ಪೆಂಡಾಲ್ ಗಣಪತಿ ಪ್ರತಿಷ್ಠಾಪನೆಯ 72ನೇ ವರ್ಷದ ಕಾರ್ಯಕ್ರಮದ ಅಂಗವಾಗಿ ಗಣಪತಿ ಪೆಂಡಾಲ್‌ನಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರೀತಂಗೌಡ ಅವರು, ಮೋದಿ ಅವರು 12 ವರ್ಷ ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ 13 ವರ್ಷ ದೇಶದ ಪ್ರಧಾನಿಯಾಗಿ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅಭಿಯಾನ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ಪ್ರಧಾನಿ ನರೇಂದ್ರ ಮೋದಿ ಅವರ 76ನೇ ವರ್ಷದ ಜನ್ಮದಿನದ ಅಂಗವಾಗಿ ನಗರದ ಗಣಪತಿ ಪೆಂಡಲ್‌ನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಪ್ರಿತಂ ಜೆ. ಗೌಡ ಮತ್ತು ಕುಟುಂಬದವರಿಂದ ಹಾಗೂ ಬಿಜೆಪಿ ಮುಖಂಡರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.ನಗರದ ಪೆಂಡಾಲ್ ಗಣಪತಿ ಪ್ರತಿಷ್ಠಾಪನೆಯ 72ನೇ ವರ್ಷದ ಕಾರ್ಯಕ್ರಮದ ಅಂಗವಾಗಿ ಗಣಪತಿ ಪೆಂಡಾಲ್‌ನಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರೀತಂಗೌಡ ಅವರು, ಮೋದಿ ಅವರು 12 ವರ್ಷ ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ 13 ವರ್ಷ ದೇಶದ ಪ್ರಧಾನಿಯಾಗಿ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅಭಿಯಾನ ಆಯೋಜಿಸಲಾಗಿದೆ ಎಂದು ತಿಳಿಸಿದರು. ಅಭಿಯಾನದ ಅಂಗವಾಗಿ ಗುರುವಾರ ಸಂಜೆ 6 ಗಂಟೆಗೆ ಹಾಸನಾಂಬ ದೇವಸ್ಥಾನದ ಆವರಣದಲ್ಲಿ ದೀಪಗಳ ಅನಾವರಣ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ತಮ್ಮ ಮನೆಗಳಲ್ಲಿಯೂ ದೀಪ ಬೆಳಗಿಸಲಿದ್ದಾರೆ ಎಂದು ತಿಳಿಸಿದರು. ಮೋದಿ ಅವರ ಸಾರ್ವಜನಿಕ ಸೇವೆ ಮುಂದುವರಿಯಲಿ ಹಾಗೂ ದೇಶದ ಅಭಿವೃದ್ಧಿಗೆ ಅವರ ಪ್ರಯತ್ನಗಳಿಗೆ ಯಾವುದೇ ವಿಘ್ನ ಎದುರಾಗದಿರಲಿ ಎಂದು ಗಣಪತಿ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಪೆಂಡಾಲ್ ಗಣಪತಿ ಸೇವಾ ಸಮಿತಿ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿರುವುದಕ್ಕೆ ಮುಖಂಡರು ಕೃತಜ್ಞತೆ ಸಲ್ಲಿಸಿದರು.
ಇದೇ ವೇಳೆ ಶ್ರೀಗಣಪತಿ ಸೇವಾ ಸಂಸ್ಥೆ ಅಧ್ಯಕ್ಷ ಎಚ್. ನಾಗರಾಜು, ಕಾರ್ಯದರ್ಶಿ ಚನ್ನವೀರಪ್ಪ, ಧರ್ಮದರ್ಶಿಗಳಾದ ಕೆ.ಪಿ.ಎಸ್. ಪ್ರಮೋದ್, ನಗರಸಭೆ ಮಾಜಿ ಸದಸ್ಯ ಹೆಚ್.ಎಂ. ಸುರೇಶ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಪ್ರಧಾನಕಾರ್ಯದರ್ಶಿ ಅಮಿತ್ ಶೆಟ್ಟಿ ಇತರರು ಉಪಸ್ಥಿತರಿದ್ದರು.