ಸಾರಾಂಶ
ಉಡುಪಿ ನಗರಸಭೆಯ ಕೊಡವೂರು ವಾರ್ಡಿನ ಲಕ್ಷ್ಮೀನಗರ ಗರ್ಡೆಯಲ್ಲಿ ನೂತನವಾಗಿ ಆರಂಭಗೊಂಡ ನಮ್ಮ ಕ್ಲಿನಿಕ್ ಚಿಕಿತ್ಸಾಲಯವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಕೇಂದ್ರ ಸರ್ಕಾರವು ನಗರಸಭೆ ವ್ಯಾಪ್ತಿಯ ಜನವಸತಿ ಪ್ರದೇಶದಲ್ಲಿ ಬೇಡಿಕೆಗನುಗುಣವಾಗಿ ಆರಂಭಿಸಿರುವ ನಮ್ಮ ಕ್ಲಿನಿಕ್ ಸಾರ್ವಜನಿಕರಿಗೆ ಗುಣಮಟ್ಟದ ಸೇವೆಗೆ ಆದ್ಯತೆ ನೀಡಲಿದ್ದು, ಸಾಮಾನ್ಯ ರೋಗಿಗಳಿಗೆ ಸ್ಥಳೀಯವಾಗಿಯೇ ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.ಅವರು ಉಡುಪಿ ನಗರಸಭೆಯ ಕೊಡವೂರು ವಾರ್ಡಿನ ಲಕ್ಷ್ಮೀನಗರ ಗರ್ಡೆಯಲ್ಲಿ ನೂತನವಾಗಿ ಆರಂಭಗೊಂಡ ನಮ್ಮ ಕ್ಲಿನಿಕ್ ಚಿಕಿತ್ಸಾಲಯ ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ. ಅಶೋಕ್, ನಗರಸಭಾ ಸದಸ್ಯರಾದ ವಿಜಯ ಕೊಡವೂರು, ತಾಲೂಕು ಆರೋಗ್ಯಾಧಿಕಾರಿ ವಾಸುದೇವ್, ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಸ್ಥಳೀಯ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.