ವಿವಿಧ ಬೇಡಿಕೆ ಈಡೇರಿಕೆಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿಭಟನೆ

| Published : Jul 18 2025, 12:57 AM IST

ವಿವಿಧ ಬೇಡಿಕೆ ಈಡೇರಿಕೆಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಲೆಗಳನ್ನು ಬಂದ್ ಮಾಡಿ ಪಟ್ಟಣದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಿ ತಹಶೀಲ್ದಾರಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಹರಪನಹಳ್ಳಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಲೆಗಳನ್ನು ಬಂದ್ ಮಾಡಿ ಪಟ್ಟಣದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಿ ತಹಶೀಲ್ದಾರಗೆ ಮನವಿ ಸಲ್ಲಿಸಲಾಯಿತು.

ಮೊದಲು ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಗೆ ತೆರಳಿ ಬಿಇಒಗೆ ಮನವಿ ಸಲ್ಲಿಸಿದ ನಂತರ ಹೊಸಪೇಟೆ ರಸ್ತೆ ಮೂಲಕ ಪ್ರವಾಸಿ ಮಂದಿರ ವೃತ್ತದಲ್ಲಿ ಬಹಿರಂಗ ಸಭೆ ನಡೆಸಿ ತಾಲೂಕು ಆಡಳಿತ ಸೌಧಕ್ಕೆ ತೆರಳಿ ತಹಶೀಲ್ದಾರಗೆ ಮನವಿ ಸಲ್ಲಿಸಿದರು.

ಬೇಡಿಕೆಗಳು:

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ನವೀಕರಣ ಪ್ರಕ್ರಿಯೆ ಸರಳಗೊಳಿಸಬೇಕು, 1995ರ ನಂತರ ಪ್ರಾರಂಭವಾದ ಖಾಸಗಿ ಶಾಲಾ ಕಾಲೇಜುಗಳನ್ನು ಅನುದಾನಕ್ಕೊಳಪಡಿಸಬೇಕು. 371ಜೆ ಅಡಿ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡಬೇಕು.

ಬಡ ಮಕ್ಕಳಿಗೆ ಅನುಕೂಲವಾಗುವ ಆರ್‌ಟಿಇ ಮರು ಜಾರಿಯಾಗಬೇಕು, ಹೊಸ ಶಾಲೆಗಳನ್ನು ಪ್ರಾರಂಭಿಸಲು ನಿಯಮಗಳನ್ನು ಸರಳೀಕರಣಗೊಳಿಸಬೇಕು ಎಂಬ ಬೇಡಿಕೆಗಳ ಮುಂದಿಟ್ಟು ಹೋರಾಟ ಮಾಡಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ಅಧ್ಯಕ್ಷ ಬಸವರಾಜ ಕೊಂಡಜ್ಜಿ, ಉಪಾಧ್ಯಕ್ಷರಾದ ಡಾ. ರವಿ ಅಧಿಕಾರ, ಮಂಜುನಾಥ ಪೂಜಾರ, ದಾದಾಪೀರ, ಸಿ.ಬಸವರಾಜ, ಕಾರ್ಯದರ್ಶಿ ಡಿ.ಪಿ. ಮಲ್ಲಿಕಾರ್ಜುನ, ಅನಿಲ್‌, ಪಿ.ಮಂಜುನಾಥ, ಹಾಶೀಮ್, ಮಹಾರುದ್ದಾಚಾರ್, ತಾನಾಜಿ, ಅನ್ನಪೂರ್ಣ, ಚೆನ್ನಬಸವನಗೌಡ, ಸಂತೋಷ, ಆನಂದಪ್ಪ, ಅರವಿಂದ, ಬಸವಲಿಂಗಪ್ಪ, ವೀರೇಶ, ಕೆ.ಎಸ್. ಬಸವರಾಜಪ್ಪ, ತಿಮ್ಮಪ್ಪ ಹಾಗೂ ಶಿಕ್ಷಕರು, ಸಿಬ್ಬಂದಿ ಪಾಲ್ಗೊಂಡಿದ್ದರು.