ಸಾರಾಂಶ
₹9.50 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿದ ಶಾಸಕಕನ್ನಡಪ್ರಭ ವಾರ್ತೆ ಕೊಪ್ಪಳ
ಕೊಪ್ಪಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಮಾಡುವ ಗುರಿ ಇಟ್ಟುಕೊಂಡು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.ತಾಲೂಕಿನ ಮತ್ತೂರು, ಹನಕುಂಟಿ, ತಿಗರಿ, ಬೆಟಗೇರಿ, ಮೋರನಾಳ, ಬೈರಾಪುರ, ಬೋಚನಹಳ್ಳಿ, ಹಲವಾಗಲಿ ಹಾಗೂ ನಿಲೋಗಿಪುರ ಗ್ರಾಮಗಳಲ್ಲಿ ಅಂದಾಜು ಮೊತ್ತ ₹9.50 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದರು.ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಹಂತ ಹಂತವಾಗಿ ಕ್ಷೇತ್ರದ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸುತ್ತೇವೆ. ಅಳವಂಡಿ ಹೋಬಳಿಯಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಇನ್ನುಳಿದ ಎಲ್ಲಾ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಿ ರಸ್ತೆ ಅಭಿವೃದ್ಧಿ ಪಡಿಸುತ್ತೇವೆ ಎಂದರು.
ಬಸ್ ನಿಲ್ದಾಣ ನಿರ್ಮಾಣಕ್ಕೆ ಅಡಿಗಲ್ಲು:ತಾಲೂಕಿನ ಮೋರನಾಳ ಹಾಗೂ ಬೈರಾಪುರ ಗ್ರಾಮದಲ್ಲಿ ತಲಾ ಗ್ರಾಮಕ್ಕೆ ₹20 ಲಕ್ಷ ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಾಣದ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿದರು.
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡಿಗಲ್ಲು:ತಾಲೂಕಿನ ಬೋಚನಹಳ್ಳಿ ಗ್ರಾಮದಿಂದ ಹನಕುಂಟಿ ಗ್ರಾಮದ ರಾಜ್ಯ ಹೆದ್ದಾರಿ ರಸ್ತೆಯ 2.5 ಕಿಮೀ ರಸ್ತೆ ಅಭಿವೃದ್ಧಿಯ ₹2.50 ಕೋಟಿ ಕಾಮಗಾರಿ ಹಾಗೂ ಬಿಸರಲ್ಲಿಯಿಂದ ಬೆಟಗೇರಿ ರಸ್ತೆ ಅಭಿವೃದ್ಧಿಯ ₹2 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದರು.
ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣರೆಡ್ಡಿ ಗಲ್ಬಿ, ಪ್ರಮುಖರಾದ ಭರಮಪ್ಪ ಹಟ್ಟಿ, ವಿರುಪಣ್ಣ ನವೋದಯ, ವೆಂಕನಗೌಡ್ರು ಹಿರೇಗೌಡ್ರು, ಭೀಮಣ್ಣ ಬೋಚನಹಳ್ಳಿ, ತೋಟಪ್ಪ ಸಿಂಟ್ರ, ಗುರುಬಸವರಾಜ ಹಳ್ಳಿಕೇರಿ, ಶಿವಣ್ಣ ಮೋರನಾಳ, ಪರಶುರಾಮ್ ಮೆಕ್ಕಿ, ನಿಂಗಪ್ಪ ಮೇಟಿ, ನಿಂಗಪ್ಪ ಅವೊಜಿ, ಭರಮಪ್ಪ ಕಂಬಳಿ, ತಹಸೀಲ್ದಾರ್ ವಿಠ್ಠಲ್ ಚೌಗಲೇ, ತಾಲೂಕು ಪಂಚಾಯಿತಿ ಇಒ ದುಂಡೇಶ್ ತುರಾದಿ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಲ್ಟಾನ್ ಸೇರಿದಂತೆ ಇತರರು ಇದ್ದರು.