ನೆಲಮಂಗಲ: ಪತ್ರಿಕಾ ವಿತರಕರು ದಿನ ಪತ್ರಿಕೆಗಳ ಬೆನ್ನೆಲುಬಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಪ್ರತಿಕಾ ವಿತರಕರ ಶ್ರೇಯೋಭಿವೃದ್ಧಿಗೆ ಒಕ್ಕೂಟ ಶ್ರಮಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಶಂಭುಲಿಂಗ ಹೇಳಿದರು.
ನೆಲಮಂಗಲ: ಪತ್ರಿಕಾ ವಿತರಕರು ದಿನ ಪತ್ರಿಕೆಗಳ ಬೆನ್ನೆಲುಬಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಪ್ರತಿಕಾ ವಿತರಕರ ಶ್ರೇಯೋಭಿವೃದ್ಧಿಗೆ ಒಕ್ಕೂಟ ಶ್ರಮಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಶಂಭುಲಿಂಗ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಆಯೋಜಿಸಿದ್ದ ನೂತನ ತಾಲೂಕು ಪದಾಧಿಕಾರಿಗಳು ಆಯ್ಕೆ ಸಭೆಯಲ್ಲಿ ನೂತನ ತಾಲೂಕು ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದ ಅವರು,ಈಗಾಗಲೇ ಪತ್ರಿಕಾ ವಿತರಕರಿಗೆ ಇಶ್ರಮ್ ಕಾರ್ಡ್ ಹಾಗೂ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೋಂದಣಿ ಮಾಡಿಸಲಾಗಿದೆ. ಜತೆಗೆ ವಿತರಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ವಿತರಕರೆಲ್ಲ ಸಂಘಟಿತರಾಗಬೇಕು. ಆಗಲೇ ನಾವು ಸಮಸ್ಯೆಗಳನ್ನು ಬಗೆಹರಿಸಿಕೊಂಡು, ಸರ್ಕಾರಿ ಸವಲತ್ತುಗಳನ್ನು ಪಡೆಯಲು ಅನುಕೂಲವಾಗುತ್ತದೆ. ಜತೆಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಸಂಘದ ಹಿತಾಸಕ್ತಿಯನ್ನು ಕಾಪಾಡುವ ಕೆಲಸ ಮಾಡಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ನೂತನ ತಾಲೂಕು ಅಧ್ಯಕ್ಷ ಆರ್.ಪ್ರಮೋದ್‌ಕುಮಾರ್ ಮಾತನಾಡಿ, ಪತ್ರಿಕಾ ವಿತರಕರ ಒಕ್ಕೂಟಕ್ಕೆ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಒಕ್ಕೂಟದ ಎಲ್ಲಾ ಪದಾಧಿಕಾರಿಗಳಿಗೂ ಧನ್ಯವಾದಗಳನ್ನು ಅರ್ಪಿಸಿ, ಮುಂದಿನ ದಿನಗಳಲ್ಲಿ ಪತ್ರಿಕಾ ವಿತರಕರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸಲಾಗುವುದು. ಜತೆಗೆ ಒಕ್ಕೂಟದ ಶ್ರೆಯೋಭಿವೃದ್ಧಿಗೆ ಶ್ರಮಿಸಲಾಗುವುದು. ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ಎಲ್ಲಾ ಪತ್ರಿಕಾ ವಿತರಕರಿಗೂ ತಲುಪಿಸಲಾಗುವುದು. ನಿಮಗೆ ಏನೇ ಸಮಸ್ಯೆಗಳಿದ್ದರೂ ಒಕ್ಕೂಟದಲ್ಲಿ ಮುಕ್ತವಾಗಿ ಹೇಳಿಕೊಂಡು ಬಗೆಹರಿಸಿಕೊಳ್ಳಬಹುದು. ನಮ್ಮೆಲ್ಲರ ಸಹಕಾರವು ನಿಮಗಿರುತ್ತದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಪ್ರಶಾಂತ್‌ಕುಮಾರ್ , ಪ್ರಧಾನ ಕಾರ್ಯದರ್ಶಿ ಸಂಗಮ್‌ಸುರೇಶ್, ಕಾರ್ಯದರ್ಶಿ ಸುರೇಶ್, ತುಮಕೂರು ಜಿಲ್ಲಾಧ್ಯಕ್ಷ ಚಲುವರಾಜು(ರಘು), ಜಿಲ್ಲಾ ನಿರ್ದೇಶಕ ಆನಂದ್ ಜೈನ್, ವಕೀಲ ದಿಲೀಪ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಬಾಕ್ಸ್....................ಒಕ್ಕೂಟದ ತಾಲೂಕು ಪದಾಧಿಕಾರಿಗಳು
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ತಾಲೂಕು ಅಧ್ಯಕ್ಷರಾಗಿ ಆರ್.ಪ್ರಮೋದ್‌ಕುಮಾರ್, ಗೌರವಾಧ್ಯಕ್ಷರಾಗಿ ಬೈಲಪ್ಪ, ಉಪಾಧ್ಯಕ್ಷರಾಗಿ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ರಾಮಚಂದ್ರಬಾಬು, ಖಜಾಂಚಿ ರವೀಶ್, ಸಲಹೆಗಾರ ಮಹೇಶ್, ನಿರ್ದೇಶಕರಾಗಿ ನಾಗರಾಜು, ರಾಮಣ್ಣ, ಅನ್ಸರ್‌ಬೇಗ್, ಅಶೋಕ್, ರಾಘವೇಂದ್ರ, ಅನಂತರಾಮು, ಮರಿಯಪ್ಪ, ಚಿಕ್ಕರಾಜು, ವಿಜಯ್ ವೀಳ್ಯದೆಲೆ, ನಾರಾಯಣ್, ನಂದಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಪೊಟೊ-14ಕೆಎನ್‌ಎಲ್‌ಎಮ್1-
ನೆಲಮಂಗಲದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಆಯೋಜಿಸಿದ್ದ ನೂತನ ತಾಲೂಕು ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಒಕ್ಕೂಟದ ರಾಜ್ಯಾಧ್ಯಕ್ಷ ಶಂಭುಲಿಂಗ ಅವರು ಪದಾಧಿಕಾರಿಗಳನ್ನು ಅಭಿನಂದಿಸಿದರು.