ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಥಮ ಅಧ್ಯಕ್ಷ ಪ್ರೊ.ಬಿ.ಎ.ವಿವೇಕ ರೈ ಅವರ ತುಳು ಸಾಹಿತ್ಯ ಅವಲೋಕನ ‘ಬೆನ್ನಿದ ಪನಿದೊಂಪ’ ವಿಚಾರಗೋಷ್ಠಿ ಹಾಗೂ ಪುಸ್ತಕ ಬಿಡುಗಡೆ ಆ.22 ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರಿನ ತುಳು ಭವನದಲ್ಲಿ ನಡೆಯಲಿದೆ. ಹಿರಿಯ ಸಂಶೋಧಕ ಹಾಗೂ ನಿವೃತ್ತ ಪ್ರಾಂಶುಪಾಲ ಡಾ.ಪಾದೆಕಲ್ಲು ವಿಷ್ಣು ಭಟ್ ಅವರು ವಿವೇಕ ರೈ ಅವರ ‘ತುಳುವ ಜಾಲ ಪೊಲಿ’ ಮತ್ತು ‘ನಾಲಾಯಿಡ್ದ್ ನಾಲೂರುಗು’ ಪುಸ್ತಕವನ್ನು ಬಿಡುಗಡೆಗೊಳಿಸುವರು. ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್., ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರೀಸ್ ಮುಖ್ಯ ಅತಿಥಿಯಾಗಿರುವರು.

‘ತುಳು ಅಕಾಡೆಮಿ ಅಧ್ಯಕ್ಷರಾಗಿ ವಿವೇಕ ರೈ’ ವಿಷಯದ ಕುರಿತು ನಿವೃತ್ತ ಪ್ರಾಂಶುಪಾಲ ಹಾಗೂ ತುಳು ಅಕಾಡೆಮಿ ಮಾಜಿ ಸದಸ್ಯ ಗುಣಪಾಲ ಕಡಂಬ ಮಾತನಾಡುವರು. ವಿವೇಕ ರೈ ಅವರ ತುಳು ಸಾಹಿತ್ಯ ಸಂಶೋಧನೆ ವಿಷಯದ ಕುರಿತು ಉಡುಪಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ವಿಚಾರ ಮಂಡಿಸುವರು. ಬಳಿಕ ವಿವೇಕ ರೈ ಅವರ ಜೊತೆಗೆ ಮಾತುಕತೆ ನಡೆಯಲಿದೆ. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸಂಸ್ಥಾಪಕ ಡಾ. ತುಕರಾಮ ಪೂಜಾರಿ ಹಾಗೂ ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿ ಸಂವಾದ ನಡೆಸುವರು.

ಸಮಾರೋಪ ಕಾರ್ಯಕ್ರಮ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕಾಸರಗೋಡು ಚಿನ್ನ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್, ತುಳು ಜಾನಪದ ಸಂಶೋಧಕ ಡಾ.ಪೂವಪ್ಪ ಕಣಿಯೂರು ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ತುಳು ಅಕಾಡೆಮಿ ಪ್ರಕಟಣೆ ತಿಳಿಸಿದೆ.