ಪಕ್ಷದ ಪ್ರತಿ ಬೂತ್‌ ಬಲಪಡಿಸಲು ಆದ್ಯತೆ: ವಿಜಯೇಂದ್ರ

| Published : Jan 30 2024, 02:02 AM IST

ಸಾರಾಂಶ

ರಾಜ್ಯದ ಪ್ರತಿಯೊಂದು ಬೂತ್ ಅಧ್ಯಕ್ಷರು ಕೂಡ ಪಕ್ಷದ ಜೀವಾಳ. ಪಕ್ಷದ ಎಲ್ಲ ಬೂತ್‍ಗಳನ್ನು ಬಲಪಡಿಸಲು ಆದ್ಯತೆ ನೀಡುವುದಾಗಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಕನ್ನಡಪ್ರಭ ವಾರ್ತೆ ಶಹಾಪುರ

ರಾಜ್ಯದ ಪ್ರತಿಯೊಂದು ಬೂತ್ ಅಧ್ಯಕ್ಷರು ಕೂಡ ಪಕ್ಷದ ಜೀವಾಳ. ಪಕ್ಷದ ಎಲ್ಲ ಬೂತ್‍ಗಳನ್ನು ಬಲಪಡಿಸಲು ಆದ್ಯತೆ ನೀಡುವುದಾಗಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ನಗರದ ಸಿಪಿಎಸ್ ಶಾಲಾ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮಕ್ಕೂ ಮುನ್ನ ಇಲ್ಲಿನ 5ನೇ ವಾರ್ಡಿನ ಬೂತ್ ಸಂಖ್ಯೆ 166ರ ಅಧ್ಯಕ್ಷರ ಮನೆಗೆ ಭೇಟಿ ನೀಡಿ ಅವರು ಮಾತನಾಡಿದರು.

ಈ ವೇಳೆ ಚಂದ್ರಶೇಖರ್ ಮತ್ತು ಅವರ ಕುಟುಂಬಸ್ಥರ ಕುಶಲೋಪರಿ ವಿಚಾರಿಸಿ ಅವರಿಗೆ ಸಿಹಿ ತಿನ್ನಿಸಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸುವ ಪ್ರಯತ್ನ ಮಾಡಿದರು.

ಬಿಜೆಪಿಯಲ್ಲಿ ಬೂತ್ ಮಟ್ಟದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಪಕ್ಷದ ಸಂಘಟನೆಯಲ್ಲಿ ಬೂತ್ ಮಟ್ಟ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಬೂತ್ ಮಟ್ಟದ ಅಧ್ಯಕ್ಷರ ಮನೆಗೆ ಭೇಟಿ ಕೊಡುವ ಮೂಲಕ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುವ ಸಂದೇಶವನ್ನು ವಿಜಯೇಂದ್ರ ಅವರು ನೀಡಿದರು.

ಸಂಸದ ರಾಜಾ ಅಮರೇಶ್ವರ್ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ, ಗ್ರಾಮೀಣ ಮಂಡಲದ ಅಧ್ಯಕ್ಷ ರಾಜುಗೌಡ ಉಕ್ಕಿನಾಳ, ಸಿದ್ದರಾಮಪ್ಪ ಯಾಳಗಿ ಕುಂಬಾರ್, ರಾಜು ಯಾಳಗಿ ಕುಂಬಾರ್ ಹಾಗೂ ಕುಟುಂಬ ಸದಸ್ಯರು ಇದ್ದರು.