Progress Review Meeting for the Five Guarantee Schemes
*ಅಧಿಕಾರಿಗಳಿಂದ ಮಾಹಿತಿ
ಗ್ರಾಮೀಣ ಬಡ ಜನರಿಗೆ ಯೋಜನೆಗಳನ್ನು ತಲುಪಿಸಿ: ಬಸವರಾಜ ಶರಭೈ । ಕೃಷಿಗಾಗಿ ವಿದ್ಯುತ್ ಸೂಕ್ತವಾಗಿ ಪೂರೈಸಲು ಸೂಚನೆ----------
ಕನ್ನಡಪ್ರಭ ವಾರ್ತೆ ಯಾದಗಿರಿಯಾದಗಿರಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಬಸವರಾಜಪ್ಪ ಬಾಗ್ಲಿ ರಾಮಸಮುದ್ರ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಭೈ ಮಾತನಾಡಿ, ಗ್ರಾಮೀಣ ಪ್ರದೇಶದ ಬಡ ಜನರಿಗೆ ಅರ್ಹ ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸುವಂತೆ ನೆರೆದಿದ್ದವರಲ್ಲಿ ಹೇಳಿದರು.ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿಗಳನ್ನು ನೀಡಿದರು. ಗ್ಯಾರಂಟಿ ಯೋಜನೆ ಸದಸ್ಯ ಹಣಮಂತ ಲಿಂಗೇರಿ ಮಾತನಾಡಿ, ಆಹಾರಧಾನ್ಯ ಅಂಗಡಿಗಳಿಗೆ ಗುಣಮಟ್ಟದ ಆಹಾರ ಸರಬರಾಜು ಮಾಡುವಂತೆ ಹಾಗೂ ಆಹಾರಧಾನ್ಯಗಳ ಕಾಳಸಂತೆಯಲ್ಲಿ ಮಾರಾಟವಾಗದಂತೆ ಕ್ರಮ ವಹಿಸಲು ತಿಳಿಸಿದರು. ಅಧಿಕಾರಿಗಳು ಪ್ರತಿಕ್ರಿಯಿಸಿ ಆಹಾರಧಾನ್ಯ ಅಂಗಡಿಗಳನ್ನು ಮೇಲಿಂದ ಮೇಲೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿದರು.
ಜೆಸ್ಕಾಂ ಅಧಿಕಾರಿಗಳು ಮಾತನಾಡಿ, ಗೃಹಜ್ಯೋತಿ, ಭಾಗ್ಯಜ್ಯೋತಿ, ಕುಟೀಲ ಜ್ಯೋತಿ ಫಲಾನುಭವಿಗಳ ಮಾಹಿತಿ ನೀಡುವುದರೊಂದಿಗೆ ರಾಜ್ಯದ ಆಧಾರ್ ಕಾರ್ಡ್ ಹೊಂದಿದ ಎಲ್ಲ ಫಲಾನುಭವಿಗಳಿಗೆ ಈ ಯೋಜನೆಯಡಿಯಲ್ಲಿ ಪ್ರಯೋಜನ ಪಡೆಯುತಿದ್ದಾರೆಂದು ತಿಳಿಸಿದರು. ರೈತರಿಗೆ ಅನುಕೂಲವಾಗುವಂತೆ ವಿದ್ಯುತ್ ಸರಬರಾಜು ಮಾಡುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು.ಕೌಶಲ್ಯ ಅಭಿವೃದ್ಧಿ ಉದ್ದಿಮೆಶೀಲತೆ ಮತ್ತು ಜೀವನೋಪಾಯ ಇಲಾಖೆಯ ಯುವನಿಧಿ ಯೋಜನೆಯಡಿಯಲ್ಲಿ ಪದವೀಧರ ಡಿಪ್ಲೋಮಾ, ಎಸ್ಸಿ/ಎಸ್ಟಿ ಪದವೀಧರರಿಗೆ ಸರ್ಕಾರದ ಸಹಾಯ ಮಂಜೂರಾಗಿರುವ ಕುರಿತು ತಿಳಿಸಲಾಯಿತು. ಸಾರಿಗೆ ಇಲಾಖೆಯ ಶಕ್ತಿ ಯೋಜನೆಯಡಿ ತಾಲೂಕಿನ ಮಹಿಳೆಯರು ಉಚಿತ ಬಸ್ ಪ್ರಯಾಣ ಸೌಲಭ್ಯ ಪಡೆಯುತಿದ್ದಾರೆ. ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಸೌಕರ್ಯ ಇದೆ. ಮಹಿಳೆಯರ ಮತ್ತು ಪುರುಷರ ಶೌಚಾಲಯ ಉತ್ತಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಮೈನುದ್ದಿನ್ ಕಡೇಚೂರು ಮಾತನಾಡಿ, ಯಾದಗಿರಿ ರಾಯಚೂರು ವೇಗದೂತ ಬಸ್ಗಳದ್ದೇ ಕಡೇಚೂರು ಗ್ರಾಮದಲ್ಲಿ 40 ಕಂಪನಿಗಳು ಇರುವುದರಿಂದ ಸಾರ್ವಜನಿಕರಿಗೆ ಅನೂಕುಲವಾಗಲು ಬಸ್ ನಿಲ್ಲಿಸುವಂತೆ ಮನವಿ ಮಾಡಿಕೊಂಡರು. ಮುಂದಿನ ದಿನಗಳಲ್ಲಿ ಬಸ್ ಗಳನ್ನು ನಿಲ್ಲಿಸಲು ಕ್ರಮ ವಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಮುಖ್ಯಸ್ಥ ಮಹಿಳೆಯರಿಗೆ ಮಾಸಿಕ 2000 ರು. ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮ ಮಾಡಲಾಗುವುದು. ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂದರು. ಬಸವರಾಜಪ್ಪ ಬಾಗ್ಲಿ ಅವರು ಗ್ಯಾರಂಟಿ ಯೋಜನೆಯ ಸದಸ್ಯರಿಗೂ ಮತ್ತು ಅಧಿಕಾರಿಗಳಿಗೂ ಅಭಿನಂದನೆ ಸಲ್ಲಿಸಿದರು.
ಪಂಚ ಗ್ಯಾರಂಟಿ ಯೋಜನೆಯ ಇಲಾಖಾ ಅಧಿಕಾರಿಗಳು, ವ್ಯವಸ್ಥಾಪಕ ಶಿವರಾಯ, ವಿಷಯ ನಿರ್ವಾಹಕರಾದ ಸಾಯಿಕುಮಾರ್, ಅನ್ಸರ್ ಪಟೇಲ್ ತಾಲೂಕು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.------ಫೋಟೊ---------
25ವೈಡಿಆರ್1ಯಾದಗಿರಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಬಸವರಾಜಪ್ಪ ಬಾಗ್ಲಿ ರಾಮಸಮುದ್ರ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಬಸವರಾಜ ಶರಭೈ, ಶಿವರಾಯ, ಸಾಯಿಕುಮಾರ್ ಇತರರಿದ್ದರು.