ಸಾರಾಂಶ
ಯಶವಂತಪುರದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದರು. ಕೆಂಗೇರಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಶ್ರೀ ಶಿವ ಪಾರ್ವತಿ ಹಾಗೂ ಚಾಮುಂಡೇಶ್ವರಿ ದೇವರ ಪಂಚಲೋಹದ ಉತ್ಸವ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕನ್ನಡಪ್ರಭ ವಾರ್ತೆ ಕೆಂಗೇರಿ
ಯಶವಂತಪುರದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದರು. ಕೆಂಗೇರಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಶ್ರೀ ಶಿವ ಪಾರ್ವತಿ ಹಾಗೂ ಚಾಮುಂಡೇಶ್ವರಿ ದೇವರ ಪಂಚಲೋಹದ ಉತ್ಸವ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ದೇವಸ್ಥಾನ ಟ್ರಸ್ಟಿನ ಕಾರ್ಯದರ್ಶಿ ಸಿ.ಎಸ್.ಮಂಜುನಾಥ್ ಮಾತನಾಡಿ, ಮುಂದಿನ ದಿನಗಳಲ್ಲಿ ದೇಗುಲವನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವುದು ನಮ್ಮ ಮುಂದಿನ ಗುರಿ ಎಂದರು. ಟ್ರಸ್ಟಿನಿಂದ ಶಾಸಕ ಸೋಮಶೇಖರ್ ಅವರನ್ನು ಅಭಿನಂದಿಸಲಾಯಿತು. ಅಧ್ಯಕ್ಷರಾದ ಮಂಜುನಾಥ್, ಖಜಾಂಜಿ ಚನ್ನಬಸವರಾದ್ಯ, ಸುಲಿಗೆರೆ ಗ್ರಾಮ ಪಂಚಾಯಿತಿ ಸದಸ್ಯ ಶಿವು ಎನ್., ನಂದೀಶ್, ರಾಜಣ್ಣ, ಮಹದೇವ ಆರ್. ಸೇರಿ ಇತರರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))