ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ: ಎಚ್.ಜಿ.ಶ್ರೀನಿವಾಸ್

| Published : Aug 26 2025, 01:03 AM IST

ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ: ಎಚ್.ಜಿ.ಶ್ರೀನಿವಾಸ್
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮೀಣ ಭಾಗದ ದುಡಿಯುವ ಮಹಿಳೆಯರಿಗಾಗಿ ಸ್ವ-ಸಹಾಯ ಗುಂಪುಗಳಲ್ಲಿ ಸಾಲ ರೂಪದಲ್ಲಿ ಬಂಡವಾಳ ನೀಡಿ ಸ್ವಯಂ ಉದ್ಯೋಗಕ್ಕೆ ಅವಕಾಶ ಕಲ್ಪಿಸಿ ಅವರನ್ನು ಆರ್ಥಿಕತೆವಾಗಿ ಸದೃಢಗೊಳಿಸಿ ಸ್ವಾವಲಂಬನೆ ಸಾಧಿಸುವಂತೆ ಸರ್ಕಾರ ಮಾಡುತ್ತಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಾಪಂ ಇಒ ಎಚ್.ಜಿ.ಶ್ರೀನಿವಾಸ್ ಹೇಳಿದರು.

ತಾಲೂಕಿನ ನಾಗೇಗೌಡನದೊಡ್ಡಿ ಗ್ರಾಪಂ ಆವರಣದಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿರುವ ರಾಷ್ಟ್ರೀಯ ಜೀವನೋಪಾಯ ಸಂವರ್ಧನಾ ಸಂಸ್ಥೆ ಕಟ್ಟಡ ಉದ್ಘಾಟನೆ ವೇಳೆ ಮಾತನಾಡಿ, ಗ್ರಾಮೀಣ ಪ್ರದೇಶದ ಬಡಜನರ ಅಭಿವೃದ್ಧಿಗೆ ಸರ್ಕಾರದ ಸಹಯೋಗದೊಂದಿಗೆ ಮಹಿಳಾ ಗುಂಪುಗಳನ್ನು ರಚಿಸಿ ಆರ್ಥಿಕ, ಸಾಮಾಜಿಕವಾಗಿ ನೆರವಾಗಲು ಮುಂದಾಗಿದೆ. ಅಲ್ಲದೇ ನರೇಗಾ ಯೋಜನೆ ಮೂಲಕ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿದೆ ಎಂದರು.

ಗ್ರಾಮೀಣ ಭಾಗದ ದುಡಿಯುವ ಮಹಿಳೆಯರಿಗಾಗಿ ಸ್ವ-ಸಹಾಯ ಗುಂಪುಗಳಲ್ಲಿ ಸಾಲ ರೂಪದಲ್ಲಿ ಬಂಡವಾಳ ನೀಡಿ ಸ್ವಯಂ ಉದ್ಯೋಗಕ್ಕೆ ಅವಕಾಶ ಕಲ್ಪಿಸಿ ಅವರನ್ನು ಆರ್ಥಿಕತೆವಾಗಿ ಸದೃಢಗೊಳಿಸಿ ಸ್ವಾವಲಂಬನೆ ಸಾಧಿಸುವಂತೆ ಸರ್ಕಾರ ಮಾಡುತ್ತಿದೆ ಎಂದರು.

ಸರ್ಕಾರ ಸಂಜೀವಿನಿ ಯೋಜನೆಯನ್ನು ಜಾರಿಗೆ ತಂದಿದೆ. ಮಹಿಳೆಯರಿಗೆ ವೃತ್ತಿ ತರಬೇತಿ ಜೊತೆಗೆ ಆರ್ಥಿಕ ನೆರವು ಸಹ ನೀಡಲಾಗುತ್ತಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಪಂಚಾಯತ್ ಹಾಗೂ ಸಂಘಗಳ ಅಭಿವೃದ್ಧಿ ಬಗ್ಗೆ ಚರ್ಚೆಗಳನ್ನು ನಡೆಸಲು ಇಂಥ ಕಟ್ಟಡಗಳ ನಿರ್ಮಾಣದ ಮೂಲಕ ಸಹಾಯಕವಾಗುತ್ತದೆ ಎಂದರು.

ಇದಕ್ಕೂ ಮುನ್ನ ನೂತನ ಕಟ್ಟಡವನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಉದ್ಘಾಟಿಸಿ ಕಟ್ಟಡ ನಿರ್ಮಾಣ ಕಾರ್ಯವನ್ನು ಶ್ಲಾಘಿಸಿದರು. ಗ್ರಾಪಂ ಅಧ್ಯಕ್ಷೆ ಚಲುವಮ್ಮ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಲಕ್ಷ್ಮಿ, ಸದಸ್ಯರಾದ ಗುರು ಪ್ರಸಾದ್, ಶಿವಲಿಂಗೇಗೌಡ, ರವೀಶ್, ಮಾದೇಶ್, ಉಮಾತಾಯಿ, ಭಾಗ್ಯಮ್ಮ, ಮರಿಮಾದಮ್ಮ, ಚಿಕ್ಕಣ್ಣ, ಮುಖಂಡರಾದ ಮಂಜಳಾ, ಪ್ರಭುಸ್ವಾಮಿ, ನಿಂಗರಾಜು ಭಾಗಿಯಾಗಿದ್ದರು.