ಸಾರಾಂಶ
ಬಾಳಿ ಬದುಕಬೇಕಾಗಿದ್ದ ಇಬ್ಬರು ಮಕ್ಕಳು ಜವರಾಯನ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. ಮೃತರನ್ನು ಮಹಾರಾಷ್ಟ್ರ ಸಾಂಗ್ಲಿ ಮೂಲದ ಬಾಲಕ ಯಶ್ ಸಾವಂತ(14) ಹಾಗೂ ಬಾಲಕಿ ಐರ್ಣವಿ ಮಹಾಡಿ(11) ಎಂದು ಗುರುತಿಸಲಾಗಿದೆ.
ಬ್ಯಾಡಗಿ: ಖಾಸಗಿ ಬಸ್ಸೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಓರ್ವ ಬಾಲಕ ಹಾಗೂ ಓರ್ವ ಬಾಲಕಿ ಸ್ಥಳದಲ್ಲಿಯೇ ಸಾವಿಗೀಡಾದ ಹೃದಯವಿದ್ರಾವಕ ಘಟನೆ ಮಂಗಳವಾರ ಬೆಳಗಿನ ಜಾವ 3.30 ಗಂಟೆ ಸುಮಾರಿಗೆ ಮೋಟೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನ ಬಳಿ ನಡೆದಿದೆ.
ಬಾಳಿ ಬದುಕಬೇಕಾಗಿದ್ದ ಇಬ್ಬರು ಮಕ್ಕಳು ಜವರಾಯನ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. ಮೃತರನ್ನು ಮಹಾರಾಷ್ಟ್ರ ಸಾಂಗ್ಲಿ ಮೂಲದ ಬಾಲಕ ಯಶ್ ಸಾವಂತ(14) ಹಾಗೂ ಬಾಲಕಿ ಐರ್ಣವಿ ಮಹಾಡಿ(11) ಎಂದು ಗುರುತಿಸಲಾಗಿದ್ದು, ಈ ಮಕ್ಕಳು ಕಿಟಕಿ ಪಕ್ಕ ಕುಳಿತಿದ್ದು, ಬಸ್ ಪಲ್ಟಿಯಾದಾಗ ವಾಹನದ ಅಡಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದು, ಸಾವು- ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. 13 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳವಾಗಿವೆ. ಗಂಭೀರವಾಗಿ ಗಾಯಗೊಂಡವರನ್ನು ಹುಬ್ಬಳ್ಳಿಯ ಕೆಎಂಸಿಆರ್‌ಐಗೆ ದಾಖಲಿಸಲಾಗಿದೆ.ಘಟನೆ ಹಿನ್ನೆಲೆ: ಮಹಾರಾಷ್ಟ್ರ ವಿಟಿ ಸ್ಟೇಷನ್‌ನಿಂದ ಕೊಯಿಮತ್ತೂರು ತೆರಳುತ್ತಿದ್ದ ಖಾಸಗಿ ಬಸ್ ಹಾವೇರಿ ಮಾರ್ಗವಾಗಿ ರಾಣಿಬೆನ್ನೂರು ಕಡೆಗೆ ಸಂಚರಿಸುವ ವೇಳೆ ಘಟನೆ ನಡೆದಿದೆ. ಮೋಟೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಅಪಘಾತ ಸಂಭವಿಸಿದೆ.
ಘಟನೆ ನಡೆದ ಕೂಡಲೇ ಸ್ಥಳಿಯರು ಆಗಮಿಸಿ ಹಲವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ನಂತರ ಪೊಲೀಸ್ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.ಸಾಲಬಾಧೆ ತಾಳದೇ ರೈತ ಆತ್ಮಹತ್ಯೆಹಾವೇರಿ: ಸಾಲಬಾಧೆ ತಾಳಲಾರದೇ ರೈತರೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕೂರಗುಂದ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಕೂರಗುಂದ ಗ್ರಾಮದ ನಾಗಪ್ಪ ರಾಮಪ್ಪ ಪೂಜಾರ(32) ಮೃತ ದುರ್ದೈವಿ. ಈತ ಮೂರು ವರ್ಷದ ಹಿಂದೆ ಕೃಷಿ ಕೆಲಸಕ್ಕೆಂದು ಟ್ರ್ಯಾಕ್ಟರ್ ಖರೀದಿಗೆ, ಬೀಜಗೊಬ್ಬರಕ್ಕೆಂದು ಖಾಸಗಿ ಫೈನಾನ್ಸ್‌ನಲ್ಲಿ ₹5 ಲಕ್ಷ ಹಾಗೂ ಸಿಂಡಿಕೇಟ್ ಬ್ಯಾಂಕಿನಲ್ಲಿ ₹5 ಲಕ್ಷ ಒಟ್ಟು ₹10 ಲಕ್ಷ ಸಾಲ ಮಾಡಿದ್ದರು. ಎರಡು ವರ್ಷಗಳಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಬೆಳೆಗಳು ಸರಿಯಾಗಿ ಬಾರದ ಹಿನ್ನೆಲೆ ಮನನೊಂದಿದ್ದರು. ಮಾಡಿದ ಸಾಲವನ್ನು ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದಿರುವಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ರೂಪಾ ಪೂಜಾರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.