ಶೃಂಗೇರಿ ಗ್ರಾಮದಲ್ಲಿ ೧೫ ಲಕ್ಷ ರು. ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.

ಹಾನಗಲ್ಲ: ತಾಲೂಕಿನ ಶೃಂಗೇರಿ ಗ್ರಾಮದಲ್ಲಿ ೨೦೨೫-೨೬ನೇ ಸಾಲಿನ ಕಾಲೋನಿ ಅಭಿವೃದ್ಧಿ, ಪ್ರಗತಿ ಕಾಲೋನಿ ಯೋಜನೆಯಡಿ ೧೫ ಲಕ್ಷ ರು. ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.

ಗ್ರಾಮದ ಬಸವರಾಜ ಜಂಬೂರ ಅವರ ಮನೆಯಿಂದ ಕುಮಾರ ಸಾಂವಸಗಿ ಅವರ ಮನೆವರೆಗೆ ಪಕ್ಕಾ ಗಟಾರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ, ಈ ವರ್ಷ ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸಲು ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಿಗೆ ತಲಾ ಒಂದು ಕೋಟಿ ರು. ಅನುದಾನ ನೀಡಲಾಗಿದೆ. ಪ್ರತಿಯೊಂದು ಗ್ರಾಮಗಳಲ್ಲಿ ಸಭೆ ನಡೆಸಿ ಗ್ರಾಮಸ್ಥರು ಇಚ್ಛಿಸಿದ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗುತ್ತಿದೆ. ಗ್ರಾಮಗಳ ಒಳಗಿನ ಸಂಪರ್ಕ ರಸ್ತೆಗಳು, ಗ್ರಾಮಗಳಿಂದ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸುಧಾರಣೆ ಕಾಮಗಾರಿಗಳನ್ನು ಸಹ ಈ ಬಾರಿ ದಾಖಲೆ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಶಾಸಕ ಮಾನೆ ತಿಳಿಸಿದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರ ಅಹವಾಲುಗಳಿಗೂ ಸ್ಪಂದಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಹನುಮಂತಪ್ಪ ಮರಗಡಿ, ತಾಲೂಕಾಧ್ಯಕ್ಷ ವೀರಪ್ಪ ಬೈಲವಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಪಾಟೀಲ, ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ್ ಜಮಾದಾರ, ಮುಖಂಡರಾದ ಮಹೇಂದ್ರ ಹೊಟ್ಟೆಣ್ಣನವರ, ದಾನೀಪ್‌ಸಾಬ ಶೇಖ, ಮಂಜು ಗೂರನವರ, ಹಜರೆಸಾಬ ಶೇಖ್, ಅಶೋಕ ಕೊಂಡೋಜಿ, ಕುಬೇರ ಗಾಡಿಹುಚ್ಚನವರ, ಇಸ್ಮಾಯಿಲ್ ಶೇಖ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಗಂಗಮ್ಮ ಹಿರೇಮಠ ಸೇರಿದಂತೆ ಇನ್ನೂ ಹಲವರು ಇದ್ದರು.