ಸಾರಾಂಶ
ನಿರಂತರ ಕುಡಿಯುವ ನೀರು, ಮೂಲ ಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.
ದಾಂಡೇಲಿ: ನಗರದ ಹಳೆ ಸಿಎಂಸಿ ಮೈದಾನದಲ್ಲಿ ನಗರಸಭೆಯ ಅಧ್ಯಕ್ಷ ಆಷ್ಫಕ್ ಶೇಖ್ ೭೯ನೇ ಸ್ವಾತಂತ್ರ್ಯೋತ್ಸವದ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಡಿದ ಅವರು, ನಗರದ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಿ ಯುಜಿಡಿ, ನಿರಂತರ ಕುಡಿಯುವ ನೀರು, ಮೂಲ ಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ನಗರದ ಪ್ರಮುಖ ರಸ್ತೆ ಡಾಂಬರೀಕರಣ, ರಸ್ತೆಗಳ ಬದಿಯ ಅಲಂಕಾರ ವಿದ್ಯುತ ದೀಪಗಳು ಹಾಗೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುವುದು. ಅವರ ಸರ್ವರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು.ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಶಿಲ್ಪಾ ಕೊಡೆ, ಸುಧಾ ಜಾಧವ, ತಹಶೀಲ್ದಾರ ಶೈಲೇಶ ಪರಮಾನಂದ, ಪೌರಾಯುಕ್ತ ವಿವೇಕ ಬನ್ನೆ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಸಿ.ಹಾದಿಮನಿ, ಡಿವೈಎಸ್‌ಪಿ ಶಿವಾನಂದ ಮದರಕಂಡಿ, ಕಸಾಪ ಅಧ್ಯಕ್ಷ ಬಿ.ಎನ್.ವಾಸರೆ ವೇದೆಕೆಯಲ್ಲಿ ಇದ್ದರು. ಶಿಕ್ಷಕ ಶಾಂತಾರಾಮ ನಾಯ್ಕ ಸ್ವಾಗತಿಸಿ ನಿರೂಪಿಸಿ ವಂದಿಸಿದರು.
ಸ್ವಾತಂತ್ರ್ಯೋತ್ಸವದ ಧ್ವಜಾರೋಹಣದ ಈ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ನೃತ್ಯ ನಡೆದವು.ವಿವಿಧೆಡೆ ಆಚರಣೆ:
ತಹಶೀಲ್ದಾರ ಕಚೇರಿ, ನಗರಸಭೆ, ನಾಡಕಚೇರಿ, ತಾಲೂಕು ಆಡಳಿತ ಕಚೇರಿ, ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜು, ಬಂಗೂರನಗರ ಪದವಿ ಮತ್ತು ಬಂಗೂರನಗರ ಪದವಿ ಪೂರ್ವ ಕಾಲೇಜು, ಜನತಾ ವಿದ್ಯಾಲ, ಭಾಜಪ ಪಕ್ಷದ ಕಚೇರಿ, ಕಾಂಗ್ರೆಸ್ ಪಕ್ಷದ ಕಚೇರಿ ಮುಂತಾದವುಗಳಲ್ಲಿ ಶಾಲಾಕಾಲೇಜು, ಕಚೇರಿಗಳ ಮುಖ್ಯಸ್ಥರು ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ, ಹಿಸಿ ಹಂಚಿ ಸಡಗರ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು.