ಮಹಾಮಂಡಳದ ಗಣೇಶ ಮೂರ್ತಿಯ ಮೆರವಣಿಗೆ

| Published : Sep 19 2024, 01:58 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದ ಶ್ರೀ ಶಿವಾಜಿ ಮಹಾರಾಜ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಜಾನನ ಮಹಾಮಂಡಳದ ಗಣೇಶ ಉತ್ಸವ ಮೂರ್ತಿಯ ವಿಸರ್ಜನಾ ಪೂರ್ವ ಮೆರವಣಿಗೆ ವೈಭವದಿಂದ ನಡೆಯಿತು. ಕಲಾ ತಂಡಗಳು ಮೆರವಣಿಗೆಯ ಸೊಬಗು ಹೆಚ್ಚಿಸಿದ್ದವು. ಫೈಬರ್ ಗಣೇಶನನ್ನು ಪ್ರತಿಷ್ಠಾಪಿಸಲಾಗಿದ್ದು, ಸಾಂಕೇತಿಕವಾಗಿ ಮಣ್ಣಿನ ಗಣೇಶನ ಉತ್ಸವ ಮೂರ್ತಿಯನ್ನು ಶ್ರದ್ಧಾ-ಭಕ್ತಿಪೂರ್ವಕವಾಗಿ ವಿಸರ್ಜಿಸಲಾಯಿತು.

ಕನ್ನಡಪ್ರಭ ವಾರ್ತೆ ವಿಜಯಪುರ

ವಿಜಯಪುರದ ಶ್ರೀ ಶಿವಾಜಿ ಮಹಾರಾಜ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಜಾನನ ಮಹಾಮಂಡಳದ ಗಣೇಶ ಉತ್ಸವ ಮೂರ್ತಿಯ ವಿಸರ್ಜನಾ ಪೂರ್ವ ಮೆರವಣಿಗೆ ವೈಭವದಿಂದ ನಡೆಯಿತು. ಕಲಾ ತಂಡಗಳು ಮೆರವಣಿಗೆಯ ಸೊಬಗು ಹೆಚ್ಚಿಸಿದ್ದವು. ಫೈಬರ್ ಗಣೇಶನನ್ನು ಪ್ರತಿಷ್ಠಾಪಿಸಲಾಗಿದ್ದು, ಸಾಂಕೇತಿಕವಾಗಿ ಮಣ್ಣಿನ ಗಣೇಶನ ಉತ್ಸವ ಮೂರ್ತಿಯನ್ನು ಶ್ರದ್ಧಾ-ಭಕ್ತಿಪೂರ್ವಕವಾಗಿ ವಿಸರ್ಜಿಸಲಾಯಿತು.

ಕಹಳೆ, ಕರಡಿ ಮಜಲು, ನವಿಲು ಕುಣಿತ, ಡೊಳ್ಳು ಹೀಗೆ ನಾನಾ ವಾದ್ಯ ವೈಭವಗಳ ಸದ್ದು ಮುಗಿಲು ಮುಟ್ಟಿತ್ತು. ಶ್ರೀ ಶಿವಾಜಿ ಮಹಾರಾಜರ ವೃತ್ತದಿಂದ ಆರಂಭಗೊಂಡ ಮೆರವಣಿಗೆಯು ಉಪ್ಪಲಿ ಬುರುಜ್, ಮಿಲನ್ ವೃತ್ತ, ಲಕ್ಷ್ಮೀ ಗುಡಿ, ಗಾಂಧಿವೃತ್ತ ಮಾರ್ಗವಾಗಿ ಸಂಚರಿಸಿ ತಾಜ್ ಬಾವಡಿ ತಲುಪಿತು. ಅಲ್ಲಿ ನಿರ್ಮಿಸಲಾದ ತಾತ್ಕಾಲಿಕ ಹೊಂಡದಲ್ಲಿ ಮಣ್ಣಿನ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.

ವಿಜಯಪುರ ರತ್ನ ಪ್ರಶಸ್ತಿ ಪ್ರದಾನ

ಮೆರವಣಿಗೆಗೆ ಚಾಲನೆ ನೀಡಿದ ಸಂಸದ ರಮೇಶ ಜಿಗಜಿಣಗಿ ಚಾಲನೆ ನೀಡಿದ್ದು, ಈ ರೀತಿಯ ಕಾರ್ಯಕ್ರಮಗಳು ಸದಾ ಮುಂದುವರೆಯಲಿ ಎಂದು ಹಾರೈಸಿದರು. ಈ ವೇಳೆ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಕನಕವ್ವಾ ತಿಕೋಟಿ, ಸೀತಾ ಸಂಗಾಪೂರ, ಮುತ್ತಪ್ಪ ಭೋವಿ, ಶಂಕರ ಕಟಗೆ, ಸಾವಯವ ಕೃಷಿ ಕ್ಷೇತ್ರದಲ್ಲಿ ಸಂಗಪ್ಪ ವಿಜಾಪೂರ, ನೀಟ್ ಪರೀಕ್ಷೆಯಲ್ಲಿ ಸಾಧನೆ ತೋರಿದ ರಾಜೇಶ್ವರಿ ಮಠ, ಕಲಾವಿದ ಚನ್ನಪ್ಪ ಪೂಜಾರಿ ಅವರಿಗೆ ವಿಜಯಪುರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬುರಾಣಪೂರ ಆರೂಢಾಶ್ರಮದ ಮಾತೋಶ್ರೀ ಯೋಗೇಶ್ವರಿ ಮಾತಾಜಿ ಸಾನಿಧ್ಯ ವಹಿಸಿದ್ದರು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ಶಾಸಕ ರಮೇಶ ಭೂಸನೂರ, ಗಜಾನನ ಮಹಾಮಂಡಳದ ಅಧ್ಯಕ್ಷ ಆನಂದ ಮುಚ್ಚಂಡಿ‌ ಇದ್ದರು.