25ರಂದು ಪ್ರಗತಿ ಪರಿಶೀಲನಾ ಸಭೆ

| Published : Oct 22 2024, 12:01 AM IST

ಸಾರಾಂಶ

Progress review meeting on 25th

ಯಾದಗಿರಿ: ಅ.25ರಂದು ಶುಕ್ರವಾರ ಜಿಲ್ಲಾ ಮಟ್ಟದ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಜಿಲ್ಲಾ ಪಂಚಾಯ್ತಿ ಆಡಳಿತಾಧಿಕಾರಿಗಳು ಮತ್ತು ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖಿಕ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಛ್ ಇಲಾಖೆ ಮತ್ತು ಯೋಜನಾ, ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಈ ಸಭೆಗೆ 2024ರ ಸೆಪ್ಟೆಂಬರ್ ಅಂತ್ಯದವರೆಗಿನ ಪ್ರಗತಿ ವರದಿಯನ್ನು ಅ.22ರಂದು ಮಂಗಳವಾರ ಮಧ್ಯಾಹ್ನ 12 ಗಂಟೆಯ ಒಳಗೆ 5 ಪ್ರತಿಯನ್ನು (ಲ್ಯಾಂಡ್ ಸ್ಕೇಪ್ ಎ4 ಪೇಪರ್‌ನಲ್ಲಿ) ಪ್ರಗತಿ ಪರಿಶೀಲನಾ ಸಭೆಗೆ ಮಾಹಿತಿ ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಅವರು ತಿಳಿಸಿದ್ದಾರೆ.