ಸಾರಾಂಶ
ತಾಲೂಕಿನ ಅಗರ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡಲಾಗುವುದು, ಕುಡಿಯುವ ನೀರು, ಬೀದಿ ದೀಪ, ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಆದ್ಯತೆ ನೀಡಲಾಗುವುದು ಎಂದು ಅಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟಾಚಲ ತಿಳಿಸಿದರು.
ಕನ್ನಡಪ್ರಭ ವಾರ್ತೆ, ಯಳಂದೂರು
ತಾಲೂಕಿನ ಅಗರ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡಲಾಗುವುದು, ಕುಡಿಯುವ ನೀರು, ಬೀದಿ ದೀಪ, ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಆದ್ಯತೆ ನೀಡಲಾಗುವುದು ಎಂದು ಅಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟಾಚಲ ತಿಳಿಸಿದರು.ಗ್ರಾಮದ ಪಂಚಾಯಿತಿ ಕಟ್ಟಡದ ಸಭಾಂಗಣದಲ್ಲಿ ಮಂಗಳವಾರ ನಡೆದ ನರೇಗಾ, ೧೫ ನೇ ಹಣಕಾಸು ಗ್ರಾಮಸಭೆಯ ಅಧ್ಯಕ್ಷ ವಹಿಸಿ ಮಾತನಾಡಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ೧೫ ನೇ ಹಣಕಾಸಿನಲ್ಲಿ ಪಂಚಾಯಿತಿಗೆ ಬರುವ ಹಣವನ್ನು ಸದ್ವಿನಿಯೋಗ ಮಾಡಿಕೊಂಡು ಇಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಕ್ರಮ ವಹಿಸಲಾಗುವುದು.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಒಟ್ಟು ೯೨ ಕಾಮಗಾರಿಗಳು ನಡೆದಿವೆ. ಇದರಲ್ಲಿ ಸಮುದಾಯ ಹಾಗೂ ವೈಯುಕ್ತಿಕ ಕಾಮಗಾರಿಗಳಲ್ಲಿ ₹೩೯.೭೨ ಲಕ್ಷ ಮೊತ್ತದ ಕೆಲಸವನ್ನು ಮಾಡಲಾಗಿದೆ. ಇದರಿಂದ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕೆಲಸಗಳಿಗೆ ನರೇಗಾ ಯೋಜನೆಯನ್ನು ಬಳಸಿಕೊಂಡು ಪಂಚಾಯಿತಿಯ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಸೂಚನೆ ಮೇರೆಗೆ ನಶಾಮಕ್ತ ಭಾರತ ಅಭಿಯಾನ ಯೋಜನೆಯಡಿಯಲ್ಲಿ ಮಾದಕ ವ್ಯಸನಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಗ್ರಾಪಂ ಉಪಾಧ್ಯಕ್ಷೆ ನಿರ್ಮಲ ಸದಸ್ಯರಾದ ಮುದ್ದನಾಯಕ, ಸುರೇಶ, ರಾಜಮ್ಮ, ಸ್ವಾಮಿ, ನಾಗರಾಜು, ಶೋಭಾ, ನಳಿನಕುಮಾರಿ, ಅನ್ನಪೂರ್ಣ ಪಿಡಿಒ ಎಸ್. ವೀಣಾ. ಪಶು ಸಂಗೋಪನೆ, ರೇಷ್ಮೆ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಪಂ ಸಿಬ್ಬಂಧಿ ಹಾಗೂ ಗ್ರಾಮಸ್ಥರು ಇದ್ದರು.;Resize=(128,128))
;Resize=(128,128))
;Resize=(128,128))