ಸುಪ್ರೀಂ ಕೋರ್ಟ್ ಆದೇಶದಂತೆ ಹೈಕೋರ್ಟ್ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಒಬಿಸಿ ಜಾತಿಗಳಾದ ಲಂಬಾಣಿ, ಭೋವಿ, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆಯುವ ಕುರಿತಾಗಿ ವರದಿ ನೀಡುವಂತೆ ಸೂಚಿಸಿದ್ದು, ಶೀಘ್ರದಲ್ಲಿಯೇ ಎಸ್ಸಿ ಪಟ್ಟಿಯಿಂದ ಹೊರ ಹಾಕುವ ಪ್ರಕ್ರಿಯೆ ನಡೆಯಲಿದೆ ಎಂದು ಡಾ.ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ ಮಿತ್ರ ತಿಳಿಸಿದರು.
ರಾಯಚೂರು: ಸುಪ್ರೀಂ ಕೋರ್ಟ್ ಆದೇಶದಂತೆ ಹೈಕೋರ್ಟ್ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಒಬಿಸಿ ಜಾತಿಗಳಾದ ಲಂಬಾಣಿ, ಭೋವಿ, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆಯುವ ಕುರಿತಾಗಿ ವರದಿ ನೀಡುವಂತೆ ಸೂಚಿಸಿದ್ದು, ಶೀಘ್ರದಲ್ಲಿಯೇ ಎಸ್ಸಿ ಪಟ್ಟಿಯಿಂದ ಹೊರ ಹಾಕುವ ಪ್ರಕ್ರಿಯೆ ನಡೆಯಲಿದೆ ಎಂದು ಡಾ.ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ ಮಿತ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ 2019ರಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಒಬಿಸಿ ಜಾತಿಗಳಾದ ಭೋವಿ, ಲಂಬಾಣಿ, ಕೊರಚ, ಕೊರಮ ಸಮುದಾಯಗಳನ್ನು ತೆಗೆದುಹಾಕುವಂತೆ ಸುಪ್ರಿಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಕಳೆದ 2020 ಫೆ.14ರಂದು ನ್ಯಾಯಾಲಯ ನಾಲ್ಕು ವಾರದೊಳಗೆ ರಾಷ್ಟ್ರೀಯ ಎಸ್ಸಿ ಆಯೋಗ ಮನವಿ ಸಲ್ಲಿಸಲು ಸೂಚಿಸಿತ್ತು. ಆಯೋಗವು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ಎಸ್ಸಿ ಪಟ್ಟಿಯಿಂದ ತೆಗದು ಹಾಕುವ ಕುರಿತು ಆಯೋಗಕ್ಕೆ ವರದಿ ನೀಡುವಂತೆ ಸೂಚಿಸಿತ್ತು. 2023 ಫೆ.16 ರಂದು ಅಂದಿನ ಬಿಜೆಪಿ ರಾಜ್ಯ ಸರ್ಕಾರ ಆಯೋಗಕ್ಕೆ ಪತ್ರ ಬರೆದು ಎಸ್ಸಿ ಪಟ್ಟಿಯಲ್ಲಿ ಲಂಬಾಣಿ, ಭೋವಿ, ಕೊರಚ, ಕೊರಮ ಸಮಾಜಗಳನ್ನು ಉಳಿಸಿಕೊಳ್ಳುವದಾಗಿ ಅಭಿಪ್ರಾಯ ತಿಳಿಸಿತ್ತು. ಪುನಃ ರಾಜ್ಯ ಸರ್ಕಾರ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಜು.24 ರಂದು ಅರ್ಜಿ ಸಲ್ಲಿಸಿದಾಗ ಹೈ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿದ್ದರಿಂದ ಕಳೆದ 2024 ಏ.14 ರಂದು ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈ ಕೋರ್ಟ್ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಸೂಚನೆ ನೀಡಿ ವರದಿ ನೀಡುವಂತೆ ಸೂಚಿಸಿದೆ. ಇನ್ನೆರಡು ವರ್ಷಗಳಲ್ಲಿ ಎಸ್ಸಿ ಪಟ್ಟಿಯಿಂದ ನಾಲ್ಕು ಒಬಿಸಿ ಜಾತಿಗಳನ್ನು ತೆಗಯುವ ನಿರ್ಧಾರಕ್ಕೆ ಬರುವ ಸಾಧ್ಯತೆಗಳಿದ್ದು, ಇದರಿಂದಾಗಿ ನಾಲ್ಕು ಒಬಿಸಿ ಜಾತಿಗಳನ್ನು ಉಳಿಸಿಕೊಳ್ಳಲು ವಿವಿಧ ಮಾದಿಗ ಸಂಘಟನೆಗಳು ನಡೆಸಿದ ಹೋರಾಟಕ್ಕೆ ಹಿನ್ನಡೆಯಾಗುವುದರ ಜೊತೆಗೆ ಒಳ ಮೀಸಲಾತಿಯೂ ಬದಲಾವಣೆಯಾಗಲಿದೆ ಎಂದು ವಿವರಿಸಿದರು. ಈ ವೇಳೆ ಮುಖಂಡ ಹುಸೇನ ಬಾಷಾ ಪಲಕನಮರಡಿ ಇದ್ದರು.