ಸಾರಾಂಶ
ಹೊಸಕೋಟೆ: ಎರಡು ಖಾಸಗಿ ಬಸ್‌ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಚಾಲಕ ಮೃತಪಟ್ಟು 17 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು-ಕೋಲಾರ ರಾಷ್ಟ್ರೀಯ ಹೆದ್ದಾರಿ-೫ರ ಸಂತೆಗೇಟ್ ಮೇಲ್ಸೇತುವೆ ಮೇಲೆ ಮಂಗಳವಾರ ರಾತ್ರಿ 11.30ಕ್ಕೆ ದುರ್ಘಟನೆ ಸಂಭವಿಸಿದೆ.
ಹೊಸಕೋಟೆ: ಎರಡು ಖಾಸಗಿ ಬಸ್‌ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಚಾಲಕ ಮೃತಪಟ್ಟು 17 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು-ಕೋಲಾರ ರಾಷ್ಟ್ರೀಯ ಹೆದ್ದಾರಿ-೫ರ ಸಂತೆಗೇಟ್ ಮೇಲ್ಸೇತುವೆ ಮೇಲೆ ಮಂಗಳವಾರ ರಾತ್ರಿ 11.30ಕ್ಕೆ ದುರ್ಘಟನೆ ಸಂಭವಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿನ್ನಕಾಯಿಲಪಲ್ಲಿ ಗ್ರಾಮದ ಪ್ರಭಾಕರ್(42) ಮೃತ ಚಾಲಕ. ಹೊಸಕೋಟೆ ತಾಲೂಕಿನ ಚಿಕ್ಕನಹಳ್ಳಿ ಗೇಟ್ ಬಳಿ ಇರುವ ಮೆಡ್ರಿಚ್ ಕಂಪನಿಗೆ ಕಾರ್ಮಿಕರನ್ನು ಕೊಂಡೊಯ್ಯಲು ಗುತ್ತಿಗೆ ಪಡೆದಿದ್ದ ಖಾಸಗಿ ಕಂಪನಿಯ ಎರಡು ಬಸ್‌ಗಳ ನಡುವೆ ಅಪಘಾತ ಸಂಭವಿಸಿದೆ. ಮಂಗಳವಾರ ರಾತ್ರಿ ಪಾಳಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಸಂತೆಗೇಟ್ ಮೇಲ್ಸೇತುವೆ ಮೇಲೆ ಮುಂದೆ ಚಲಿಸುತ್ತಿದ್ದ ಬಸ್ ಏಕಾಏಕಿ ಬ್ರೇಕ್ ಹಾಕಿದ ಸಂದರ್ಭದಲ್ಲಿ ಹಿಂದೆ ಬರುತ್ತಿದ್ದ ಇನ್ನೊಂದು ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಬಸ್‌ನಲ್ಲಿದ್ದ 17 ಕಾರ್ಮಿಕರು ಅಪಘಾತದ ವೇಳೆ ಗಾಯಗಳಾಗಿ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಇನ್ನು ಹಿಂಬದಿ ಬಸ್ ಚಾಲಕ ಪ್ರಭಾಕರ್ ತೀವ್ರ ಗಾಯಗಳಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ.ಅಪಘಾತ ವಿಚಾರ ತಿಳಿಯುತ್ತಿದ್ದಂತೆ ಹೊಸಕೋಟೆ ಉಪವಿಭಾಗದ ಡಿವೈಎಸ್ಪಿ ಮಲ್ಲೇಶ್, ಸಂಚಾರ ಠಾಣೆ ಇನ್‌ಪೆಕ್ಟರ್ ಶ್ರೀಕಂಠಯ್ಯ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಣ ಮಾಡಿದರು.
ಫೋಟ 10 ಹೆಚ್‌ಎಸ್‌ಕೆ 1 2 31 ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿ ೭೫ರ ಸಂತೆಗೇಟ್ ಮೇಲ್ಸೇತುವೆ ಮೇಲೆ ಎರಡು ಬಸ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಡಿವೈಎಸ್ಪಿ ಮಲ್ಲೇಶ್ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.
2: ಅಪಘಾತದಲ್ಲಿ ಜಖಂಗೊಂಡಿರುವ ಬಸ್.3: ಮೃತ ಚಾಲಕ ಪ್ರಭಾಕರ್.