ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳು ಮತ್ತು ಸ್ಟಿಂಗ್ ಆಪರೇಷನ್ ಪ್ರಕರಣದ ವಿಚಾರವಾಗಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ವಿಧಾನ ಪರಿಷತ್ ಸದಸ್ಯ ಬೋಜೇಗೌಡ, ಪ್ರಿಯಾಂಕ್ ಖರ್ಗೆ ಅವರು ತಮ್ಮ ಮಾತುಗಳಿಗೆ ಕಡಿವಾಣ ಹಾಕಬೇಕು ಹಾಗೂ ಹಳ್ಳಿಗಾಡಿನ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಪ್ರಿಯಾಂಕ್ ಖರ್ಗೆ ವಿದ್ಯಾವಂತರಾಗಿದ್ದು, ತಮ್ಮ ಪದವಿಗೆ ತಕ್ಕಂತೆ ಜವಾಬ್ದಾರಿಯುತವಾಗಿ ಮಾತನಾಡಬೇಕು. ಗ್ರಾಮೀಣ ಜನರನ್ನು ಅವಹೇಳನ ಮಾಡುವ ಪದಗಳನ್ನು ಬಳಸುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಹಳ್ಳಿಗಾಡಿನ ಜನರ ಬಗ್ಗೆ ನೀಡಿರುವ ಹೇಳಿಕೆಗಳಿಗೆ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳು ಮತ್ತು ಸ್ಟಿಂಗ್ ಆಪರೇಷನ್ ಪ್ರಕರಣದ ವಿಚಾರವಾಗಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ವಿಧಾನ ಪರಿಷತ್ ಸದಸ್ಯ ಬೋಜೇಗೌಡ, ಪ್ರಿಯಾಂಕ್ ಖರ್ಗೆ ಅವರು ತಮ್ಮ ಮಾತುಗಳಿಗೆ ಕಡಿವಾಣ ಹಾಕಬೇಕು ಹಾಗೂ ಹಳ್ಳಿಗಾಡಿನ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ನಗರದಲ್ಲಿ ಶ್ರೀ ಹಾಸನಾಂಬಾ ದೇವಿಯ ದರ್ಶನ ಕುಟುಂಬ ಸಮೇತ ಬಂದು ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ಮಾಡಿರುವುದಾಗಿ ಸ್ವತಃ ಹೇಳಿಕೊಂಡಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಧೈರ್ಯವಿಲ್ಲವೇ ಎಂದು ಪ್ರಶ್ನಿಸಿದರು. ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ದೂರು ನೀಡಿದ್ದಾರೆ ಎನ್ನಲಾಗಿದ್ದು, ಪ್ರಕರಣದಲ್ಲಿ ಮಾಧ್ಯಮದ ವ್ಯಕ್ತಿ ಹಾಗೂ ಮಹಿಳೆಯ ಹೆಸರುಗಳು ಕೇಳಿಬಂದಿದ್ದರೂ ಈವರೆಗೆ ಏಕೆ ಕ್ರಮ ಕೈಗೊಂಡಿಲ್ಲ? ಇದರ ಹಿಂದೆ ಯಾರನ್ನು ರಕ್ಷಿಸುವ ಉದ್ದೇಶವಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಪ್ರಿಯಾಂಕ್ ಖರ್ಗೆ ವಿದ್ಯಾವಂತರಾಗಿದ್ದು, ತಮ್ಮ ಪದವಿಗೆ ತಕ್ಕಂತೆ ಜವಾಬ್ದಾರಿಯುತವಾಗಿ ಮಾತನಾಡಬೇಕು. ಗ್ರಾಮೀಣ ಜನರನ್ನು ಅವಹೇಳನ ಮಾಡುವ ಪದಗಳನ್ನು ಬಳಸುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಹಳ್ಳಿಗಾಡಿನ ಜನರ ಬಗ್ಗೆ ನೀಡಿರುವ ಹೇಳಿಕೆಗಳಿಗೆ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.ಸ್ಟಿಂಗ್ ಆಪರೇಷನ್‌ಗೆ ಕಾಂಗ್ರೆಸ್‌ನವರೇ ಕಾರಣರಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹಾಗಾದರೆ ಇದಕ್ಕೆ ಸಂಬಂಧಿಸಿದ ಸಚಿವರ ವಿರುದ್ಧ ಕ್ರಮ ಕೈಗೊಳ್ಳಲಿ ಅಥವಾ ಸ್ಟಿಂಗ್ ನಡೆಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಿ. ಸರ್ಕಾರ ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡಬಾರದು. ಗೃಹ ಸಚಿವರಾಗಿ ಪ್ರಿಯಾಂಕ್ ಖರ್ಗೆ ಕಾರ್ಯನಿರ್ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅವಕಾಶ ಕಲ್ಪಿಸಿದ್ದಾರೆ. ಹೀಗಿರುವಾಗ ಪ್ರಕರಣದ ವಿಚಾರದಲ್ಲಿ ಸರ್ಕಾರದ ಹೊಣೆಗಾರಿಕೆ ಏನು ಎಂಬುದನ್ನು ಜನರಿಗೆ ತಿಳಿಸಬೇಕು ಎಂದರು.ಇನ್ನು ಪ್ರಕರಣಕ್ಕೆ ಸಂಬಂಧಿಸಿದ ಮಹಿಳೆಯನ್ನು ವಿದೇಶಕ್ಕೆ ತೆರಳುವಂತೆ ಮಾಡಿರುವ ವಿಚಾರವೂ ಹಲವು ಅನುಮಾನಗಳಿಗೆ ಕಾರಣವಾಗಿದೆ. ಕುಮಾರಸ್ವಾಮಿ ಅವರ ಮನೆಯಲ್ಲಿ ಫೋನ್ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಆದರೆ ೨೪ ಗಂಟೆಯೊಳಗೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ್ದೇಕೆ? ಅವರನ್ನು ಸಮಾಧಾನಪಡಿಸಲು ಹೋಗಿದ್ದರೇ ಎಂಬ ಪ್ರಶ್ನೆ ಮೂಡುತ್ತದೆ. ಈಗಾಗಲೇ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ಚಿಟ್ ನೀಡಲಾಗಿದೆ ಎನ್ನಲಾಗುತ್ತಿದ್ದರೂ ಮೊಬೈಲ್ ಹಾಗೂ ಕ್ಯಾಸೆಟ್‌ಗಳಿಗಾಗಿ ಹುಡುಕಾಟ ನಡೆಸುತ್ತಿರುವುದರ ಉದ್ದೇಶವೇನು? ಈ ಎಲ್ಲ ಬೆಳವಣಿಗೆಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು. ೧೮ ಬಾರಿ ಬಜೆಟ್ ಮಂಡಿಸಿ, ಹಲವು ಜನಪರ ಭಾಗ್ಯ ಯೋಜನೆಗಳ ಮೂಲಕ ಹೆಸರು ಮಾಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಜೀವನಕ್ಕೆ ಈ ಪ್ರಕರಣದಿಂದ ಉಂಟಾಗಿರುವ ಕಳಂಕ ನಿವಾರಣೆಯಾಗಬೇಕು. ಕಾಂಗ್ರೆಸ್ ಪಕ್ಷದ ಮೇಲಿರುವ ಆರೋಪಗಳಿಗೂ ಸ್ಪಷ್ಟನೆ ಸಿಗಬೇಕು. ಕರ್ನಾಟಕಕ್ಕೆ ಸ್ಟಿಂಗ್ ಆಪರೇಷನ್‌ಗಳ ಮೂಲಕ ಕೆಟ್ಟ ಹೆಸರು ಬರುವಂತಾಗಬಾರದು. ಸತ್ಯಾಸತ್ಯತೆ ಹೊರಬರಲು ಸಮಗ್ರ ತನಿಖೆ ನಡೆಸುವುದು ಅಗತ್ಯ ಎಂದು ಬೋಜೇಗೌಡ ಹೇಳಿದರು.