ಸಾರಾಂಶ
ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡರ ಹೆಸರಿನಲ್ಲಿ ಮೊದಲ ಬಾರಿಗೆ ನೀಡಲಾಗುತ್ತಿರುವ ಪ್ರಶಸ್ತಿ ಪ್ರದಾನ ಸಮಾರಂಭ ಫೆ.೧೫ರಂದು ಸಂಜೆ ೪ ಗಂಟೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾ ಮಂದಿರದಲ್ಲಿ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡರ ಹೆಸರಿನಲ್ಲಿ ಮೊದಲ ಬಾರಿಗೆ ನೀಡಲಾಗುತ್ತಿರುವ ಪ್ರಶಸ್ತಿ ಪ್ರದಾನ ಸಮಾರಂಭ ಫೆ.೧೫ರಂದು ಸಂಜೆ ೪ ಗಂಟೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ವಿಶ್ರಾಂತ ಪ್ರಾಂಶುಪಾಲ ಪ್ರೊ.ಎಸ್.ಬಿ.ಶಂಕರೇಗೌಡ ತಿಳಿಸಿದರು.ದಿವ್ಯಸಾನ್ನಿಧ್ಯವನ್ನು ಆದಿ ಚುಂಚನಗಿರಿ ಪೀಠಾಧಿಪತಿ ಶ್ರೀನಿರ್ಮಲಾನಂದನಾಥ ಸ್ವಾಮೀಜಿ, ವಿಶ್ವಮಾನವ ಕ್ಷೇತ್ರದ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ ವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ರಾಮಕೃಷ್ಣ ವಹಿಸುವರು. ಜಲಸಾರಿಗೆ ನಿಗಮದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ್ ರಾಯಪುರ ಹಾಗೂ ರಂಗಭೂಮಿ ನಿರ್ದೇಶಕ ಬಿ.ಸುರೇಶ್ ಅವರಿಗೆ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಪ್ರಶಸ್ತಿ ಪ್ರದಾನ ಮಾಡುವರು ಎಂದರು.ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಎಂ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅತಿಥಿಗಳಾಗಿ ಭಾಗವಹಿಸುವರು. ಕೆ.ಎಸ್.ಮಂಜುಳಾ ಮತ್ತು ಪ್ರೊ.ಬಿ.ಜಯಪ್ರಕಾಶಗೌಡ ಉಪಸ್ಥಿತರಿರುವರು.
ಗೋಷ್ಠಿಯಲ್ಲಿ ಎಂ.ಕೆ.ಹರೀಶ್ ಕುಮಾರ್, ಕೆ.ಜಯರಾಂ, ಮೋಹನ್‌ಕುಮಾರ್, ಮಂಜುಳಾ ಇದ್ದರು.ನಾಳೆ ಮಾರಸಿಂಗನಹಳ್ಳಿಯಲ್ಲಿ ಸಿಡಿ ಉತ್ಸವಮಂಡ್ಯ:
ತಾಲೂಕಿನ ಮಾರಶಿಂಗನಹಳ್ಳಿಯಲ್ಲಿ ಭಾವೈಕ್ಯತೆಯ ಐತಿಹಾಸಿಕ ಹಬ್ಬವಾಗಿರುವ ಸಿಡಿ ಉತ್ಸವ ಮತ್ತು ಮೆರೆವಣಿಗೆಯು ಫೆ.೧೫ರಂದು ಮುಂಜಾನೆ ಜರುಗಲಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿದರುವ ಮಾರಸಿಂಗನಹಳ್ಳಿ ಸಿಡಿ ಉತ್ಸವ ಸಮಿತಿ ಮುಖಂಡರು, ಪ್ರತಿ ವರ್ಷದಂತೆ ಐತಿಹಾಸಿಕ ಮಳವಳ್ಳಿ ಸಿಡಿ ಉತ್ಸವ ನಡೆದ ಮರುವಾರಕ್ಕೆ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಸಿಡಿ ಉತ್ಸವ ಮತ್ತು ತಮಟೆ ನಗಾರಿ ಮೇಳದೊಂದಿಗೆ ತಂಬಿಟ್ಟಿನ ಆರತಿ ಮೆರವಣಿಗೆ ಅದ್ಧೂರಿಯಾಗಿ ನಡೆಯಲಿದೆ. ಗ್ರಾಮದಲ್ಲಿರುವ ಶ್ರೀಕಾಳಲಿಂಗೇಶ್ವರ ದೇವಾಲಯದಲ್ಲಿ ಜಮಾವಣೆಗೊಂಡು, ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಸಾಗಿ, ಶ್ರೀ ಬಸವೇಶ್ವರ, ಶ್ರೀಬೋರೇಶ್ವರ ಮತ್ತು ಗ್ರಾಮದೇವತೆ ಮಾರಮ್ಮ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ, ಬಳಿಕ ಅಂಗಳದಲ್ಲಿ ಸಿಡಿ ಉತ್ಸವ-ಪೂಜಾ ಕೈಂಕರ್ಯಗಳು ನಡೆದು, ಇಷ್ಟಾರ್ಥ ಸಿದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗುವುದು, ಭಕ್ತ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.