ಅನುದಾನ ಬಳಸಿ ಅಭಿವೃದ್ಧಿಗೆ ಮುಂದಾಗಬೇಕು

| Published : Dec 06 2024, 08:56 AM IST

ಅನುದಾನ ಬಳಸಿ ಅಭಿವೃದ್ಧಿಗೆ ಮುಂದಾಗಬೇಕು
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯ ಮಂತ್ರಿಗಳು ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 502 ಕೋಟಿ ಅನುದಾನದಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದ್ದು

ಕನ್ನಡಪ್ರಭ ವಾರ್ತೆ ಮೈಸೂರು

ವರುಣ ವಿಧಾನಸಭಾ ಕ್ಷೇತ್ರ ಮುಖ್ಯಮಂತ್ರಿಗಳ ಕ್ಷೇತ್ರವಾಗಿದ್ದು, ಅತ್ಯಂತ ಹೆಚ್ಚಿನ ಕಾಳಜಿ ವಹಿಸಿ ಬಂದಿರುವ ಅನುದಾನವನ್ನು ನಿಗದಿತ ಅವಧಿಯಲ್ಲಿ ಬಳಕೆ ಮಾಡಿ, ಕ್ಷೇತ್ರದ ಅಭಿವೃದ್ಧಿಗೆ ತೊಡಗಬೇಕು ಎಂದು ವಿಧಾನಪರಿಷತ್ತು ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ವರುಣ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ಅವರು, ಮುಖ್ಯ ಮಂತ್ರಿಗಳು ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 502 ಕೋಟಿ ಅನುದಾನದಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದ್ದು, ಈ ಕಾಮಗಾರಿಗಳನ್ನು ನಿಗದಿತ ಅವಧಿ ಒಳಗೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಸಣ್ಣ ನೀರಾವರಿ ಇಲಾಖೆಯಿಂದ ಒಟ್ಟಾರೆ 21.60 ಕೋಟಿಯಷ್ಟು ಕಾಮಗಾರಿಗಳು ವರುಣ ಕ್ಷೇತ್ರದಲ್ಲಿ ಪ್ರಗತಿಯಲ್ಲಿದ್ದು, ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಪೂರ್ಣಗಳಿಸಬೇಕು. ಗ್ರಾಮೀಣ ಕುಡಿಯುವ ನೀರು ಯೋಜನೆಯಿಂದ ತಾಂಡವಪುರ ಹಾಗೂ 31 ಗ್ರಾಮ ಸೇರಿದಂತೆ ಒಟ್ಟು 123.30 ಕೋಟಿ ರು. ಅನುದಾನದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದಲ್ಲಿ ಪೂರ್ಣಗೊಳಿಸಲು ಅವರು ಹೇಳಿದರು.

ಗ್ಯಾರಂಟಿ ಯೋಜನೆಗಳ ಕಾರ್ಯಕ್ರಮಗಳು ಸೇರಿದಂತೆ 35 ಇಲಾಖೆಗಳ ಪ್ರಗತಿ ವರದಿಗಳನ್ನು ಪರಿಶೀಲಿಸಿ, ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ವರುಣ ಕ್ಷೇತ್ರದ 35 ಗ್ರಾಮ ಪಂಚಾಯತ್ ಪಿಡಿಒಗಳಿಗೆ ವಸತಿ ಯೋಜನೆ, ನರೇಗಾ, ಕಂದಾಯ ವಸೂಲಿ ಹಾಗೂ ಇತರೆ ಯೋಜನೆಗಳ ಬಗ್ಗೆ ನಿಗದಿ ಪಡಿಸಿರುವ ಗುರಿಗೆ ಸಾಧನೆ ಮಾಡಿ ಪ್ರಗತಿ ಸಾಧಿಸಲು ಅವರು ತಿಳಿಸಿದರು.

ಸಂಸದ ಸುನಿಲ್ ಬೋಸ್, ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಹಾಗೂ ಅಧಿಕಾರಿಗಳು ಇದ್ದರು.