ಅಲ್ಪಸಂಖ್ಯಾತರ ಯೋಜನೆಗಳ ಪ್ರಗತಿ ಪರಿಶೀಲನೆ

| Published : Jul 07 2025, 11:48 PM IST

ಸಾರಾಂಶ

ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರವು ಅನೇಕ ಅಭಿವೃದ್ಧಿ ಕಾರ್ಯಕ್ರಮ ಜಾರಿಗೆ ತರುತಿದ್ದು, ಅಧಿಕಾರಿಗಳು ಅದನ್ನು ಸಾಮಾನ್ಯ ಜನರಿಗೆ ತಲುಪಿಸುವ ಕೆಲಸವನ್ನು ಮಾಡಬೇಕು. ನೂತನವಾಗಿ ಸಮಿತಿ ರಚಿಸಿದ್ದು ಅವರೊಂದಿಗೂ ಅಧಿಕಾರಿಗಳು ಸೇರಿ ಯೋಜನೆಗಳ ಮಾಹಿತಿ ಹಂಚಿಕೊಂಡು ಅವರ ಸಹಯೋಗದೊಂದಿಗೆ ಕಾರ್ಯಕ್ರಮ ಅನುಷ್ಠಾನ ಗೊಳಿಸಬೇಕು.

ಕನ್ನಡಪ್ರಭ ವಾರ್ತೆ ಕೋಲಾರಅಲ್ಪಸಂಖ್ಯಾತರ ಸಮುದಾಯಕ್ಕಾಗಿ ಜಾರಿಗೊಳಿಸಲಾಗಿರುವ ಪ್ರಧಾನಮಂತ್ರಿ ೧೫ ಅಂಶದ ಕಾರ್ಯಕ್ರಮಗಳ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಧಿಕಾರಿಗಳ ಮಟ್ಟದ ಸಭೆಯಲ್ಲಿ ಮಾತನಾಡಿ, ವಿವಿಧ ಇಲಾಖೆಗಳಡಿ ಅಲ್ಪಸಂಖ್ಯಾತರಿಗಾಗಿ ಇರುವ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ನಿರ್ದೇಶನ ನೀಡಿದರು.ಕೇಂದ್ರದ ವಿವಿಧ ಯೋಜನೆ

ಶೈಕ್ಷಣಿಕ ಸೌಲಭ್ಯ ಕಲ್ಪಿಸುವುದು, ತಂತ್ರಜ್ಞಾನ ತರಬೇತಿ ಮೂಲಕ ಕೌಶಲ್ಯ ಕಾರ್ಯಕ್ರಮ ತಲುಪಿಸುವುದು, ಆರ್ಥಿಕ ಚಟುವಟಿಕೆ ಬಲಪಡಿಸಲು ಸಾಲ ಸೌಲಭ್ಯ ಕಲ್ಪಿಸುವುದು. ನಾಗರೀಕ ಸೇವೆಗಳ ಬಗ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು, ವಸತಿ ಯೋಜನೆ, ಅಲ್ಪಸಂಖ್ಯಾತರ ಜೀವನ ಮಟ್ಟ ಸುಧಾರಿಸಲು ವಸತಿ ಯೋಜನೆ ಕಲ್ಪಿಸುವುದು. ಹೀಗೆ ಹಲವು ಕಾರ್ಯಕ್ರಮಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವಂತೆ ನಿರ್ದೇಶನ ನೀಡಿದರು.ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡಿ, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರವು ಅನೇಕ ಅಭಿವೃದ್ಧಿ ಕಾರ್ಯಕ್ರಮ ಜಾರಿಗೆ ತರುತಿದ್ದು, ಅಧಿಕಾರಿಗಳು ಅದನ್ನು ಸಾಮಾನ್ಯ ಜನರಿಗೆ ತಲುಪಿಸುವ ಕೆಲಸವನ್ನು ಮಾಡಬೇಕು. ನೂತನವಾಗಿ ಸಮಿತಿ ರಚಿಸಿದ್ದು ಅವರೊಂದಿಗೂ ಅಧಿಕಾರಿಗಳು ಸೇರಿ ಯೋಜನೆಗಳ ಮಾಹಿತಿ ಹಂಚಿಕೊಂಡು ಅವರ ಸಹಯೋಗದೊಂದಿಗೆ ಕಾರ್ಯಕ್ರಮ ಅನು?ನ ಗೊಳಿಸಬೇಕು ಎಂದು ತಿಳಿಸಿದರು.ಮಹಿಳಾ ಯೋಜನೆಗಳ ಜಾರಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿ ಮಾಹಿತಿ ನೀಡಿ ೧೯೭ ಅಂಗನವಾಡಿ ಕೇಂದ್ರಗಳಿದ್ದು, ಇಲಾಖೆಯಿಂದ ಪೂರಕ ಪೌಷ್ಠಿಕ ಆಹಾರ ಕಲ್ಪಿಸುವುದು, ಭಾಗ್ಯಲಕ್ಷ್ಮಿ, ಗೃಹಲಕ್ಷ್ಮಿ ಸೇರಿದಂತೆ ಹಲವು ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕಾರಿ ಶಿರಿನ್ ತಾಜ್ ಮಾಹಿತಿ ನೀಡಿ, ಶ್ರಮಶಕ್ತಿ, ಸ್ವಾವಲಂಭಿ ಸಾರಥಿ, ವೃತ್ತಿ ಪ್ರೋತ್ಸಾಹ, ಅರಿವು, ವಿದೇಶಿ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ, ನೇರಸಾಲ ಯೋಜನೆ, ಉನ್ನತ ಶಿಕ್ಷಣಕ್ಕೆ ಸಾಲ ಯೋಜನೆ ಹೀಗೆ ಹಲವು ಯೋಜನೆ ತಲುಪಿಸಲಾಗುತ್ತಿದೆ. ಕಳೆದ ಸಾಲಿನಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ವಿದೇಶಿ ವಿದ್ಯಾಭ್ಯಾಸಕ್ಕಾಗಿ ಕಳುಹಿಸಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.

ವಿದ್ಯಾರ್ಥಿಗಳಿಗೆ ಸಹಾಯಧನ

ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕಿ ಅಂಬಿಕಾ ಮಾತನಾಡಿ, ಸ್ಥಳೀಯ ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯಧನ ನೀಡಲಾಗಿದೆ, ಶಸ್ತ್ರ ಚಿಕಿತ್ಸೆಗೆ ಸಹಾಯಧನ, ವೈದ್ಯಕೀಯ ಧನ, ಲಘು ವಾಹನ ಚಾಲನಾ ತರಬೇತಿ,ಇತರೆ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಡಿಡಿಪಿಐ ಕೃಷ್ಣಮೂರ್ತಿ, ಸಮಿತಿಯ ಸದಸ್ಯರಾದ ಶಪೀಕ್ ಅಹಮ್ಮದ್, ಇನಾಯತ್ತುಲ್ಲ ರೀಫ್, ಇಂದಿರಾ ಮತಿ, ಶಭೀರ್ ಅಹ್ಮದ್, ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ಮೈಲಾರಪ್ಪ, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪ ನಿರ್ದೇಶಕ ರವಿಚಂದ್ರ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಜೋಶಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿ ಶ್ರೀನಿವಾಸ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ರಮೇಶ್ ಇದ್ದರು.