ಸಾರಾಂಶ
ಕನ್ನಡಪ್ರಭವಾರ್ತೆ ಚಿತ್ರದುರ್ಗಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ. ನಾರಾಯಣಗೌಡ ಬಣ ಹಾಗೂ ಕರುನಾಡ ವಿಜಯಸೇನೆ ಕಾರ್ಯಕರ್ತರು ಶನಿವಾರ ಚಿತ್ರದುರ್ಗದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು, ಕೇಂದ್ರ ಸರ್ಕಾರ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು ಸಂವಿಧಾನದ 8ನೇ ವಿಧಿಯಲ್ಲಿ ಉಲ್ಲೇಖಿಸಿರುವ ಎಲ್ಲಾ 22 ಭಾಷೆಗಳನ್ನು ಅಧಿಕೃತ, ಆಡಳಿತ ಭಾಷೆಯನ್ನಾಗಿ ಘೋಷಿಸಿ ದೇಶದ ಬಹುತ್ವ, ಸಾರ್ವಭೌಮತ್ವವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು.
ಸಂವಿಧಾನದ 343 ರಿಂದ 351 ನೇ ವಿಧಿಗಳನ್ನು ರದ್ದುಪಡಿಸಿ, ಎಲ್ಲಾ ಭಾಷೆಗಳನ್ನೂ ಒಕ್ಕೂಟದ ದೃಷ್ಠಿಯಲ್ಲಿ ಸಮಾನವೆಂದು ಪರಿಗಣಿಸಬೇಕು. ಕರ್ನಾಟಕದಲ್ಲಿರುವ ಎಲ್ಲಾ ಕೇಂದ್ರ ಸರ್ಕಾರಿ ಶಾಲೆಗಳು, ಉದ್ಯಮಗಳಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು. ಕರ್ನಾಟಕದಲ್ಲಿ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ಸೂತ್ರವನ್ನು ಜಾರಿಗೆ ತರಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ. ರಮೇಶ್, ಪ್ರಧಾನ ಕಾರ್ಯದರ್ಶಿವಿಜಯಕುಮಾರ್, ಉಪಾಧ್ಯಕ್ಷ ಆರ್.ಜಿ. ಲಕ್ಷ್ಮಣ್, ಶಿವಮೂರ್ತಿ, ತಾಲೂಕು ಅಧ್ಯಕ್ಷ ಜಿ. ರಾಜಪ್ಪ, ನಗರಾಧ್ಯಕ್ಷ ಪಿ. ರಮೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಮೇಶ್, ವಸಂತ, ಮಲ್ಲಾ ಪ್ರಸಾದ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಮನು, ತಾಲೂಕು ಪ್ರಧಾನ ಕಾರ್ಯದರ್ಶಿ ನೀಲಕಂಠ, ಪ್ರಸನ್ನ, ಜಯಪ್ಪ, ದ್ರಾಕ್ಷಾಯಿಣಿ, ಸುಮ, ಮಂಜುಳ, ರಾಮಕೃಷ್ಣಪ್ಪ, ದಾದಾಪೀರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಕರುನಾಡ ವಿಜಯಸೇನೆಯಿಂದ ಪೋಸ್ಟರ್ ಗೆ ಬೆಂಕಿಚಿತ್ರದುರ್ಗ: ಅಂತರಾಷ್ಟ್ರೀಯ ಹಿಂದಿ ದಿವಸ್ ಆಚರಿಸುತ್ತಿರುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಕರುನಾಡ ವಿಜಯ ಸೇನೆ ಕಾರ್ಯಕರ್ತರು ಶನಿವಾರ ಪ್ರಧಾನ ಅಂಚೇ ಕಚೇರಿ ಬಳಿ ಪೋಸ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು.ಕನ್ನಡಕ್ಕೆ 2700 ವರ್ಷಗಳ ಸುದೀರ್ಘ ಇತಿಹಾಸವಿದ್ದರೂ ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಹೇರಿಕೆ ಮಾಡುತ್ತಿದೆ. ಪ್ರಾದೇಶಿಕ ಭಾಷೆಗಳ ಇತಿಹಾಸದಲ್ಲಿಯೇ ಅತಿ ಹಳೆಯದಾದ ಕನ್ನಡ ಭಾಷೆಗೆ ಅಂತರಾಷ್ಟ್ರೀಯ ಭಾಷೆಯ ಸ್ಥಾನಮಾನ ನೀಡಬೇಕು. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಎಲ್ಲಾ ಪಕ್ಷಗಳು ಕನ್ನಡವನ್ನು ಕಡೆಗಣಿಸುತ್ತಿವೆ. ಪ್ರತಿ ವರ್ಷ ಸೆ.14 ರಂದು ಹಿಂದಿ ದಿವಸ್ ಆಚರಿಸುತ್ತಿರುವ ಕೇಂದ್ರ ಸರ್ಕಾರ ಕನ್ನಡ ಭಾಷಾ ದಿನವೆಂದು ಆಚರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ. ಶಿವಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಉಪಾಧ್ಯಕ್ಷೆ ರತ್ನಮ್ಮ, ಕಾರ್ಯದರ್ಶಿ ಜಗದೀಶ್ ಸಿ. ಉಪಾಧ್ಯಕ್ಷ ಮುಜಾಯಿದ್, ನಗರಾಧ್ಯಕ್ಷ ಅವಿನಾಶ್, ನಾಗೇಶ್, ಯರ್ರಿಸ್ವಾಮಿ, ಕಮಲ, ನಾಗರಾಜ್ ಮುತ್ತು ಹರೀಶ್‍ಕುಮಾರ್ ಪಿ. ಆರ್. ಮಧುಸೂದನ್, ಪಾಂಡು, ಅಖಿಲೇಶ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.