ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ವತಿಯಿಂದ ಪುತ್ತೂರಿನ ನೆಹರೂ ನಗರದ ವಿವೇಕಾನಂದ ಸಿ.ಬಿ.ಎಸ್.ಇ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಗಣಿತ ವಿಜ್ಞಾನ ಮೇಳದ ಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಹಲವು ಬಹುಮಾನಗಳನ್ನು ಗಳಿಸಿದ್ದಾರೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ವತಿಯಿಂದ ಪುತ್ತೂರಿನ ನೆಹರೂ ನಗರದ ವಿವೇಕಾನಂದ ಸಿ.ಬಿ.ಎಸ್.ಇ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಗಣಿತ ವಿಜ್ಞಾನ ಮೇಳದ ಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಹಲವು ಬಹುಮಾನಗಳನ್ನು ಗಳಿಸಿದ್ದಾರೆ.
ಕಿಶೋರ್ ವರ್ಗದ ಬಾಲಕರ ವಿಭಾಗದಲ್ಲಿ ೯ನೇ ತರಗತಿಯ ಪ್ರೇಮ್ ಇ ವೈದಿಕ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ೯ನೇ ತರಗತಿಯ ಮೋಕ್ಷಿತ್ ಬಿ ಎಸ್ ವೈದಿಕ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ೧೦ನೇ ತರಗತಿಯ ಸೋನಾ ಪೃಥ್ವಿ ವೈದಿಕ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ೯ನೇ ತರಗತಿಯ ಸೌಪರ್ಣಿಕಾ ಎಸ್ ದಾನೆಗೊಂಡರ್ ಗಣಿತ ಪ್ರಯೋಗ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.೮ನೇ ತರಗತಿಯ ಸಾನ್ವಿ ಜಿ ಗಣಿತ ಮಾದರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ೭ನೇ ತರಗತಿಯ ಶ್ರೀಯಾ ವಿ ಎಂ ವೈದಿಕ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ೬ನೇ ತರಗತಿಯ ನೈಮಿಶಾ ಪಿ ವಿ ವೈದಿಕ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ೮ನೇ ತರಗತಿಯ ಸುಧನ್ವ ಕೆ ವೈದಿಕ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ೭ನೇ ತರಗತಿಯ ಸುಧಾಂಶು ಎಲ್ ಶೆಟ್ಟಿ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.