ಸಾರಾಂಶ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಮಕ್ಕಳು ಸಮಾಜದಲ್ಲಿ ಪ್ರಗತಿ ಹೊಂದಬೇಕಾದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಅಭ್ಯಾಸದತ್ತ ಗಮನಹರಿಸಬೇಕು. ಬರುವಂತ ದಿನಗಳಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂದು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಂ.ಬಿ.ಯಡ್ರಾಮಿ ಹೇಳಿದರು.ತಾಲೂಕಿನ ಕೆರೂಟಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಟ್ಯೂಷನ್ ಕ್ಲಾಸ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಕ್ಕಳ ಶೈಕ್ಷಣಿಕ ಮಟ್ಟ ಹೆಚ್ಚಿಸಲು 10ನೇ ತರಗತಿಯ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ನೀಡುವ ಮೂಲಕ ವಿದ್ಯಾದಾನವನ್ನು ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ. ಅದರ ಸದುಪಯೋಗಪಡಿಸಿಕೊಳ್ಳಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ವಲಯದ ಮೇಲ್ವಿಚಾರಕ ಗಿರೀಶಕುಮಾರ ಮಾತನಾಡಿ, ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಮತ್ತು ಮಾತೃಶ್ರೀ ಹೇಮಾವತಿ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ತಾಲೂಕಿನಲ್ಲಿ ಮಹಿಳೆಯರ ಸಬಲೀಕರಣ ಮತ್ತು ಆರ್ಥಿಕ ಸ್ವಾವಲಂಬನೆ,ಗ್ರಾಮಾಭ್ಯುದಯ, ಆರ್ಥಿಕ ಸಬಲತೆ, ಕೃಷಿ, ಸಾಮಾಜಿಕ ಕ್ಷೇತ್ರ, ಜನರ ಜೀವನಮಟ್ಟ ಸುಧಾರಣೆ ಸೇರಿದಂತೆ ಹಲವು ಸಮಾಜಮುಖಿ ಚಿಂತನೆಗಳೊಂದಿಗೆ ಕಾರ್ಯ ನಿರ್ವಹಿಸುತ್ತ ಇದುವರೆಗೆ ಹಲವು ಪ್ರಗತಿ ಸಾಧಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಹೊಸ ಯೋಜನೆ ಜಾರಿಗೆ ತಂದಿದ್ದು ಸರ್ಕಾರಿ ಶಾಲೆಯ ಅದರಲ್ಲೂ ಬಡಮಕ್ಕಳಿಗೆ ಅನುಕೂಲ ಕಲ್ಪಿಸಲಾಗಿದೆ. ಇದರ ಸದುಪಯೋಗ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪತ್ರಕರ್ತ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಅವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಶೈಕ್ಷಣಿಕ, ಆರ್ಥಿಕ, ಸಾಂಸ್ಕೃತಿಕ,ಸಾಮಾಜಿಕ ಹಾಗೂ ಮಹಿಳೆಯರ ಸಾವಲಂಬಿ ಬದುಕಿಗಾಗಿ ಹಲವಾರು ಯೋಜನೆಗಳಿಂದ ದೇಶದಲ್ಲಿಯೇ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗಾಗಿ ಉಚಿತ ಟ್ಯೂಷನ್ ಕ್ಲಾಸ್ ಪ್ರಾರಂಭದ ಜೊತೆ ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಅನುಕೂಲ ಆಗುವ ದೃಷ್ಟಿಯಿಂದ ಕನ್ನಡ ಪ್ರಭ ಪತ್ರಿಕೆಯ ವಿದ್ಯಾರ್ಥಿ ಆವೃತ್ತಿ ಪತ್ರಿಕೆಯ ಶೈಕ್ಷಣಿಕ ದಾನಿಗಳಾದ ಗ್ರಾಪಂ ಅಧ್ಯಕ್ಷೆ ಸತ್ಯೆವ್ವ ಪರಶುರಾಮ ದೊಡಮನಿ ಅವರು ಈ ಶಾಲೆಗೆ ಸುಮಾರು 50 ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸುತ್ತಿದ್ದಾರೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಂಡು ಈ ಬಾರಿ ರಾಜ್ಯದಲ್ಲಿ ಪ್ರಥಮ ್‍ರ್ಯಾಂಕ್ ನಿಮ್ಮದಾಗಲಿ ಎಂದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ವಿರೂಪಾಕ್ಷಪ್ಪ ಮಜ್ಜಗಿ, ಉಪಾಧ್ಯಕ್ಷರಾದ ಮಲ್ಕಪ್ಪ ಭಜಂತ್ರಿ, ಶಾಲಾ ಶಿಕ್ಷಕರುಗಳಾದ ಎಸ್.ಎಸ್.ಶಿಂಧೆ, ಎನ್.ವ್ಹಿ. ಪತ್ತಾರ, ಜಿ.ಎಸ್.ಹೊಸಟ್ಟಿ, ಪಿ.ಆರ್.ಜಾಧವ ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕ ಸಂತೋಷಕುಮಾರ ಗುಮಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನ ವಿಕಾಸ ಸಮನ್ವಯ ಅಧಿಕಾರಿಗಳಾದ ದೇವಿಕಾ ಅವರು ಸ್ವಾಗತಿಸಿ, ವಂದಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))