ಸಾರಾಂಶ
ಉತ್ತಮ ಉದ್ದೇಶ ಹಾಗೂ ಗುರಿಯೊಂದಿಗೆ ಕಾರ್ಯ ಯೋಜನೆ ರೂಪಿಸಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕು ಎಂದು ವಿಕ್ರಂ ದತ್ತ ಹೇಳಿದರು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಉತ್ತಮ ಉದ್ದೇಶ ಹಾಗೂ ಗುರಿಯೊಂದಿಗೆ ಕಾರ್ಯಯೋಜನೆ ರೂಪಿಸಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ರೋಟರಿ 3181 ಜಿಲ್ಲಾ ಗವರ್ನರ್ ವಿಕ್ರಂ ದತ್ತ ಕರೆ ನೀಡಿದ್ದಾರೆ.ಅವರು ಕುಶಾಲನಗರ ರೋಟರಿಗೆ ಅಧಿಕೃತ ಭೇಟಿ ನೀಡಿ ವಾರ್ಷಿಕ ಕಾರ್ಯ ಚಟುವಟಿಕೆ ಬಗ್ಗೆ ಪರಿಶೀಲನೆ ನಡೆಸಿ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದರು.
ರೋಟರಿ ಸದಸ್ಯರು ತ್ಯಾಗ ಮನೋಭಾವನೆ ಮೂಲಕ ಕಾರ್ಯಯೋಜನೆ ರೂಪಿಸುತ್ತಾರೆ. ಇತರರಿಗೆ ಸಹಾಯ ನೀಡುವ ಉದ್ದೇಶದೊಂದಿಗೆ ಸೇವೆ ಸಲ್ಲಿಸುತ್ತಾರೆ ಎಂದರು.ರೋಟರಿ ಸಂಸ್ಥೆಯ ಮೂಲಕ ಸೇವಾ ಕಾರ್ಯಗಳು ನಿರಂತರವಾಗಿ ನಡೆಯುತ್ತಿದೆ. ಗ್ರಾಮೀಣ ಪ್ರದೇಶದ ಅಸಹಾಯಕರಿಗೆ ಸಹಾಯ ಹಸ್ತ ನೀಡುವ ನಿಟ್ಟಿನಲ್ಲಿ ಎಲ್ಲೆಡೆ ಕಾರ್ಯಕ್ರಮಗಳು ರೂಪಗೊಳ್ಳುತ್ತಿವೆ ಎಂದು ಅವರು ಕುಶಾಲನಗರ ರೋಟರಿ ಸಂಸ್ಥೆಯ ಮೂಲಕ ಸರಕಾರಿ ಆಸ್ಪತ್ರೆಗೆ ನೀಡಲಾದ ಡಯಾಲಿಸಿಸ್ ಘಟಕ ಸೇರಿದಂತೆ ಹಲವು ಕಾರ್ಯಯೋಜನೆಗಳ ಸಾಧನೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಕುಶಾಲನಗರ ರೋಟರಿ ಅಧ್ಯಕ್ಷ ಸಿ ಬಿ ಹರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ ಬಾಲಕಿ ಆಜ್ಞ ಅಮಿತ್ ಮತ್ತು ನಿವೃತ್ತ ಸೈನಿಕರು ಹಾಗೂ ಸಮಾಜಸೇವಕರಾದ ಕೆ ಕೆ ಕಾಳಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಇದೇ ಸಂದರ್ಭ ಕ್ಲಬ್ ಬುಲೆಟಿನ್ ಬಿಡುಗಡೆಗೊಳಿಸಲಾಯಿತು.
ರೋಟರಿ ಸಹಾಯಕ ರಾಜ್ಯಪಾಲ ಡಾ. ಹರಿ ಎ ಶೆಟ್ಟಿ, ವಲಯ ಪ್ರಮುಖರಾದ ಪ್ರಕಾಶ್ ಕುಮಾರ್ ಮಾತನಾಡಿದರು.ಕಾರ್ಯದರ್ಶಿ ಕಿರಣ್ ವಾರ್ಷಿಕ ವರದಿ ನೀಡಿದರು. ಕುಶಾಲನಗರ ರೋಟರಿ ಪದಾಧಿಕಾರಿಗಳು, ರೋಟರಿ ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಸ್ಥಳೀಯ ಸಂಘ ಸಂಸ್ಥೆಗಳ ಪ್ರಮುಖರು ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))