ಹೊಸಕೋಟೆ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೈಗಾರಿಕೆಗಳ ಉತ್ಪಾದನಾ ವಲಯಕ್ಕೆ ಅಗತ್ಯ ಮೂಲ ಸೌಕರ್ಯಗಳೊಂದಿಗೆ ಎಲ್ಲಾ ಅವಕಾಶಗಳನ್ನು ಒದಗಿಸಿಕೊಟ್ಟು ಕೈಗಾರಿಕಾ ವಲಯಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ ಎಂದು ಮಧ್ಯಮ ಹಾಗೂ ಬೃಹತ್ ಕೈಗಾರಿಕೆಗಳ ಸಚಿವ ಎಂ.ಟಿ.ಪಾಟೀಲ್ ತಿಳಿಸಿದರು.
ಹೊಸಕೋಟೆ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೈಗಾರಿಕೆಗಳ ಉತ್ಪಾದನಾ ವಲಯಕ್ಕೆ ಅಗತ್ಯ ಮೂಲ ಸೌಕರ್ಯಗಳೊಂದಿಗೆ ಎಲ್ಲಾ ಅವಕಾಶಗಳನ್ನು ಒದಗಿಸಿಕೊಟ್ಟು ಕೈಗಾರಿಕಾ ವಲಯಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ ಎಂದು ಮಧ್ಯಮ ಹಾಗೂ ಬೃಹತ್ ಕೈಗಾರಿಕೆಗಳ ಸಚಿವ ಎಂ.ಟಿ.ಪಾಟೀಲ್ ತಿಳಿಸಿದರು.
ತಾಲೂಕಿನ ಜಡಿಗೇನಹಳ್ಳಿ ಹೋಬಳಿ ದೇವಶೆಟ್ಟಿಹಳ್ಳಿ ಬಳಿ ಕರ್ನಾಟಕ ಮೂಲದ ರಿವರ್ ಮೊಬಿಲಿಟಿ ಕಂಪನಿ ತಯಾರಿಸಿರುವ ಯಮಹಾ ಇಸಿ-06 ವಿದ್ಯುತ್ ಚಾಲಿತ ಬೈಕ್ ಅನ್ನು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಯಮಹಾ ಕಂಪನಿಗೆ ಇಲ್ಲಿನ ತಯಾರಿಕಾ ಘಟಕದಲ್ಲಿ ಹಸ್ತಾಂತರಿಸಿ ಮಾತನಾಡಿದ ಸಚಿವರು, ನಗರ ಸಂಚಾರವನ್ನು ಪರಿಸರಸ್ನೇಹಿ, ಸುಗಮ ಮತ್ತು ಸುಸ್ಥಿರಗೊಳಿಸುವಂತಹ ದ್ವಿಚಕ್ರ ವಾಹನ ತಯಾರಿಕೆ ಸ್ಥಳೀಯವಾಗಿಯೇ ಉತ್ಪಾದಿಸಿರುವುದು ರಾಜ್ಯದ ಕೈಗಾರಿಕಾ ಬೆಳವಣಿಗೆಯ ಉಜ್ವಲ ಅಧ್ಯಾಯವಾಗಿದೆ. ಇದು ರಾಜ್ಯ ಭವಿಷ್ಯದ ಸಂಚಾರ ವ್ಯವಸ್ಥೆ ಅಭಿವೃದ್ಧಿ ಪಥದತ್ತ ಸಾಗುತ್ತಿರುವುದಕ್ಕೆ ಅತ್ಯುತ್ತಮ ನಿದರ್ಶನ ಎಂದು ತಿಳಿಸಿದರು.ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ರಿವರ್ ಕಂಪೆನಿ ಹೊಸಕೋಟೆ ಬಳಿ ಇವಿ ಸ್ಕೂಟರ್ ಉತ್ಪಾದನೆ ಮಾಡಿ ಲೋಕಾರ್ಪಣೆಗೊಳಿಸಿದೆ. ಯಮಹಾ ಮತ್ತು ರಿವರ್ ಮೊಬಿಲಿಟಿ ತಂಡಗಳಿಗೆ ಅಭಿನಂದನೆ ಸಲ್ಲಿಸಿ, ಇದು ಕರ್ನಾಟಕದ ‘ಗ್ರೀನ್ ಮೊಬಿಲಿಟಿ’ ಪಯಣದ ಮಹತ್ವದ ಮೈಲಿಗಲ್ಲನ್ನು ಸಾಧಿಸಲಿದೆ. ವಿದೇಶಗಳಿಗೂ ಹೊಸಕೋಟೆಯಿಂದ ಇವಿ ಸ್ಕೂಟರ್‌ಗಳನ್ನು ರಫ್ತು ಮಾಡುವಂತಾಗಲಿ. ಸರ್ಕಾರ ಯಮಹಾ ಮತ್ತು ರಿವರ್ ಮೊಬಿಲಿಟಿ ಸಂಸ್ಥೆಗಳ ಪ್ರಯತ್ನವನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಸ್ಥಳೀಯವಾಗಿ ಯುವಜನತೆಗೆ ಉದ್ಯೋಗಾವಕಾಶಗಳು ಸೃಷ್ಟಿ ಮಾಡಲಿ ಎಂದರು.
ಕಾರ್ಯಕ್ರಮದಲ್ಲಿ ಯಮಾಹಾ ಇಂಡಿಯಾ ಅಧ್ಯಕ್ಷ ಜಿಮ್ ಅಯೋಟಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ರಿವರ್ ಸಿಇಒ ಅರವಿಂದ ಮಣಿ, ಸಹ ಸಂಸ್ಥಾಪಕ ವಿಪಿನ್ ಜಾರ್ಜ್ ಮುಂತಾದವರು ಉಪಸ್ಥಿತರಿದ್ದರು.ಬಾಕ್ಸ್.........
ಚಾರ್ಜಿಂಗ್ ಪಾಯಿಂಟ್ ಹೆಚ್ಚಳವಾಹನ ಮಾರುಕಟ್ಟೆ ಈಗ ವಿದ್ಯುತ್ ಚಾಲಿತ ವಾಹನಗಳತ್ತ ಹೋಗುತ್ತಿದೆ. ರಾಜ್ಯದಲ್ಲಿ ಕೂಡ ಇದನ್ನು ಗಮನಿಸಿ, ಈಗಾಗಲೇ ಸಾವಿರಾರು ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲಾಗಿದೆ. ಇವುಗಳ ಸಂಖ್ಯೆಯನ್ನು ಇನ್ನೂ ಹೆಚ್ಚಿಸಲಾಗುವುದು. ಇದು ಇ.ವಿ. ವಲಯದ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಹೊಂದಿರುವ ಬದ್ಧತೆಯನ್ನು ಸೂಚಿಸುತ್ತದೆ. ಸ್ಥಳೀಯ ಉತ್ಪಾದನೆಯಿಂದ ವ್ಯಾಪಕ ಆರ್ಥಿಕ ಮೌಲ್ಯವೂ ಸೃಷ್ಟಿಯಾಗಲಿದೆ. ಇದು ಕೌಶಲ್ಯಪೂರ್ಣ ಉದ್ಯೋಗಗಳ ಸೃಷ್ಟಿ, ಸ್ಥಳೀಯ ಪೂರೈಕೆ ಸರಪಳಿ ಬಲವರ್ಧನೆ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪಾಲಿಗೆ ಸದವಕಾಶ ಇವೆಲ್ಲವನ್ನೂ ಸಾಧ್ಯವಾಗಿಸಲಿದೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದರು.
ಫೋಟೋ: 12 ಹೆಚ್‌ಎಸ್‌ಕೆ 1, 2 ಮತ್ತು 31: ಹೊಸಕೋಟೆ ತಾಲೂಕಿನ ದೇವಶೆಟ್ಟಿಹಳ್ಳಿ ಬಳಿ ಕರ್ನಾಟಕ ಮೂಲದ ರಿವರ್ ಮೊಬಿಲಿಟಿ ಕಂಪನಿ ತಯಾರಿಸಿರುವ ಯಮಾಹಾ ಇಸಿ-೦೬ ವಿದ್ಯುತ್ ಚಾಲಿತ ಬೈಕ್ ಅನ್ನು ಜಪಾನ್ ದೇಶದ ಯಮಾಹಾ ಕಂಪನಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ.ಪಾಟೀಲ್ ಹಸ್ತಾಂತರಿಸಿದರು.
2: ಕಾರ್ಖಾನೆಯಲ್ಲಿ ಇವಿ ಸ್ಕೂಟರ್ ತಯಾರಿಕೆ ಬಗ್ಗೆ ಸಚಿವ ಎಂಬಿ ಪಾಟೀಲ್ ಮಾಹಿತಿ ಪಡೆದುಕೊಂಡರು.3: ಹೊಸಕೋಟೆ ಆಗಮಿಸಿದ ಸಚಿವ ಎಂಬಿ ಪಾಟೀಲ್ ಅವರನ್ನು ನಲ್ಲೂರು ಟೋಲ್ ಬಳಿ ಬಮುಲ್ ನಿರ್ದೇಶಕ ಬಿವಿ.ಸತೀಶ್‌ಗೌಡ ಸೇರಿದಂತೆ ಹಲವಾರು ಮುಖಂಢರು ಬೃಹತ್ ಗಾತ್ರದ ಹಾರ ಹಾಕಿ ಸ್ವಾಗತಿಸಿದರು.