ಸ್ವಚ್ಛತಾ ಸಂಕಲ್ಪದ ಸಾಕಾರದಿಂದ ಪ್ರಗತಿ

| Published : Oct 03 2024, 01:27 AM IST

ಸಾರಾಂಶ

ದೊಡ್ಡಬಳ್ಳಾಪುರ: ಗಾಂಧೀಜಿಯವರ ಸ್ವಚ್ಛ ಭಾರತದ ಕನಸನ್ನು ಸಾಕಾರಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಮಿಷನ್ ಆರಂಭಿಸಿದ್ದಾರೆ. ಈ ಹಿನ್ನೆಲೆ ಜಯಂತಿಯನ್ನು ದೇಶಾದ್ಯಂತ ಅಭಿಯಾನದ ಮಾದರಿಯಲ್ಲಿ ಆಚರಿಸಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬುಧವಾರ ಆಯೋಜಿಸಿದ್ದ ಸ್ವಚ್ಛ ಭಾರತ ದಿನಾಚರಣೆಗೆ ಅಂಗವಾಗಿ ಸಾಂಕೇತಿಕವಾಗಿ ಕಸವನ್ನು ಸ್ವಚ್ಚಗೊಳಿಸಿ, ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ದೇಶಾದ್ಯಂತ ಸಾರ್ವಜನಿಕ ಆಸ್ತಿ, ರಸ್ತೆ ಮತ್ತು ಸಮಾಜವನ್ನು ಸ್ವಚ್ಛವಾಗಿಡುವುದು ಮತ್ತು ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲ ಉದ್ದೇಶದಿಂದ ಸ್ವಚ್ಛ ಭಾರತ ಅಭಿಯಾನ ಆರಂಭಿಸಲಾಗಿದೆ ಎಂದರು.

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ಸ್ವಚ್ಛತೆಯೇ ಸೇವೆ ಪಾಕ್ಷಿಕವನ್ನು ಆಯೋಜಿಸಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಸೆ. 17 ರಿಂದ ಅ.2 ರವರೆಗೆ ಸೇವಾ ಪಾಕ್ಷಿಕ-2024 ಆಂದೋಲನ ಯಶಸ್ವಿಯಾಗಿ ನಡೆದಿದೆ ಎಂದರು.

ಸ್ವಚ್ಛತಾ ಹೀ ಸೇವಾ ಆಂದೋಲನದಲ್ಲಿ ಸಕ್ರಿಯವಾಗಿ ಭಾಗಿಯಾದ ಜಿಲ್ಲೆಯ ನಗರಸಭೆ, ಪುರಸಭೆಗಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ಶಾಂತಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಗನ್ನಾಥ್, ಕೃಷಿ ಸಮಾಜದ ಅಧ್ಯಕ್ಷ ರವಿ, ರಾಮಚಂದ್ರಪ್ಪ, ಲೋಕೇಶ್, ಮಂಜುನಾಥ್, ಅಪರ ಜಿಲ್ಲಾಧಿಕಾರಿ ಆರ್. ಸುಮಾ, ನಗರಾಭಿವೃದ್ಧಿ ಯೋಜನ ನಿರ್ದೇಶಕ ರಮೇಶ್, ತಹಸೀಲ್ದಾರ್ ಬಾಲಕೃಷ್ಣ ಉಪಸ್ಥಿತರಿದ್ದರು.