ದೊಡ್ಡಬಳ್ಳಾಪುರ: ಪ್ರತಿಯೊಬ್ಬ ನಾಗರಿಕನಿಗೆ ಹಣಕಾಸು ಸೇವೆಗಳ ಸುಲಭವಾಗಿ ಹಾಗೂ ಸಾರ್ವಜನಿಕರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಗ್ರಾಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನದ ವಿಶೇಷ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದು ಜಿಪಂ ಸಿಇಒ ಡಾ.ವಾಸಂತಿ ಅಮರ್ ತಿಳಿಸಿದರು
ದೊಡ್ಡಬಳ್ಳಾಪುರ: ಪ್ರತಿಯೊಬ್ಬ ನಾಗರಿಕನಿಗೆ ಹಣಕಾಸು ಸೇವೆಗಳ ಸುಲಭವಾಗಿ ಹಾಗೂ ಸಾರ್ವಜನಿಕರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಗ್ರಾಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನದ ವಿಶೇಷ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದು ಜಿಪಂ ಸಿಇಒ ಡಾ.ವಾಸಂತಿ ಅಮರ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನಕ್ಕೆ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಭಾರತ ಸರ್ಕಾರದ ಹಣಕಾಸು ಸೇವೆಗಳ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಅಭಿಯಾನ ಆಯೋಜಿಸಲಾಗಿದೆ. ಈ ವಿಶೇಷ ಅಭಿಯಾನವು ಈಗಾಗಲೇ ಅ. 21ರಿಂದ ಪ್ರಾರಂಭವಾಗಿದ್ದು, ಡಿ.31ರವರೆಗೆ ನಡೆಯಲಿದೆ.ಶಿಬಿರದಲ್ಲಿ ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆಗೆ ಹೊಸ ನೋಂದಣಿ ಮತ್ತು ಆಧಾರ್ ಜೋಡಣೆಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ಕಿಸಾನ್ ಕ್ರೆಡಿಟ್ ಕಾರ್ಡ್ ಮತ್ತು ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅರ್ಜಿಗಳ ಸಂಗ್ರಹಣೆ ನಡೆಯಲಿದೆ. ಸಾರ್ವಜನಿಕರು ತಮ್ಮ ಗ್ರಾಮ ಪಂಚಾಯಿತಿ ಅಥವಾ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಈ ವಿಶೇಷ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸರ್ಕಾರದ ವಿವಿಧ ಹಣಕಾಸು ಸೇವೆಗಳು ಹಾಗೂ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಯೋಜನಾ ನಿರ್ದೇಶಕ ವಿಠಲ್ ಕಾವ್ಳೆ, ಲೀಡ್ ಬ್ಯಾಂಕ್ ಮ್ಯಾನೇಜರ್ ಮಂಜುನಾಥ್ ನಾಯಕ್, ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
29ಕೆಡಿಬಿಪಿ2-ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನಕ್ಕೆ ಜಿಪಂ ಸಿಇಒ ಡಾ. ವಾಸಂತಿ ಪೋಸ್ಟರ್ ಬಿಡುಗಡೆ ಮಾಡಿದರು.