ಸಾರಾಂಶ
ರಸ್ತೆಯಲ್ಲಿ ಹಾಕಿದ್ದ ನಾಮಫಲಕಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿ ಸಾವನ್ನಪ್ಪಿದ್ದು, 8 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಅಂಚೇಪಾಳ್ಯ ಬಳಿ ಶನಿವಾರ ನಡೆದಿದೆ.
ಕನ್ನಡಪ್ರಭ ವಾರ್ತೆ ಕುಣಿಗಲ್
ರಸ್ತೆಯಲ್ಲಿ ಹಾಕಿದ್ದ ನಾಮಫಲಕಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿ ಸಾವನ್ನಪ್ಪಿದ್ದು, 8 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಅಂಚೇಪಾಳ್ಯ ಬಳಿ ಶನಿವಾರ ನಡೆದಿದೆ.ಮಂಗಳೂರು ನಿವಾಸಿ ಖಾಸಗಿ ಬಸ್ ಚಾಲಕ ಮಹಮ್ಮದ್ ಇಬ್ರಾಹಿಂ (40) ಮೃತ ದುರ್ದೈವಿ. ಉಡುಪಿಯಿಂದ ಬೆಂಗಳೂರು ಕಡೆಗೆ ಕುಣಿಗಲ್ ಮಾರ್ಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಳವಡಿಸಿದ್ದ ಸ್ವಾಗತ ಕೋರುವ ನಾಮಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಉರುಳಿ ಬಿದ್ದಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ತುಮಕೂರು ಎಎಸ್ಪಿ ಮರಿಯಪ್ಪ, ಸಿಪಿಐ ನವೀನ್‌ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.;Resize=(128,128))
;Resize=(128,128))