A progress review meeting has been organized at the Zilla Panchayat Hall on August 13 at 11:00 AM, under the chairmanship of Amrutrao Chimkode, Chairman of the District Guarantee Schemes Implementation Committee.

ಬೀದರ್‌: ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ್‌ ಚಿಮಕೋಡೆ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆಯನ್ನು ಆಗಸ್ಟ್ 13 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಬೀದರ ಜಿಲ್ಲಾ ಪಂಚಾಯತ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಸಿಇಒ ಡಾ.ಗಿರೀಶ್ ದಿಲೀಪ್ ಬದೋಲೆ ತಿಳಿಸಿದ್ದಾರೆ. ಬೀದರ್‌ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಅಂದು ಜಿಲ್ಲಾ ಮಟ್ಟದ ಸಭೆ ನಡೆಯಲಿದೆ. ಬೀದರ್‌ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷತೆಯಲ್ಲಿ ಅಂದು ಈ ಪ್ರಗತಿ ಪರಿಶೀಲನಾ ಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ತಾವು ಖುದ್ದಾಗಿ ಉಪಸ್ಥಿತರಿರುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.