ನ. 7ರಂದು ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರ

| Published : Oct 10 2024, 02:29 AM IST

ಸಾರಾಂಶ

ಅಂಬೇಡ್ಕರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಿದ್ದಾರೆ

ಕನ್ನಡಪ್ರಭ ವಾರ್ತೆ ಎಚ್.ಡಿ. ಕೋಟೆಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಶಾಸಕ ಅನಿಲ್ ಚಿಕ್ಕಮಾದು ಅವರ ಅಧ್ಯಕ್ಷತೆಯಲ್ಲಿ ಅ. 17 ರಂದು ಆಚರಿಸಬೇಕಾಗಿರುವ ವಾಲ್ಮೀಕಿ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು. ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಅ. 17 ರಂದು ಸಾಂಕೇತಿಕವಾಗಿ ಎಲ್ಲ ಕಚೇರಿಗಳಲ್ಲಿ ವಾಲ್ಮೀಕಿ ಜಯಂತಿ ಆಚರಿಸಬೇಕು ಹಾಗೂ ನ. 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಜಯಂತಿಲ್ಲಿ ಪಾಲ್ಗೊಳ್ಳಲು ಎಚ್.ಡಿ. ಕೋಟೆಗೆ ಆಗಮಿಸುತ್ತಿದ್ದು, ಅತ್ಯಂತ ಅದ್ಧೂರಿಯಾಗಿ ತಾಲೂಕಿನ ನಾಯಕ ಸಮಾಜ ಹಾಗೂ ಸರ್ಕಾರದ ವತಿಯಿಂದ ಆಚರಿಸಲಾಗುವುದು ಎಂದು ತಿಳಿಸಿದರು. ಆ ದಿನದಂದು ಪಟ್ಟಣದ ಅಂಬೇಡ್ಕರ್ ಭವನದ ಮುಂಭಾಗ ಸುಮಾರು ಒಂದು ಕೋಟಿ ರು. ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಿದ್ದಾರೆ. ತಾಲೂಕಿನಲ್ಲಿ ಕೊರೋನಾ ಬಂದಾಗಿನಿಂದಲೂ ವಾಲ್ಮೀಕಿ ಜಯಂತಿ ಆಚರಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಈ ಬಾರಿ ಅದ್ದೂರಿಯಾಗಿ ಅರ್ಥಪೂರ್ಣವಾಗಿ ಜಯಂತಿ ಆಚರಿಸಲಾಗುವುದು. ಈ ವೇಳೆಯಲ್ಲಿ ಅಲ್ಪಸಂಖ್ಯಾತರು ಹಿಂದುಳಿದ ವರ್ಗದವರಿಗೆ ಸವಲತ್ತುಗಳನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದರು.ತಾಲೂಕಿನಲ್ಲಿ ಸುಮಾರು 25 ಸಾವಿರ ಜನರನ್ನು ಸೇರಿಸಿ ಅದ್ಧೂರಿಯಾಗಿ ನಡೆಸಲಾಗುವುದು. ವಾಲ್ಮೀಕಿ ಅಭಿವೃದ್ಧಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಬೋರ್‌ವೆಲ್, ನೇರಸಾಲ ಹಾಗೂ ವಿದ್ಯಾಭ್ಯಾಸಕ್ಕಾಗಿ ಸಾಲ ಸೌಲಭ್ಯಗಳನ್ನು ನೀಡಲಾಗುವುದು ಇದೇ ವೇಳೆಯಲ್ಲಿ ತಾಲೂಕಿನಲ್ಲಿ ಅತ್ಯಂತ ಹೆಚ್ಚು ಅಂಕಗಳನ್ನು ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು. ಅ. 17ರಂದು ಕಡ್ಡಾಯವಾಗಿ ಎಲ್ಲ ಕಚೇರಿಗಳಲ್ಲಿ ವಾಲ್ಮೀಕಿ ಜಯಂತಿ ಆಚರಿಸತಕ್ಕದ್ದು, ಇದ್ದರೆ ಅಂತಹ ಇಲಾಖೆ ಅಧಿಕಾರಿಗಳ ವಿರುದ್ಧ ಸೃಷ್ಟಿ ಕ್ರಮವನ್ನು ಕೈಗೊಳ್ಳಲಾಗುವುದು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಚಾಮರಾಜನಗರ ಸಂಸದರು, ಸಚಿವರಾದ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ಸಚಿವರು ಭಾಗವಹಿಸಲಿದ್ದಾರೆ. ಪ್ರತಿಯೊಂದು ಇಲಾಖೆಯವರು ವಾಲ್ಮೀಕಿ ಜಯಂತಿಗೆ ಸಂಬಂಧಿಸಿದಂತೆ ಮಾಡಬೇಕು. ಎಚ್.ಡಿ. ಕೋಟೆ ಪಟ್ಟಣದಲ್ಲಿ ನಿರ್ಮಾಣಗೊಳ್ಳುತ್ತಿರುವ ವಾಲ್ಮೀಕಿ ಭವನಕ್ಕೆ ಭವನವು ಸಂಪೂರ್ಣಗೊಳ್ಳಲು ಅವಶ್ಯವಿರುವ ಹಣವನ್ನು ಬಿಡುಗಡೆಗೊಳಿಸಲಾಗಿದೆ. ಮುಖ್ಯಮಂತ್ರಿಗಳು ತಾಲೂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಾಲೂಕಿನ ಸಮಸ್ಯೆಗಳು ಹಾಗೂ ಅವಶ್ಯವಿರುವ ಹಣಕಾಸು ನೆರವು ನೀಡಬೇಕೆಂದು ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು. ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ಅಧ್ಯಕ್ಷ ಹಾಗೂ ತಹಸೀಲ್ದಾರ್ ಶ್ರೀನಿವಾಸ್, ಸರಗೂರು ತಹಸೀಲ್ದಾರ್ ಬೇಗಂ, ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್, ಮುಖಂಡರಾದ ಪುರಸಭೆಯ ಸದಸ್ಯ ಎಚ್.ಸಿ. ನರಸಿಂಹಮೂರ್ತಿ, ಜಿಪಂ ಮಾಜಿ ಸದಸ್ಯರಾದ ಎಚ್.ಸಿ. ಮಂಜುನಾಥ್, ಚಿಕ್ಕವೀರ ನಾಯಕ, ತಾಲೂಕು ನಾಯಕ ಸಮಾಜದ ಅಧ್ಯಕ್ಷ ಶಂಭುಲಿಂಗ ನಾಯಕ, ಪರಶಿವಮೂರ್ತಿ, ತಾಪಂ ಮಾಜಿ ಸದಸ್ಯ ಅಂಕಪ್ಪ, ಮನಸಿರಿ ಉಮೇಶ್, ಸ್ವಾಮಿ, ತಿಮ್ಮಯ್ಯ, ಮಾದಪ್ಪ, ಗುಣಪಾಲ್, ತಾಲೂಕು ನಾಯಕ ಸಮಾಜದ ಮುಖಂಡರು, ಪದಾಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದರು.