ಸಾರಾಂಶ
ದೊಡ್ಡಬಳ್ಳಾಪುರ: ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ ಗಳಲ್ಲಿ ನಗರಸಭೆ ನಿಧಿಯಿಂದ 1.94 ಕೋಟಿ ರುಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಧೀರಜ್ ಮುನಿರಾಜ್ ಚಾಲನೆ ನೀಡಿದರು.
ದೊಡ್ಡಬಳ್ಳಾಪುರ: ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ ಗಳಲ್ಲಿ ನಗರಸಭೆ ನಿಧಿಯಿಂದ 1.94 ಕೋಟಿ ರುಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಧೀರಜ್ ಮುನಿರಾಜ್ ಚಾಲನೆ ನೀಡಿದರು.
4ನೇ ವಾರ್ಡ್ ವಿನಾಯಕನಗರದ ಕಾಂಕ್ರಿಟ್ ರಸ್ತೆ ಹಾಗೂ ಕಾಂಕ್ರೀಟ್ ಚರಂಡಿ ಕಾಮಗಾರಿಗೆ ಗುದ್ದಲಿಪೂಜೆಯನ್ನು ನೆರವೇರಿಸಿದ ಅವರು, ನಗರಸಭೆ ವ್ಯಾಪ್ತಿಯಲ್ಲಿ ಹಲವು ರಸ್ತೆಗಳ ಅಭಿವೃದ್ಧಿ, ಡಾಂಬರೀಕರಣ, ಚರಂಡಿ ನಿರ್ಮಾಣ, ಸ್ಲಾಬ್‌ಗಳ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ನಗರದ ತ್ವರಿತಗತಿಯ ಬೆಳವಣಿಗೆಗೆ ಪೂರಕವಾಗಿ ಅಭಿವೃದ್ದಿಯ ವೇಗವನ್ನು ಹೆಚ್ಚಿಸುವುದು ಇಂದಿನ ಅಗತ್ಯ ಎಂದರು.ನಗರಸಭೆ ನಿಧಿಯಿಂದ ಕೈಗೆತ್ತಿಕೊಳ್ಳಲಾಗಿರುವ ಎಲ್ಲ ಕಾಮಗಾರಿಗಳನ್ನು ನಿಯಮಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡುವಂತೆ ತಿಳಿಸಲಾಗಿದೆ. ಎಲ್ಲ ಹಂತಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವುದು ಅಪೇಕ್ಷಣೀಯ ಎಂದರು.
ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಬಚ್ಚೇಗೌಡ, ನಗರಸಭಾ ಸದಸ್ಯರಾದ ಬಿ.ನಾಗರತ್ನಮ್ಮ ಕೃಷ್ಣಮೂರ್ತಿ, ಬಂತಿ ವೆಂಕಟೇಶ್, ಹಂಚಪ್ರಿಯ ದೇವರಾಜ್, ಸುಮಿತ್ರ ಆನಂದಪ್ಪ, ಪದ್ಮನಾಭ್, ಲಕ್ಷ್ಮೀಪತಿ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.14ಕೆಡಿಬಿಪಿ3-ದೊಡ್ಡಬಳ್ಳಾಪುರದ ವಿನಾಯಕನಗರ ಬಡಾವಣೆಯಲ್ಲಿ ನಗರಸಭೆ ನಿಧಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಧೀರಜ್ ಮುನಿರಾಜ್ ಚಾಲನೆ ನೀಡಿದರು. ಬಚ್ಚೇಗೌಡ, ಸುಧಾರಾಣಿ ಇತರರಿದ್ದರು.