ಸಾರಾಂಶ
ಶಿವಮೊಗ್ಗದ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ನೂತನ ಪ್ರಭಾರ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊ. ಎಸ್.ವಿ. ಕೃಷ್ಣಮೂರ್ತಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪ್ರೊ.ಎಸ್.ವೆಂಕಟೇಶ್ ಅವರ ಡೀನ್ ಅವಧಿ ಮಾ.1ಕ್ಕೆ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ನಂತರದ ಹಿರಿಯ ಡೀನ್ ಪ್ರೊ. ಎಸ್.ವಿ. ಕೃಷ್ಣಮೂರ್ತಿ ಅವರನ್ನು ಪ್ರಭಾರ ಕುಲಪತಿಯನ್ನಾಗಿ ನೇಮಕಗೊಳಿಸಿ, ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನೂತನ ಪ್ರಭಾರ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊ. ಎಸ್.ವಿ. ಕೃಷ್ಣಮೂರ್ತಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಪ್ರೊ.ಎಸ್.ವೆಂಕಟೇಶ್ ಅವರ ಡೀನ್ ಅವಧಿ ಮಾ.1ಕ್ಕೆ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ನಂತರದ ಹಿರಿಯ ಡೀನ್ ಪ್ರೊ. ಎಸ್.ವಿ. ಕೃಷ್ಣಮೂರ್ತಿ ಅವರನ್ನು ಪ್ರಭಾರ ಕುಲಪತಿಯನ್ನಾಗಿ ನೇಮಕಗೊಳಿಸಿ, ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.ಮೂಲತಃ ಪರಿಸರ ವಿಜ್ಞಾನ ಪ್ರಾಧ್ಯಾಪಕರಾದ ಪ್ರೊ. ಕೃಷ್ಣಮೂರ್ತಿ ಅವರ ಡೀನ್ ಅವಧಿ ಮಾರ್ಚ್ 2025ರವರೆಗೆ ಇದ್ದು, ಪೂರ್ಣಾವಧಿ ಕುಲಪತಿ ನೇಮಕಗೊಳ್ಳುವವರೆಗೆ ಕಾರ್ಯನಿರ್ವಹಿಸಲಿದ್ದಾರೆ.
ಈ ಸಂದರ್ಭ ಪ್ರೊ.ಎಸ್ ವೆಂಕಟೇಶ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಂ.ಎಸ್. ಗೋಪಿನಾಥ್, ಹಣಕಾಸು ಅಧಿಕಾರಿ ಜಿ.ಬಂಗಾರಪ್ಪ, ಡಾ. ಕೆ.ಆರ್. ಮಂಜುನಾಥ್, ವಿವಿಧ ಆಡಳಿತಾಧಿಕಾರಿಗಳು ಹಾಜರಿದ್ದರು.- - - -2ಎಸ್‌ಎಂಜಿಕೆಪಿ03:
ಕುವೆಂಪು ವಿಶ್ವವಿದ್ಯಾಲಯ ನೂತನ ಪ್ರಭಾರ ಕುಲಪತಿ ಪ್ರೊ. ಎಸ್.ವಿ. ಕೃಷ್ಣಮೂರ್ತಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.