ಪೃಥ್ವಿ ಹೆಗಡೆಗೆ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ

| Published : Jan 26 2024, 01:46 AM IST

ಪೃಥ್ವಿ ಹೆಗಡೆಗೆ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ತಾಳಿಕೋಟೆ: ಪಟ್ಟಣದ ಶ್ರೀ ವಿರಕ್ತೇಶ್ವರ ಭರತನಾಟ್ಯ ತರಬೇತಿ ಸಂಸ್ಥೆ ೭ ವರ್ಷದಿಂದ ಭರತನಾಟ್ಯ ಹಾಗೂ ಜನಪದ ನೃತ್ಯ ತರಬೇತಿ ಪಡೆದ ಕುಮಾರಿ ಪೃಥ್ವಿ ಹೆಗಡೆಗೆ ಗುರುವಾರ ವಿಜಯಪುರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ತಾಳಿಕೋಟೆ: ಪಟ್ಟಣದ ಶ್ರೀ ವಿರಕ್ತೇಶ್ವರ ಭರತನಾಟ್ಯ ತರಬೇತಿ ಸಂಸ್ಥೆ ೭ ವರ್ಷದಿಂದ ಭರತನಾಟ್ಯ ಹಾಗೂ ಜನಪದ ನೃತ್ಯ ತರಬೇತಿ ಪಡೆದ ಕುಮಾರಿ ಪೃಥ್ವಿ ಹೆಗಡೆಗೆ ಗುರುವಾರ ವಿಜಯಪುರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪೃಥ್ವಿ ಹೆಗಡೆ ಈಗಾಗಲೇ ಕರ್ನಾಟಕ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶಗಳಲ್ಲಿ ಕಾರ್ಯಕ್ರಮ ನೀಡಿದ್ದಾಳೆ. ಅಲ್ಲದೆ, ಚಂದನ ವಾಹಿನಿ ಹಾಗೂ ಶ್ರೀ ಬಸವ ವಾಹಿನಿಯಲ್ಲಿ ೨೩೧ ಕಾರ್ಯಕ್ರಮ ನೀಡಿದ್ದಾಳೆ.

ಈಗಾಗಲೇ ಪೃಥ್ವಿಗೆ ರಾಷ್ಟ್ರಮಟ್ಟದ, ರಾಜ್ಯಮಟ್ಟದ, ಜಿಲ್ಲಾ ಮಟ್ಟದ ಅನೇಕ ಪ್ರಶಸ್ತಿಗಳು ಲಭಿಸಿವೆ. ಅವಳ ಸಾಧನೆಯನ್ನು ಗುರುತಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯಪುರ ಇವರು ವಿಜಯಪುರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯಲ್ಲಿ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ ಹಾಗೂ ₹೧೦೦೦೦ ನಗದು ಬಹುಮಾನ ನೀಡಿ ಗೌರವಿಸಲಾಗಿದೆ.