ಸಾರಾಂಶ
ಮಾಗಡಿ: ಗ್ಯಾರಂಟಿ ಮೂಲಕ ಹೆಣ್ಣು ಮಕ್ಕಳಿಗೆ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಒತ್ತನ್ನು ಕೊಟ್ಟಿದ್ದು ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳೇ ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿಯಬೇಕಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ಮಾಗಡಿ: ಗ್ಯಾರಂಟಿ ಮೂಲಕ ಹೆಣ್ಣು ಮಕ್ಕಳಿಗೆ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಒತ್ತನ್ನು ಕೊಟ್ಟಿದ್ದು ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳೇ ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿಯಬೇಕಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ತಾಲೂಕಿನ ವ್ಯಾಸರಾಯನ ಪಾಳ್ಯದಲ್ಲಿ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ ಹಾಗೂ ತಾಲೂಕಿನ 145ಕ್ಕೂ ಹೆಚ್ಚು ಅಂಗನವಾಡಿಗಳಿಗೆ ಸ್ಮಾರ್ಟ್ ಎಲ್ಇಡಿ ಟಿವಿ ವಿತರಿಸಿ ಮಾತನಾಡಿದ ಅವರು, ಗ್ಯಾರಂಟಿ ಜೊತೆಗೆ ಅಭಿವೃದ್ಧಿಯನ್ನೂ ಮಾಡಲಾಗುತ್ತಿದೆ. ತೆರಿಗೆ ಹಣವನ್ನು ಸಿಎಂ, ಡಿಸಿಎಂ ಪೋಲು ಮಾಡುತ್ತಿದ್ದಾರೆಂದು ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ. ಹೆಣ್ಣುಮಕ್ಕಳಿಗೆ ಗೃಹಲಕ್ಷ್ಮಿ ಯೋಜನೆ ಅಡಿ ಪ್ರತಿ ತಿಂಗಳು ₹ 2000 ಸಾವಿರ ಹಣ ಜಮೆ ಆಗುತ್ತಿದೆ. ಬಸ್ ಫ್ರೀ ಬಿಟ್ಟಿರುವುದರಿಂದ ಸೀಟ್ ಗಾಗಿ ಕಿತ್ತಾಡುತ್ತಾರೆ ಎಂದು ನಮ್ಮ ವಿರುದ್ಧವೇ ಅಪಪ್ರಚಾರ ಮಾಡುತ್ತಾರೆ. ನಾವು ಗ್ಯಾರಂಟಿ ಜೊತೆ ಅಭಿವೃದ್ಧಿ ಮಾಡುತ್ತಿದ್ದು ಹೆಣ್ಣು ಮಕ್ಕಳೇ ನಮಗೆ ಆಧಾರ. ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಬೆಂಬಲ ಸದಾ ಇರಬೇಕು. ಮುಂದಿನ ದಿನಗಳಲ್ಲಿ ಪಕ್ಷದಿಂದ ಮತ್ತಷ್ಟು ಅಭಿವೃದ್ಧಿ ಮಾಡಲಾಗುತ್ತದೆ ಎಂದರು. ಗ್ರಾಮ ಠಾಣಾ ಮುಂದುವರಿಸಲು ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ನಮ್ಮ ತಂದೆ- ತಾಯಿ ಹೆಸರಿನಲ್ಲಿ ಶಾಲಾ ನಿರ್ಮಾಣಕ್ಕೆ ಉಚಿತ ಸೈಟ್ ನೀಡಲಾಗಿದೆ. ಚರಂಡಿ ನಿರ್ಮಾಣ ಮಾಡಲಾಗುತ್ತಿದ್ದು ಸ್ಮಶಾನ ನಿರ್ಮಾಣಕ್ಕೆ ಎರಡು ಎಕರೆ ಜಾಗ ಗುರ್ತಿಸಿಕೊಟ್ಟರೆ ಇದನ್ನು ಅಭಿವೃದ್ಧಿಪಡಿಸಲಾಗುತ್ತದೆ. ಇನ್ನೂ ಆರು ತಿಂಗಳಲ್ಲಿ ನಿಮ್ಮ ಗ್ರಾಮಕ್ಕೆ ಎಲ್ಲಾ ರೀತಿಯ ಅಭಿವೃದ್ಧಿ ಮಾಡುತ್ತೇವೆ. ಕಾಂಗ್ರೆಸ್ ಪಕ್ಷಕ್ಕೆ ನಿಮ್ಮೆಲ್ಲರ ಬೆಂಬಲ ಬೇಕು. ಹೊಟ್ಟೆ ತುಂಬಿದವರು ಗ್ಯಾರಂಟಿ ಯೋಜನೆ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು.ಅಭಿವೃದ್ಧಿ ವಿಚಾರ ಬಿಟ್ಟು ರಾಜಕೀಯ ಚರ್ಚೆ ಆಗಿಲ್ಲ:
ಕೈ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಜೊತೆ ಅಭಿವೃದ್ಧಿ ವಿಚಾರ ಬಿಟ್ಟು ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಸಿಎಂ ಬದಲಾವಣೆ ಕುರಿತು ಮಾತುಕತೆ ನಡೆದಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಬಗ್ಗೆ ಹೆಚ್ಚು ಒಲವು ತೋರುತ್ತಿರುವ ಬಗ್ಗೆ ನಮ್ಮದೇನಿದ್ದರೂ ಹೈಕಮಾಂಡ್ ಬೆಂಬಲ ಹೊರತು ಒಬ್ಬರ ಪರವಾಗಿ ಅಲ್ಲಾ ಸಿಎಂ ಸಿದ್ದರಾಮಯ್ಯ ನಂತರ ಡಿ.ಕೆ.ಶಿವಕುಮಾರ್ ಅವರಿಗೆ ಒಂದು ಬಾರಿ ಸಿಎಂ ಸ್ಥಾನ ಕೊಡುವಂತೆ ಕೇಳಿಕೊಂಡಿದ್ದು ಈಗಲೇ ಮಾಡಿ ಎಂದು ಹೇಳುತ್ತಿಲ್ಲ ಪಕ್ಷದ ಶಿಸ್ತನ್ನು ಮಿತಿಮೀರಿದವರಿಗೆ ಡಿ.ಕೆ.ಶಿವಕುಮಾರ್ ಅವರು ನೋಟಿಸ್ ನೀಡುತ್ತಾರೆ ಎಂದರು.ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶರತ್ ಕುಮಾರ್, ತಾಪಂ ಜೈಪಾಲ್, ಸಿಡಿಪಿಒ ಸುರೇಂದ್ರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ.ಸೀತಾರಾಂ, ಗ್ರಾಪಂ ಸದಸ್ಯ ತಟವಾಳ್ ನಾಗರಾಜು ಇತರರಿದ್ದರು.
(ಫೋಟೋ ಕ್ಯಾಪ್ಷನ್)ಮಾಗಡಿ ತಾಲೂಕಿನ ವ್ಯಾಸರಾಯನ ಪಾಳ್ಯದಲ್ಲಿ ತಾಲೂಕಿನ ವಿವಿಧ ಅಂಗನವಾಡಿಗಳಿಗೆ ಸ್ಮಾರ್ಟ್ ಎಲ್ಇಡಿ ಟಿವಿಯನ್ನು ಶಾಸಕ ಬಾಲಕೃಷ್ಣ ವಿತರಿಸಿದರು. ತಹಸೀಲ್ದಾರ್ ಶರತ್ ಕುಮಾರ್, ಸಿಡಿಪಿಒ ಸುರೇಂದ್ರ ಇತರರಿದ್ದರು.