ಸಾರಾಂಶ
ಚಾಮರಾಜನಗರ: ಗ್ರಾಮೀಣ ರಸ್ತೆಗಳು ಮತ್ತು ಸಂಪರ್ಕ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ರಸ್ತೆಗಳು ಗ್ರಾಮೀಣ ಅಭಿವೃದ್ಧಿಯ ಪ್ರತೀಕವಾಗಿವೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. ಲೋಕೋಪಯೋಗಿ ಇಲಾಖೆ ವತಿಯಿಂದ ೨ ಕೋಟಿ ರು. ವೆಚ್ಚದಲ್ಲಿ ತಾಲೂಕಿನ ಡೊಳ್ಳಿಪುರ ಗ್ರಾಮದಿಂದ ಬ್ಯಾಡಮೂಡ್ಲು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ನಾಗರಿಕರ ಬೇಡಿಕೆಗೆ ಪೂರಕವಾಗುವಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ವಿವಿಧ ಯೋಜನೆಗಳಡಿ ಅನುದಾನ ಮಂಜೂರು ಮಾಡಿಸಿ, ಸಿಸಿ ರಸ್ತೆ, ಚರಂಡಿ ಸೇರಿ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು. ಗುಣಮಟ್ಟವನ್ನು ಕಾಯ್ಧುಕೊಳ್ಳುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಶಾಸಕರು ಸೂಚಿಸಿದರು. ಗ್ರಾಪಂ ಸದಸ್ಯರಾದ ಭಾಗ್ಯಮ್ಮ, ಮಂಜುನಾಥ್, ಮಾಜಿ ಗ್ರಾಪಂ ಅಧ್ಯಕ್ಷ ಬ್ಯಾಡಮೂಡ್ಲು ನಾಗರಾಜು, ಕೃಷ್ಣಶೆಟ್ಟಿ ಸೇರಿ ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.
;Resize=(128,128))
;Resize=(128,128))