ಉಡುಪಿ: ಇಲ್ಲಿನ ಕಲ್ಯಾಣಪುರ ಗ್ರಾಪಂನ ನಿಡಂಬಳ್ಳಿಯಲ್ಲಿ ಸುಮಾರು 65 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಜನತೆಯ ಆರೋಗ್ಯ ಸೇವೆಗೆ ವಿಶೇಷ ಆದ್ಯತೆ ನೀಡುತ್ತಿದೆ. ಅದರಂತೆ ನಿಡಂಬಳ್ಳಿಯಲ್ಲಿ ಉದ್ಘಾಟನೆಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರದ ಮೂಲಕ ಸ್ಥಳೀಯ ಜನತೆಗೆ ಉತ್ತಮ ಸೇವೆಯ ಜೊತೆಗೆ ಉತ್ತಮ ಆರೋಗ್ಯವಂತ ಸಮಾಜದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಲಿ ಎಂದರು.ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಆರೋಗ್ಯ ಕ್ಷೇತ್ರದ ಸರ್ಕಾರದ ಯೋಜನೆ, ಸೇವೆಗಳು ಆಯುಷ್ಮಾನ್ ಆರೋಗ್ಯ ಕೇಂದ್ರದ ಮೂಲಕ ಸಾರ್ವಜನಿಕರಿಗೆ ಸಿಗುವಂತಾಗಲಿ ಎಂದು ಹಾರೈಸಿದರು.ತಾಲೂಕು ಆರೋಗ್ಯ ಅಧಿಕಾರಿ ಡಾ. ವಾಸುದೇವ, ವೈದ್ಯರಾದ ಡಾ. ಅಕ್ಷತಾ, ಇಲಾಖೆಯ ಇಂಜಿನಿಯರ್ ಗುರುಪ್ರಸಾದ್, ಕಲ್ಯಾಣಪುರ ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜ್ ಕುಂದರ್, ಸತೀಶ್ ನಾಯ್ಕ್, ಕೃಷ್ಣ ದೇವಾಡಿಗ, ಬಡಾನಿಡಿಯೂರು ಗ್ರಾಪಂ ಮಾಜಿ ಅಧ್ಯಕ್ಷರಾದ ಉಮೇಶ್ ಪೂಜಾರಿ, ಪ್ರಭಾಕರ ತಿಂಗಳಾಯ, ಉಡುಪಿ ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಗ್ರಾಪಂ ಮಾಜಿ ಸದಸ್ಯರಾದ ಪ್ರೇಮಲತಾ, ನವೀನ್ ಕಾಂಚನ್, ಜಾನ್ಸನ್ , ಪ್ರಶಾಂತ್ ಆಚಾರ್ಯ, ಅನಿತಾ ನಾಯ್ಕ್, ಪ್ರಮುಖರಾದ ಸುಧೀರ್ ಕಲ್ಯಾಣಪುರ, ಆಶಾ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರದ ಸಿಬ್ಬಂದಿ ಇದ್ದರು.ಗ್ರಾಮೀಣ ಆರೋಗ್ಯ ಸೇವೆಗೆ ಆದ್ಯತೆ: ಯಶ್‌ಪಾಲ್ ಸುವರ್ಣ
ಇಲ್ಲಿನ ಕಲ್ಯಾಣಪುರ ಗ್ರಾಪಂನ ನಿಡಂಬಳ್ಳಿಯಲ್ಲಿ ಸುಮಾರು 65 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.