ದಾವಣಗೆರೆ: ಜಿಲ್ಲೆಯಲ್ಲಿ ಜೂನ್ 16 ರ ವೇಳೆಗೆ ಒಟ್ಟು 14,99,282 ಮತದಾರರಿದ್ದು, ಇವರಿಗೆ ಸಂಬಂಧಿಸಿದ ಎನ್ಯುಮರೇಷನ್ ಫಾರ್ಮ್‌ಗಳನ್ನು ಮುದ್ರಿಸಿ ಬಿಎಲ್‌ಒಗಳಿಗೆ ವಿತರಿಸಲಾಗಿದೆ. ಜಿಲ್ಲಾದ್ಯಂತ ಜೂನ್ 6ರಿಂದ ಜುಲೈ 29ರ ಅವಧಿಯಲ್ಲಿ ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಇದೇ ಅವಧಿಯಲ್ಲಿ ಸಂಗ್ರಹಿಸಿದ ನಮೂನೆಗಳ ಗಣಕೀಕರಣ ಕಾರ್ಯವೂ ಪ್ರಗತಿಯಲ್ಲಿದೆ.
ವಿಧಾನಸಭಾ ಕ್ಷೇತ್ರವಾರು ಹಂಚಿಕೆ- ಪ್ರಗತಿ ವಿವರ:ಜಿಲ್ಲೆಯ ಒಟ್ಟು 14,99,282 ಮತದಾರರ ಪೈಕಿ ಬಿಎಲ್‌ಓಗಳು ಇದುವರೆಗೆ ಒಟ್ಟು 14,06,472 ಎನ್ಯುಮರೇಷನ್ ನಮೂನೆಗಳನ್ನು ವಿತರಿಸಿದ್ದು, 1,54,504 ನಮೂನೆಗಳನ್ನು ಗಣಕೀಕರಿಸಿದ್ದಾರೆ.
103-ಜಗಳೂರು: ಒಟ್ಟು 2,00,836 ಮತದಾರರಿದ್ದು, 1,88,446 ನಮೂನೆಗಳನ್ನು ವಿತರಿಸಲಾಗಿದ್ದು, 18,003 ನಮೂನೆಗಳನ್ನು ಗಣಕೀಕರಿಸಲಾಗಿದೆ.105-ಹರಿಹರ: ಒಟ್ಟು 2,11,023 ಮತದಾರರಿದ್ದು, 2,06,550 ನಮೂನೆಗಳನ್ನು ವಿತರಿಸಲಾಗಿದ್ದು, 32,630 ನಮೂನೆಗಳನ್ನು ಗಣಕೀಕರಿಸಲಾಗಿದೆ.
106-ದಾವಣಗೆರೆ ಉತ್ತರ: ಒಟ್ಟು 2,58,718 ಮತದಾರರಿದ್ದು, 2,44,948 ನಮೂನೆಗಳನ್ನು ವಿತರಿಸಲಾಗಿದ್ದು, 7,120 ನಮೂನೆಗಳನ್ನು ಗಣಕೀಕರಿಸಲಾಗಿದೆ.
107-ದಾವಣಗೆರೆ ದಕ್ಷಿಣ : ಒಟ್ಟು 2,27,996 ಮತದಾರರಿದ್ದು, 194,785 ನಮೂನೆಗಳನ್ನು ವಿತರಿಸಲಾಗಿದ್ದು, 5,085 ನಮೂನೆಗಳನ್ನು ಗಣಕೀಕರಿಸಲಾಗಿದೆ.
108-ಮಾಯಕೊಂಡ: ಒಟ್ಟು 197,048 ಮತದಾರರಿದ್ದು, 196,486 ನಮೂನೆಗಳನ್ನು ವಿತರಿಸಲಾಗಿದ್ದು, 42,785 ನಮೂನೆಗಳನ್ನು ಗಣಕೀಕರಿಸಲಾಗಿದೆ.109-ಚನ್ನಗಿರಿ ಒಟ್ಟು 2,03,628 ಮತದಾರರಿದ್ದು, 192,838 ನಮೂನೆಗಳನ್ನು ವಿತರಿಸಲಾಗಿದ್ದು, 36,531 ನಮೂನೆಗಳನ್ನು ಗಣಕೀಕರಿಸಲಾಗಿದೆ.
110- ಹೊನ್ನಾಳಿ ಒಟ್ಟು 2,00,033 ಮತದಾರರಿದ್ದು, 182,419 ನಮೂನೆಗಳನ್ನು ವಿತರಿಸಲಾಗಿದ್ದು, 12,350 ನಮೂನೆಗಳನ್ನು ಗಣಕೀಕರಿಸಲಾಗಿದೆ. ಸ್ಥಳಾಂತರ, ಮರಣ, ದ್ವಿಪ್ರತಿ ಮತದಾರರ ಗುರುತಿಸುವಿಕೆ ಪ್ರಗತಿ:ಜೂನ್ 6 ರಿಂದ ಜಿಲ್ಲೆಯಲ್ಲಿ ಮತದಾರರ ಎನ್ಯುಮರೇಷನ್ ಫಾರ್ಮ್ಸ್ ಹಂಚಿಕೆ ಹಾಗೂ ಮಾಹಿತಿ ಸಂಗ್ರಹಣೆಯ ವೇಳೆ ಒಟ್ಟು 1,707 ವಿವಿಧ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಒಟ್ಟು 30 ನಮೂನೆಗಳು ಸಂಗ್ರಹವಾಗದ/ಗೈರು ಹಾಜರಿ ಪ್ರಕರಣಗಳಾಗಿದ್ದು, 641 ಶಾಶ್ವತ ವಲಸೆ, 751 ಮರಣ ಹಾಗೂ 271 ದ್ವಿಪ್ರತಿ ಪ್ರಕರಣಗಳಾಗಿವೆ.
ಜಗಳೂರು ಕ್ಷೇತ್ರದಲ್ಲಿ 122 ಪ್ರಕರಣಗಳನ್ನು ಗುರುತಿಸಲಾಗಿದ್ದು (2 ಗೈರು, 31 ಶಾಶ್ವತ ವಲಸೆ, 47 ಮರಣ, 40 ದ್ವಿಪ್ರತಿ, 2 ಇತರೆ), ಹರಿಹರ ಕ್ಷೇತ್ರದಲ್ಲಿ 149 ಪ್ರಕರಣಗಳು (2 ಗೈರು, 48 ಶಾಶ್ವತ ವಲಸೆ, 71 ಮರಣ, 26 ದ್ವಿಪ್ರತಿ, 2 ಇತರೆ), ದಾವಣಗೆರೆ ಉತ್ತರ ಕ್ಷೇತ್ರದಲ್ಲಿ 246 ಪ್ರಕರಣಗಳು (5 ಗೈರು, 98 ಶಾಶ್ವತ ವಲಸೆ, 112 ಮರಣ, 31 ದ್ವಿಪ್ರತಿ), ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 235 ಪ್ರಕರಣಗಳು (6 ಗೈರು, 123 ಶಾಶ್ವತ ವಲಸೆ, 60 ಮರಣ, 44 ದ್ವಿಪ್ರತಿ, 2 ಇತರೆ), ಮಾಯಕೊಂಡ ಕ್ಷೇತ್ರದಲ್ಲಿ 337 ಪ್ರಕರಣಗಳು (4 ಗೈರು, 113 ಶಾಶ್ವತ ವಲಸೆ, 174 ಮರಣ, 45 ದ್ವಿಪ್ರತಿ,1 ಇತರೆ), ಚನ್ನಗಿರಿ ಕ್ಷೇತ್ರದಲ್ಲಿ 386 ಪ್ರಕರಣಗಳು (10 ಗೈರು, 139 ಶಾಶ್ವತ ವಲಸೆ, 167 ಮರಣ, 63 ದ್ವಿಪ್ರತಿ, 7 ಇತರೆ) ಹಾಗೂ ಹೊನ್ನಾಳಿ ಕ್ಷೇತ್ರದಲ್ಲಿ ಒಟ್ಟು 232 ಪ್ರಕರಣಗಳ (1 ಗೈರು, 89 ಶಾಶ್ವತ ವಲಸೆ, 120 ಮರಣ, 22 ದ್ವಿಪ್ರತಿ) ಗುರುತಿಸಿದೆ ಎಂದು ತಿಳಿಸಿದರು.ಪತ್ರಿಕಾಗೋಷ್ಠಿಗೂ ಮುನ್ನ ವಿವಿಧ ರಾಷ್ಟ್ರೀಯ ಪಕ್ಷಗಳೊಂದಿಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಬಿ.ಎಲ್.ಎ.ಗಳನ್ನು ನೇಮಕ ಮಾಡಿದ್ದು ಎನ್ಯುಮರೇಷನ್ ಫಾರಂಗಳನ್ನು ನಮೂದಿಸಿ ಬಿ.ಎಲ್.ಒ.ಗಳಿಗೆ ನೀಡಲು ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾರ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಸಹಕಾರ ನೀಡುವುದಾಗಿ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದರು.
- - -