ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಯಿಂದ ಪ್ರತಿಭಟನೆ

| Published : May 06 2025, 12:17 AM IST

ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಯಿಂದ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಸುಹಾಸ್‌ ಶೆಟ್ಟಿ ಕೊಲೆ ಪಾತಕಿಗಳ ಪತ್ತೆ ನಿಗೂಢವಾದಂತಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ಮೇಲೆ ತನಿಖೆ ಮಾಡಿ ಶಿಕ್ಷೆ ನೀಡಲಿದೆ ಎಂಬುದರಲ್ಲಿ ಅನುಮಾನ ಕಾಡುತ್ತಿದೆ. ಎನ್‌ಐಎ ಅಧಿಕಾರಿಗಳಿಗೆ ಈ ಹತ್ಯೆ ಪ್ರಕರಣವನ್ನು ವಹಿಸಲು ಸರ್ಕಾರ ಮುಂದಾಗಬೇಕು.

ಕನ್ನಡಪ್ರಭ ವಾರ್ತೆ ಕಿಕ್ಕೇರಿ

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸುಹಾಸ್ ಶೆಟ್ಟಿ ಹತ್ಯೆ ವ್ಯವಸ್ಥಿತ ಕೊಲೆಯಾಗಿದೆ. ಆರೋಪಿಗಳನ್ನು ಬಂಧಿಸಲು ಅಗತ್ಯ ಕ್ರಮವಹಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಬಜರಂಗದಳದ ಕಾರ್ಯಕರ್ತ ಅಕ್ಷಯ್ ಮಾತನಾಡಿ, ಸುಹಾಸ್‌ ಶೆಟ್ಟಿ ಕೊಲೆ ಪಾತಕಿಗಳ ಪತ್ತೆ ನಿಗೂಢವಾದಂತಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ಮೇಲೆ ತನಿಖೆ ಮಾಡಿ ಶಿಕ್ಷೆ ನೀಡಲಿದೆ ಎಂಬುದರಲ್ಲಿ ಅನುಮಾನ ಕಾಡುತ್ತಿದೆ. ಎನ್‌ಐಎ ಅಧಿಕಾರಿಗಳಿಗೆ ಈ ಹತ್ಯೆ ಪ್ರಕರಣವನ್ನು ವಹಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಹಿಂದೂ ಕಾರ್ಯಕರ್ತರ ಮೇಲೆ ಇತ್ತೀಚೆಗೆ ಹಲ್ಲೆ, ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿಯುತ್ತಿದೆ ಎಂಬ ಅನುಮಾನ ಕಾಡುತ್ತಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪವನ್, ಅಲೋಕ್, ವಿಜಯ್, ವಿನೋದ್, ರಾಮು, ಯಶ್ವಂತ್, ಚೇತನ್, ಸೀನಾ, ರಾಕೇಶ್, ಚಿರು ಹಲವರು ಭಾಗವಹಿಸಿದ್ದರು.

ಮಹರ್ಷಿ ಭಗೀರಥ ಜಯಂತಿ ಆಚರಣೆ

ಶ್ರೀರಂಗಪಟ್ಟಣ:

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಹರ್ಷಿ ಭಗೀರಥರ ಜಯತಿಯನ್ನು ಆಚರಿಸಲಾಯಿತು.

ತಹಸೀಲ್ದಾರ್ ಪರಶುರಾಮ್ ಸತ್ತೀಗೇರಿ ಸೇರಿದಂತೆ ಸಮುದಾಯದ ಮುಖಂಡರು ಮಹರ್ಷಿ ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಜಯಂತಿ ಆಚರಿಸಿದರು. ಈ ವೇಳೆ ಶ್ರೀಭಗೀರಥ ಉಪ್ಪಾರ ಸಂಘದ ತಾಲೂಕು ಅಧ್ಯಕ್ಷ ಸೋಮು, ಮೇಸ್ತ್ರಿ ಮಹದೇವು, ಬಸವರಾಜು, ಕುಮಾರ, ಮಹದೇವು, ಬೆಳಗೊಳ ಪುನೀತ್ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.