ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಯಲ್ಲಿ ದೇವರಾಜ್, ಧರ್ಮ ಸೇರಿದಂತೆ ಹಲವರ ವಿರುದ್ಧ ದೂರು ನೀಡಲಾಗಿತ್ತು. ಆದರೆ ದೂರು ಆಧರಿಸಿ ಕ್ರಿಮಿನಲ್ ಪ್ರಕರಣ ದಾಖಲಿಸುವ ಬದಲು ಪೊಲೀಸರು ಕೇವಲ ಎನ್‌ಸಿಆರ್‌ ದಾಖಲಿಸಿಕೊಂಡಿದ್ದಾರೆ ಎಂದು ದೂರಿದರು. ಇದರಿಂದ ನ್ಯಾಸಯಾಲಯದ ಮೊರೆ ಹೋಗಬೇಕಾಯಿತು. ಪುಷ್ಪಾ ಅವರ ಸಂಬಂಧಿಕ ದುರ್ಗಾಪ್ರಸಾದ್ ಅವರು ಘಟನೆಯ ಕುರಿತ ಡಿಜಿಟಲ್ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಹಾಸನದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣದ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನನಗರದ ವಿದ್ಯಾನಗರದಲ್ಲಿರುವ ಸಿನಿಮಾ ನಿರ್ಮಾಪಕಿ ಪುಷ್ಪಾ ಅವರ ಮಾಲೀಕತ್ವದ ಶೆಡ್ ಹಾಗೂ ಕಾಂಪೌಂಡ್ ದ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಷ್ಪಾ ಅವರು ಶನಿವಾರ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ನ್ಯಾಯ ಒದಗಿಸುವಂತೆ ಮನವಿ ಸಲ್ಲಿಸಿದರು.

ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಪುಷ್ಪಾ, ಈ ಪ್ರಕರಣದಲ್ಲಿ ಸುಮಾರು 24 ಲಕ್ಷ ರು. ಮೌಲ್ಯದ ಆಸ್ತಿ ಹಾನಿಯಾಗಿದ್ದರೂ ಇದುವರೆಗೆ ಎಫ್‌ಐಆರ್‌ ದಾಖಲಿಸದಿರುವುದು ಪೊಲೀಸರ ನಿರ್ಲ ಕ್ಷ್ಯವನ್ನು ತೋರಿಸುತ್ತದೆ ಎಂದು ಪುಷ್ಪಾ ಆರೋಪಿಸಿದರು. ಇದೇ ವಿಚಾರವಾಗಿ ಮೂರು ದಿನಗಳ ಹಿಂದೆ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು (ಡಿಜಿಪಿ) ಭೇಟಿ ಮಾಡಿ ದೂರು ಸಲ್ಲಿಸಲಾಗಿದೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಯಲ್ಲಿ ದೇವರಾಜ್, ಧರ್ಮ ಸೇರಿದಂತೆ ಹಲವರ ವಿರುದ್ಧ ದೂರು ನೀಡಲಾಗಿತ್ತು. ಆದರೆ ದೂರು ಆಧರಿಸಿ ಕ್ರಿಮಿನಲ್ ಪ್ರಕರಣ ದಾಖಲಿಸುವ ಬದಲು ಪೊಲೀಸರು ಕೇವಲ ಎನ್‌ಸಿಆರ್‌ ದಾಖಲಿಸಿಕೊಂಡಿದ್ದಾರೆ ಎಂದು ದೂರಿದರು. ಇದರಿಂದ ನ್ಯಾಯಾಲಯದ ಮೊರೆ ಹೋಗಬೇಕಾಯಿತು. ಪುಷ್ಪಾ ಅವರ ಸಂಬಂಧಿಕ ದುರ್ಗಾಪ್ರಸಾದ್ ಅವರು ಘಟನೆಯ ಕುರಿತ ಡಿಜಿಟಲ್ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಹಾಸನದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣದ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ ಎಂದರು. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಶನಿವಾರ ಪುಷ್ಪಾ ಅವರು ಹಾಸನ ಎಸ್ಪಿ ಕಚೇರಿಗೆ ಆಗಮಿಸಿ ಪ್ರಕರಣದ ದಾಖಲೆಗಳು ಹಾಗೂ ಮಾಹಿತಿ ಸಲ್ಲಿಸಿದರು. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದೂ ಒತ್ತಾಯಿಸಿದರು. ಎಸ್ಪಿ ಮಟ್ಟದಲ್ಲಿ ಪ್ರಕರಣದ ಮರುಪರಿಶೀಲನೆ ನಡೆಯುವ ಸಾಧ್ಯತೆ ಇದ್ದು, ದೂರುದಾರರು ನ್ಯಾಯಕ್ಕಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.