ದಾಬಸ್‍ಪೇಟೆ: ಮಂಗಳವಾರ ಬೆಳಗಿನ ಜಾವ ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಹಿಂದೂಪರ ಸಂಘಟನೆ, ಬಜರಂಗದಳ ಹಾಗೂ ಶ್ರೀರಾಮ ಸೇನೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ, ಸಾಗಾಟ ತಡೆದಿರುವ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಸಮೀಪದ ಲ್ಯಾಂಕೋಟೋಲ್ ಬಳಿ ಬೆಂಗಳೂರಿನ ಕಡೆಗೆ ತೆರಳುತ್ತಿದ್ದ ಕಾರೊಂದನ್ನು ತಡೆದು ಪರಿಶೀಲಿಸಿದ ವೇಳೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಲಾಗುತ್ತಿರುವುದು ಬೆಳಕಿಗೆ ಬಂದಿದೆ. ಕಾರಿನ ಚಾಲಕ ಕಾಜಿರ್ ಅಬ್ಬರ್ ಎಂಬಾತ ವಾರಕ್ಕೆ ಮೂರು ಬಾರಿ ಗೋಮಾಂಸ ಸಾಗಾಟ ಮಾಡುತ್ತಿದ್ದಾನೆ ಎಂದು ಸಂಘಟನೆಗಳ ಕಾರ್ಯಕರ್ತರು ಆರೋಪಿಸಿದ್ದಾರೆ. ಈ ಕಾರಿನಲ್ಲಿ ಚನ್ನರಾಯಪಟ್ಟಣದಿಂದ ಶಿವಾಜಿನಗರಕ್ಕೆ ಸುಮಾರು 15 ಹಸುವಿನ ಕರುಗಳ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಘಟನೆಯ ಮಾಹಿತಿ ತಿಳಿದು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಅಕ್ರಮ ಗೋಮಾಂಸ ಸಾಗಣೆ ತಡೆದ ಹಿಂದೂಪರ ಸಂಘಟನೆಗಳು
ಕಾರಿನ ಚಾಲಕ ಕಾಜಿರ್ ಅಬ್ಬರ್ ಎಂಬಾತ ವಾರಕ್ಕೆ ಮೂರು ಬಾರಿ ಗೋಮಾಂಸ ಸಾಗಾಟ ಮಾಡುತ್ತಿದ್ದಾನೆ ಎಂದು ಸಂಘಟನೆಗಳ ಕಾರ್ಯಕರ್ತರು ಆರೋಪಿಸಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.