜೆ ನೆರವೇರಿಸಿದರು.ಗೊಲ್ಲರಹಳ್ಳಿಯಲ್ಲಿ 65 ಲಕ್ಷ ರು. ವೆಚ್ಚದಲ್ಲಿ ಆಯುಷ್ ಆರೋಗ್ಯ ಮಂದಿರ ನಿರ್ಮಾಣ, ಹುಲ್ಲೇಗಾಲ-ಪಿಎಸ್ ರಸ್ತೆಯ 6ನೇ ಕಿ.ಮೀ ಸರಪಳಿಯಲ್ಲಿ 85 ಲಕ್ಷ ರು. ವೆಚ್ಚದ ಸೇತುವೆ ನಿರ್ಮಾಣ, ಎನ್‌ಎಚ್-948 ಸಂಪರ್ಕ ರಸ್ತೆಯ 238ನೇ ಕಿ.ಮೀ ಸರಪಳಿಯಲ್ಲಿ 3 ಕೋಟಿ ರು. ವೆಚ್ಚದ ಸೇತುವೆ ನಿರ್ಮಾಣ ಹಾಗೂ ಬಾಣಸಮುದ್ರದಲ್ಲಿ 48 ಲಕ್ಷ ರು. ವೆಚ್ಚದಲ್ಲಿ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ಭೂಮಿ ಪೂಜೆ ಮಾಡಿದರು.ನಂತರ ಮಾತನಾಡಿದ ಅವರು, ರಾಜ್ಯದಲ್ಲೇ ಮಳವಳ್ಳಿ ತಾಲೂಕನ್ನು ಮಾದರಿಯಾಗಿ ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದು, ಮೂಲ ಸೌಕರ್ಯಗಳನ್ನು ನೀಡಿ ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ.ವೀರಭದ್ರಪ್ಪ, ಸಮುದಾಯ ಆರೋಗ್ಯಾಧಿಕಾರಿ ಜೀವಾನಂದ ಕುಮಾರ್, ವೈದ್ಯಾಧಿಕಾರಿ ಡಾ.ವಿನಯ್ ಕುಮಾರ್, ಜಿಪಂ ಮಾಜಿ ಸದಸ್ಯ ಚಂದ್ರಕುಮಾರ್, ಮನ್ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್, ದೇವರಾಜು,ಶಿವಮಾದು, ರಾಜೇಶ್, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಶಿವಕುಮಾರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.