ಮೂಲ್ಕಿ: ಆರ್ಥಿಕವಾಗಿ ಹಿಂದುಳಿದವರಿಗೆ ಸಹಕಾರಿ ಬ್ಯಾಂಕುಗಳು ಜನಸ್ನೇಹಿಯಾಗಿದ್ದು ಪ್ರಿಯದರ್ಶಿನಿ ಕೋ -ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್. ವಸಂತ್ ಬೆರ್ನಾಡ್ ನೇತೃತ್ವದಲ್ಲಿ ಅಸಹಾಯಕರಿಗೆ ಸಹಾಯ ಹಸ್ತದಂತಹ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದು ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ ಹೇಳಿದ್ದಾರೆ.ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿಯ ಕಿನ್ನಿಗೋಳಿ ಶಾಖೆಯ ಆವರಣದಲ್ಲಿ ಜರಗಿದ ಎರಡನೇ ವರ್ಷದ ವಾರ್ಷಿಕೋತ್ಸವದಲ್ಲಿ ಕಿನ್ನಿಗೋಳಿ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್ ವಿದ್ಯಾರ್ಥಿಗಳಿಗೆ ಹೊಲಿಗೆ ಯಂತ್ರ ವಿತರಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್ ವಸಂತ್ ಬೆರ್ನಾಡ್ ವಹಿಸಿ ಮಾತನಾಡಿ, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಸಹಕಾರಿ ಧುರೀಣ ದಿ.ನಾರಾಯಣ ಸನಿಲ್ ಹಾಗೂ ಪಂಜದ ಗುತ್ತು ದಿ.ಶಾಂತರಾಮ ಶೆಟ್ಟಿ ಪ್ರೇರಣೆಯಿಂದ ಆರಂಭಗೊಂಡಿದ್ದು 5 ವರ್ಷದಲ್ಲಿ 38 ಕೋಟಿ ಠೇವಣಿ ಹೊಂದಿದೆ. ಮಾಜಿ ಸಚಿವ ಕೆ. ಅಭಯ ಚಂದ್ರ ಜೈನ್ ಸಹಕಾರದಿಂದ ಸೊಸೈಟಿ ಈಗಾಗಲೇ ನಾಲ್ಕು ಶಾಖೆಗಳನ್ನು ಹೊಂದಿದ್ದು, ಆರ್ಥಿಕ ಸಹಾಯ ಹಸ್ತ , ಉದ್ಯೋಗ ಸೃಷ್ಟಿ ಹಾಗೂ ಗ್ರಾಹಕರ ಸಹಕಾರದಿಂದ ಯಶಸ್ಸು ಸಾಧಿಸಿದೆ ಎಂದು ಹೇಳಿದರು.ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಸದಸ್ಯೆ ಕೋಕಿಲ ಡಿ ಅಮೀನ್, ಕಿನ್ನಿಗೋಳಿ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್ ನ ಮುಖ್ಯೋಪಾಧ್ಯಾಯಿನಿ ರೇಷ್ಮಾ ಮಾರ್ಟಿನ್ , ಸೊಸೈಟಿ ಉಪಾಧ್ಯಕ್ಷ ವಿಜಯಕುಮಾರ್ ಸನಿಲ್, ನಿರ್ದೇಶಕರಾದ ಗಣೇಶ್ ಪ್ರಸಾದ್ ದೇವಾಡಿಗ, ರೇಖಾ ಶೆಟ್ಟಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ , ಶಾಖಾ ಪ್ರಬಂಧಕಿ ಅಕ್ಷತಾ ಶೆಟ್ಟಿ , ಸಿಬ್ಬಂದಿ ಕ್ಯಾರಲ್ ಡಿಸೋಜಾ, ದೀಪಕ್ ಸಾಲ್ಯಾನ್,ರೇಷ್ಮಾ ಮತ್ತಿತರರು ಇದ್ದರು.ಸೊಸೈಟಿ ಅಧ್ಯಕ್ಷ ಎಚ್ ವಸಂತ್ ಬೆರ್ನಾಡ್ ಸ್ವಾಗತಿಸಿದರು. ಕಾರ್ಯನಿರ್ವಣಾಧಿಕಾರಿ ಸುದರ್ಶನ್ ಪೂಜಾರಿ ವಂದಿಸಿದರು, ಪ್ರಬಂಧಕಿ ಅಕ್ಷತಾ ಶೆಟ್ಟಿ ನಿರೂಪಿಸಿದರು.
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸ್ಯೆಟಿ ಕಿನ್ನಿಗೋಳಿ ಶಾಖೆ ವಾರ್ಷಿಕೋತ್ಸವ
ಆರ್ಥಿಕವಾಗಿ ಹಿಂದುಳಿದವರಿಗೆ ಸಹಕಾರಿ ಬ್ಯಾಂಕುಗಳು ಜನಸ್ನೇಹಿಯಾಗಿದ್ದು ಪ್ರಿಯದರ್ಶಿನಿ ಕೋ -ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್. ವಸಂತ್ ಬೆರ್ನಾಡ್ ನೇತೃತ್ವದಲ್ಲಿ ಅಸಹಾಯಕರಿಗೆ ಸಹಾಯ ಹಸ್ತದಂತಹ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದು ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ ಹೇಳಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.