ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಗಮನಾರ್ಹ ಕೊಡುಗೆ ಗುರುತಿಸಿ, ಸುರಪುರದ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರೊ. ಅಮರೀಶ ಅವರಿಗೆ ಪ್ರತಿಷ್ಠಿತ ‘ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಲಿಂಗೈಕ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ಪ್ರಥಮ ಪುಣ್ಯಸ್ಮರಣೋತ್ಸವದ ಅಂಗವಾಗಿ ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಸುರಪುರ
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಗಮನಾರ್ಹ ಕೊಡುಗೆ ಗುರುತಿಸಿ, ಸುರಪುರದ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರೊ. ಅಮರೀಶ ಅವರಿಗೆ ಪ್ರತಿಷ್ಠಿತ ‘ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಲಿಂಗೈಕ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ಪ್ರಥಮ ಪುಣ್ಯಸ್ಮರಣೋತ್ಸವದ ಅಂಗವಾಗಿ ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನಿಸಲಾಯಿತು.ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಮಾತೋಶ್ರೀ ಡಾ. ದಾಕ್ಷಾಯಣಿ ಎಸ್. ಅಪ್ಪಾಜಿ ಹಾಗೂ ಕಾರ್ಯದರ್ಶಿ ಬಸವರಾಜ ದೇಶಮುಖ ಅವರ ಸಮ್ಮುಖದಲ್ಲಿ ಪ್ರೊ. ಅಮರೀಶ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೋಧನಾ ಕ್ಷೇತ್ರದಲ್ಲಿನ ಅವರ ಸಮರ್ಪಣೆ ಮತ್ತು ಬದ್ಧತೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆ ಹಾಗೂ ಸಂಸ್ಥೆಯ ಶೈಕ್ಷಣಿಕ ಉತ್ಕೃಷ್ಟತೆಗೆ ಸಲ್ಲಿಸಿದ ಸೇವೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರೊ. ಅಮರೀಶ ಅವರ ಸಾಧನೆಗೆ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯದರ್ಶಿ ಡಾ. ಶಾಂತಲಾ ಎಸ್. ನಿಷ್ಠಿಜಿ, ಜಂಟಿ ಕಾರ್ಯದರ್ಶಿ ದೊಡ್ಡಪ್ಪ ಎಸ್. ನಿಷ್ಠಿ, ಪ್ರಾಂಶುಪಾಲ ಡಾ. ಶರಣಬಸಪ್ಪ ಸಾಲಿ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.