ಬೇರುಮಟ್ಟದ ಶಿಕ್ಷಣದಲ್ಲಿ ಕನ್ನಡಕ್ಕೆ ಪ್ರಾಧಾನ್ಯತೆ ಇರಲಿ: ಕೆ.ವಿ.ಕೃಷ್ಣಮೂರ್ತಿ

| Published : Jan 05 2025, 01:34 AM IST

ಬೇರುಮಟ್ಟದ ಶಿಕ್ಷಣದಲ್ಲಿ ಕನ್ನಡಕ್ಕೆ ಪ್ರಾಧಾನ್ಯತೆ ಇರಲಿ: ಕೆ.ವಿ.ಕೃಷ್ಣಮೂರ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ನಾಡಿನಲ್ಲಿ ಕನ್ನಡ ಸಾಹಿತ್ಯ ಉಳಿದು, ಬೆಳಗಬೇಕಾದರೆ ಬೇರುಮಟ್ಟದ ಶಿಕ್ಷಣದಲ್ಲಿ ಕನ್ನಡ ಭಾಷೆಗೆ ಪ್ರಾಧಾನ್ಯತೆ ನೀಡಬೇಕು. ಆಗ ಕನ್ನಡ ಭಾಷೆಗೆ ಘನತೆ ಬರಲು ಸಾಧ್ಯ ಎಂದು ಕನ್ನಡನಾಡು ಹಿತರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ಹೇಳಿದರು. ಚನ್ನಗಿರಿಯಲ್ಲಿ 2025ರ ನೂತನ ವರ್ಷದ ಸಂಭ್ರಮಾಚರಣೆಯಲ್ಲಿ ಮಾತನಾಡಿದರು.

ಹೊಸ ವರ್ಷದ ಸಂಭ್ರಮ

ಚನ್ನಗಿರಿ: ನಾಡಿನಲ್ಲಿ ಕನ್ನಡ ಸಾಹಿತ್ಯ ಉಳಿದು, ಬೆಳಗಬೇಕಾದರೆ ಬೇರುಮಟ್ಟದ ಶಿಕ್ಷಣದಲ್ಲಿ ಕನ್ನಡ ಭಾಷೆಗೆ ಪ್ರಾಧಾನ್ಯತೆ ನೀಡಬೇಕು. ಆಗ ಕನ್ನಡ ಭಾಷೆಗೆ ಘನತೆ ಬರಲು ಸಾಧ್ಯ ಎಂದು ಕನ್ನಡನಾಡು ಹಿತರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ಹೇಳಿದರು.

ನಾಡಿನಲ್ಲಿ ಕನ್ನಡ ಸಾಹಿತ್ಯ ಉಳಿದು, ಬೆಳಗಬೇಕಾದರೆ ಬೇರುಮಟ್ಟದ ಶಿಕ್ಷಣದಲ್ಲಿ ಕನ್ನಡ ಭಾಷೆಗೆ ಪ್ರಾಧಾನ್ಯತೆ ನೀಡಬೇಕು. ಆಗ ಕನ್ನಡ ಭಾಷೆಗೆ ಘನತೆ ಬರಲು ಸಾಧ್ಯ ಎಂದು ಕನ್ನಡನಾಡು ಹಿತರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ಹೇಳಿದರು. ಚನ್ನಗಿರಿಯಲ್ಲಿ 2025ರ ನೂತನ ವರ್ಷದ ಸಂಭ್ರಮಾಚರಣೆಯಲ್ಲಿ ಮಾತನಾಡಿದರು.

ಪಟ್ಟಣದ ಕನ್ನಡನಾಡು ಹಿತರಕ್ಷಣಾ ಸಮಿತಿ ಕಚೇರಿಯಲ್ಲಿ ಬುಧವಾರ ಸಂಜೆ 2025ರ ನೂತನ ವರ್ಷದ ಸಂಭ್ರಮಾಚರಣೆಯಲ್ಲಿ ದೀಪ ಬೆಳಗಿಸಿ, ಕೇಕ್ ಕತ್ತರಿಸಿ ಪರಸ್ಪರ ಶುಭಾಶಯ ಕೋರಿ ಮಾತನಾಡಿದರು.

ವರ್ಷದಿಂದ ವರ್ಷಕ್ಕೆ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳು ಮಕ್ಕಳ ಹಾಜರಾತಿ ಕೊರತೆಯಿಂದಾಗಿ ಮುಚ್ಚುತ್ತಿವೆ. ಸರ್ಕಾರ ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸಿಕೊಳ್ಳಲು ದಾಖಲಾಗುವಂತಹ ಮಕ್ಕಳಿಗೆ ಶಿಕ್ಷಣಕ್ಕೆ ಬೇಕಾದ ಮೂಲ ಸೌಲಭ್ಯಗಳನ್ನು ಒದಗಿಸುತ್ತಿದೆ. ಆದರೂ, ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕೊರತೆ ಎದುರಾಗಿ, ಶಾಲೆ ಮುಚ್ಚುತ್ತಿರುವುದು ದೊಡ್ಡ ದುರಂತ ಎಂದು ಅತಂಕ ವ್ಯಕ್ತಪಡಿಸಿದರು.

ಸರ್ಕಾರಿ ಕನ್ನಡ ಶಾಲೆಗಳು ಉಳಿಯಬೇಕಾದರೆ ಎ ದರ್ಜೆಯಿಂದ ಹಿಡಿದು ಡಿ ದರ್ಜೆಯ ಎಲ್ಲ ಸರ್ಕಾರಿ ನೌಕರರ ಮಕ್ಕಳನ್ನು 1ರಿಂದ 7ನೇ ತರಗತಿಯವರೆಗೆ ಸರ್ಕಾರಿ ಕನ್ನಡ ಶಾಲೆಗಳಿಗೇ ಸೇರಿಸುವ ನಿಯಮ ಸರ್ಕಾರ ಕಡ್ಡಾಯವಾಗಿ ಜಾರಿಗೊಳಿಸಬೇಕು. ಆಗ ಕನ್ನಡ ಶಾಲೆಗಳು ಉಳಿಯಲು ಸಾಧ್ಯ. ಇಂತಹ ತೀರ್ಮಾನದಿಂದ ಮಕ್ಕಳಲ್ಲಿ ಸಮಾನತೆ ಬರಲಿದೆ. ಇಂತಹ ದೃಢ ನಿರ್ಧಾರ ಸರ್ಕಾರ ತೆಗೆದುಕೊಳ್ಳದಿದ್ದರೆ ಸಮಿತಿ ವತಿಯಿಂದ ಹೋರಾಟ ನಡೆಸಲಾಗುವುದು. ಇದು ನೂತನ ವರ್ಷದಲ್ಲಿ ಸಮಿತಿ ತೆಗೆದುಕೊಂಡ ಸಂಕಲ್ಪವಾಗಿದೆ ಎಂದರು.

ನಗರ ಘಟಕ ಅಧ್ಯಕ್ಷ ನಟರಾಜ ರಾಯ್ಕರ್, ತಾಲೂಕು ಸಮಿತಿ ಅಧ್ಯಕ್ಷ ಅಣ್ಣೋಜಿರಾವ್, ಮಹಿಳಾ ನಗರ ಘಟಕ ಅಧ್ಯಕ್ಷೆ ಶಶಿಕಲಾ, ಗೌರವ ಅಧ್ಯಕ್ಷೆ ನಾಗರತ್ನಮ್ಮ, ಕುಮಾರಪ್ಪ, ಸಚಿನ್ ಭಾಗವಹಿಸಿದ್ದರು.